ದಸರಾ ಆನೆಗಳ ತೂಕದಲ್ಲಿ ಅರ್ಜುನನೇ ಎಲ್ಲರಿಗಿಂತ ಭಾರ…ಈತನ ತೂಕ ಎಷ್ಟು ಗೊತ್ತೆ..?

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂ ಸವಾರಿಯಲ್ಲಿ ಪಾಲ್ಗೊಳ್ಳಲು ಆಗಮಿಸಿದ ಎರಡನೇ ತಂಡದ ಆನೆಗಳಿಗೆ ಇಂದು, ಗುರುವಾರ ತೂಕ ಮಾಡುವ ಪ್ರಕ್ರಿಯೆ ನಡೆದಿದೆ.
ದಸರಾ ಗಜಪಡೆಗಳ ತೂಕ ಪ್ರಕ್ರಿಯೆಯು ಮೈಸೂರಿನ ಧನ್ವಂತ್ರಿಯಲ್ಲಿನ ವೇ ಬ್ರಿಜ್‌ನಲ್ಲಿ ನಡೆದಿದ್ದು, ಈ ಬಾರಿಯೂ ತೂಕದಲ್ಲಿ ಅರ್ಜನನೇ ಬಲಶಾಲಿ ಎಂದು ನಿರೂಪಿಸಿದ್ದಾನೆ. ಅರ್ಜುನ ಬರೋಬ್ಬರಿ 5885 ಕೆ.ಜಿ ತೂಕ ಹೊಂದಿದ್ದಾನೆ.
ದಸರಾ ಗಜಪಡೆಯ ಕ್ಯಾಪ್ಟನ್ ಅಭಿಮನ್ಯು 5000 ಕೇಜಿ , ಚೈತ್ರ 3235 ಕೇಜಿ , ಭೀಮಾ 4345 ಕೇಜಿ, ಗೋಪಾಲಸ್ವಾಮಿ 5460 ಕೆ.ಜಿ., ಮಹೇಂದ್ರ 4450 ಕೆ.ಜಿ. , ವಿಜಯ 2760 ಕೆ.ಜಿ., ಗೋಪಿ 4670 ಕೆ.ಜಿ. , ಧನಂಜಯ 4890 ಕೆ.ಜಿ. , ಶ್ರೀರಾಮ 4475 ಕೆ.ಜಿ. , ಲಕ್ಷ್ಮೀ 3150 ಕೆ.ಜಿ. , ಸುಗ್ರೀವ 4785 ಕೆ.ಜಿ., ಕಾವೇರಿ 3245 ಕೆ.ಜಿ. ಹಾಗೂ ಈ ಗಜಪಡೆಯಲ್ಲಿ ಕಿರಿಯವನಾಗಿರುವ ಪಾರ್ಥಸಾರಥಿ 3445 ಕೆಜಿ ತೂಕವನ್ನು ಹೊಂದಿವೆ.

ಡಿಸಿಎಫ್ ಡಾ.ವಿ. ಕರಿಕಾಳನ್ ಮಾತನಾಡಿ, ಈ ಬಾರಿ ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳುತ್ತಿರುವ ಮೊದಲು ಮತ್ತು ಎರಡನೇ ತಂಡದ ಆನೆಗಳು ಒಟ್ಟು ಸೇರಿ 14 ಆನೆಗಳನ್ನು ತೂಕ ಮಾಡಿದ್ದೇವೆ, ಎರಡನೇ ತಂಡದ ಎಲ್ಲ ಗಂಡಾನೆಗಳೂ 4000 ದಿಂದ 4600 ಸಾವಿರ ಕೆಜಿ ವರೆಗೂ ಇದ್ದು, ಕಿರಿಯ ವಯಸ್ಸಿನ ಆನೆಯಾಗಿರುವ ಪಾರ್ಥಸಾರಥಿ ಆನೆ 3445 ತೂಕವಿದೆ, ಮೊದಲನೇ ತಂಡದ ಎಲ್ಲ ಆನೆಗಳು ತೂಕದಲ್ಲಿ ಹೆಚ್ಚಾಗಿದ್ದು, ನಮ್ಮ ತಾಲೀಮುಗಳಿಗೂ ಕೂಡ ತುಂಬ ಚೆನ್ನಾಗಿ ಸಹಕರಿಸುತ್ತಿವೆ ಎಂದು ತಿಳಿಸಿದರು.
ಈ ದಿನ ಮೊದಲನೇ ಬಾರಿಗೆ ಎಲ್ಲ 14 ಆನೆಗಳನ್ನು ತೂಕ ಮಾಡುವ ಸಲುವಾಗಿ ಅರಮನೆಯಿಂದ ಹೊರ ಕರೆತಂದಿದ್ದು, ಶ್ರೀರಾಮ ಮತ್ತು ಪಾರ್ಥಸಾರಥಿ ಆನೆಗಳು ಮೊದಲನೇ ತಂಡದ ಆನೆಗಳ ಜೊತೆ ಸೇರಿ ನಿನ್ನೆಯಿಂದಲೇ ತಾಲೀಮಿನಲ್ಲಿ ಭಾಗವಹಿಸಿವೆ. ಸೆ.12 ರಿಂದ ಎಲ್ಲ ಆನೆಗಳು ತಾಲೀಮಿನಲ್ಲಿ ಭಾಗವಹಿಸಲಿವೆ ಎಂದು ತಿಳಿಸಿದರು.

ಪ್ರಮುಖ ಸುದ್ದಿ :-   ಆದಿತ್ಯ ಎಲ್‌1, ಪ್ರೋಬಾ-3 ಉಪಗ್ರಹಗಳ ನೆರವಿನಿಂದ ಸೌರ ಸ್ಫೋಟಗಳ ರಹಸ್ಯ ಬಯಲು ಮಾಡಿದ ವಿಜ್ಞಾನಿಗಳು

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement