ಪ್ರವೀಣ ನೆಟ್ಟಾರು ಕುಟುಂಬಕ್ಕೆ ಸಿಎಂ ಕಚೇರಿಯಲ್ಲಿ ಕೆಲಸ: ಜನಸ್ಪಂದನ ಸಮಾವೇಶದಲ್ಲಿ ಸಿಎಂ ಬೊಮ್ಮಾಯಿ ಘೋಷಣೆ

posted in: ರಾಜ್ಯ | 0

ದೊಡ್ಡಬಳ್ಳಾಪುರ: ರಾಜ್ಯದ ಬಿಜೆಪಿ ಸರ್ಕಾರದ ಮೂರು ವರ್ಷಗಳ ಸಾಧನೆ ಮುಂದಿಟ್ಟುಕೊಂಡು ಬಿಜೆಪಿ ಶಕ್ತಿ ಪ್ರದಶರ್ನಕ್ಕೆ ಮುಂದಾಗಿರುವ ಬಿಜೆಪಿ ಇಂದು ಶನಿವಾರ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ಅದ್ದೂರಿ ಬಿಜೆಪಿ ಜನಸ್ಪಂದನ ಸಮಾವೇಶ ಆಯೋಜನೆ ಮಾಡಿದೆ. ಸುಮಾರು 40 ಎಕರೆ ವಿಸ್ತೀರ್ಣದಲ್ಲಿ ಜನಸ್ಪಂದನ ಸಮಾವೇಶ ಆಯೋಜನೆ ಮಾಡಿದ್ದು, 3 ಲಕ್ಷ ಜನರಿಗೆ ಊಟದ ವ್ಯವಸ್ಥೆ ಮಾಡಲಾಗಿದೆ. ಸಮಾವೇಶದಲ್ಲಿ ಬಿಜೆಪಿ ಮುಂಡರು, ಶಾಸಕರು, ಕೇಂದ್ರ ಸಚಿವೆ ಸ್ಮೃತಿ ಇರಾನಿ ಸೇರಿ ಹಲವು ಪ್ರಮುಖರು ಭಾಗಿಯಾಗಿದ್ದಾರೆ.
ಜನಸ್ಪಂದನ ಸಮಾವೇಶದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಪ್ರವೀಣ್​ ನೆಟ್ಟಾರು ಕುಟುಂಬಕ್ಕೆ ಸಿಎಂ ಕಚೇರಿಯಲ್ಲಿ ಕೆಲಸ ನೀಡುವುದಾಗಿ ಘೋಷಣೆ ಮಾಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಹತ್ಯೆಗೀಡಾಗಿದ್ದ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕುಟುಂಬಕ್ಕೆ ಕೆಲಸ ನೀಡುವುದಾಗಿ ಆಶ್ವಾಸನೆ ನೀಡಿದ್ದಾರೆ.

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189

ದಾಖಲೆಯ ಸಂಖ್ಯೆಯಲ್ಲಿ ಜನ ಸೇರಿದ್ದಕ್ಕೆ ನಿಮಗೆ ಅಭಿನಂದನೆ. ಇಲ್ಲಿಂದ ಇಡೀ ರಾಜ್ಯಕ್ಕೆ ಕೇಳಿಸುವಂತೆ ಸಂದೇಶ ನೀಡಿದ್ದೇವೆ. ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರುತ್ತದೆ ಎಂಬ ಸಂದೇಶ ರವಾನೆ ಆಗಿದೆ. ನೀವು ಇಟ್ಟಿರುವ ವಿಶ್ವಾಸಕ್ಕೆ ನಾವು ದ್ರೋಹ ಮಾಡುವುದಿಲ್ಲ ಎಂದು ಬೊಮ್ಮಾಯಿ ಹೇಳಿದರು.
ನಾವು ಸಮರ್ಥವಾಗಿ ಕೊವಿಡ್​ ಎದುರಿಸಿದ್ದೇವೆ. ಜನರಿಗೆ ಉಚಿತವಾಗಿ ಕೊವಿಡ್​ ಲಸಿಕೆ ನೀಡಿದ್ದೇವೆ. ಕಾಂಗ್ರೆಸ್​​ನವರು ಕೇವಲ ಅಧಿಕಾರಕ್ಕಾಗಿ ರಾಜಕಾರಣ ಮಾಡುತ್ತಾರೆ. ಅನ್ನಭಾಗ್ಯ ಕೊಟ್ಟಿದ್ದೇವೆ ಎಂದು ಸಿದ್ದರಾಮಯ್ಯ ಹೇಳುತ್ತಾರೆ.
‘ಅನ್ನಭಾಗ್ಯದ ಅವ್ಯವಹಾರ ತನಿಖೆ ನಡೆಸುತ್ತಿದ್ದ ಅನುರಾಗ್ ತಿವಾರಿ ಅವರು ಉತ್ತರ ಪ್ರದೇಶದಲ್ಲಿ ಅನುಮಾನಾಸ್ಪದವಾಗಿ ಸಾವೀಗಿಡಾದರು. ಈ ರೀತಿಯ ಆಡಳಿತದ ಪಾರದರ್ಶಕತೆ ಮತ್ತು ಅನ್ನಭಾಗ್ಯಕ್ಕೂ ಕನ್ನ ಹಾಕಿದ ಕೀರ್ತಿ ಸಿದ್ದರಾಮಯ್ಯ ಅವರಿಗೆ ಸಲ್ಲುತ್ತದೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಾಗ್ದಾಳಿ ನಡೆಸಿದರು.

ಓದಿರಿ :-   ಭಾರತದ ಎಲ್ಲ ರಾಜ್ಯಗಳು, ಅನೇಕ ದೇಶಗಳನ್ನು ಹೆಸರನ್ನು ಭೂಪಟ-ಧ್ವಜ ನೋಡಿಯೇ ಹೇಳುವ 18 ತಿಂಗಳ ಪುಟ್ಟಪೋರ ಅನಿಕೇತ ಭಟ್‌...!

ಜನಸ್ಪಂದನ ಕಾರ್ಯಕ್ರಮಕ್ಕೆ ಅಭೂತಪೂರ್ವ ಜನಸ್ಪಂದನೆ ದೊರಕಿದೆ.‌ ಇದು ಬಿಜೆಪಿ ಸರ್ಕಾರದ ಅಭಿವೃದ್ಧಿ ಕಾರ್ಯಕ್ರಮಗಳನ್ನು ಜನರು ಒಪ್ಪಿಕೊಂಡಿದ್ದಾರೆ ಎಂಬುದಕ್ಕೆ ಸಾಕ್ಷಿಯಾಗಿದೆ ಎಂದರು.
ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳಲ್ಲಿ ಕೋವಿಡ್ ಸಂದರ್ಭದಲ್ಲಿ ಅಲ್ಲಿನ ಪರಿಸ್ಥಿತಿ ಬಹಳ ಕೆಟ್ಟದಾಗಿತ್ತು. ಆದರೆ, ಕರ್ನಾಟಕದಲ್ಲಿ ಕೋವಿಡ್ ಪರಿಸ್ಥಿತಿಯನ್ನು ಆಗಿನ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಸಮರ್ಥವಾಗಿ ನಿಭಾಯಿಸಿದ್ದರು’ ಎಂದು ಬೊಮ್ಮಾಯಿ ಮೆಚ್ಚುಗೆ ವ್ಯಕ್ತಪಡಿಸಿದರು.
‘ನಾವು (ಬಿಜೆಪಿ) ಜಾತಿ, ಧರ್ಮಗಳನ್ನು ನೋಡದೇ ಎಲ್ಲರ ಮಕ್ಕಳಿಗೂ ‘ರೈತ ವಿದ್ಯಾ ನಿಧಿ’ ಯೋಜನೆಯನ್ನು ವಿಸ್ತರಿಸಿದ್ದೇವೆ ಎಂದು ಬೊಮ್ಮಾಯಿ ತಿಳಿಸಿದರು.
ಕೂಲಿಕಾರ್ಮಿಕರ ಮಕ್ಕಳಿಗೆ ವಿದ್ಯಾನಿಧಿ ಮಾಡಿದ್ದೇವೆ. ಹಾಲು ಉತ್ಪಾದಕರಿಗೆ ಒಂದು ಬ್ಯಾಂಕ್​ ಸ್ಥಾಪಿಸುತ್ತಿದ್ದೇವೆ. ಪರಿಶಿಷ್ಟ ಜಾತಿ ಹಾಗೂ ಪಂಗಡದ ವಿದ್ಯಾರ್ಥಿಗಳ ಹಾಸ್ಟೆಲ್​ ಹೆಚ್ಚಳ ಮಾಡಿದ್ದೇವೆ. ಸ್ತ್ರಿಶಕ್ತಿ ಸಂಘಗಳ 5 ಲಕ್ಷ ಸದಸ್ಯರಿಗೆ ಉದ್ಯೋಗ ನೀಡ್ತೇವೆ. ನೀರಾವರಿಗೆ ನಾವು ಹೆಚ್ಚಿನ ಆದ್ಯತೆ ನೀಡಿದ್ದೇವೆ. ಎತ್ತಿನಹೊಳೆ ಯೋಜನೆಯನ್ನ ನಾವು ಆರಂಭಿಸಿದ್ದೇವೆ. ವರಿಗೆ ಎತ್ತಿನಹೊಳೆ ಯೋಜನೆ ಬಗ್ಗೆ ಏನೂ ಗೊತ್ತಿಲ್ಲ. ಇದೇ ವರ್ಷ ಎತ್ತಿನಹೊಳೆ ನೀರನ್ನ ಹರಿಸುತ್ತೆ. ಕೋಲಾರ-ಚಿಕ್ಕಬಳ್ಳಾಪುರಕ್ಕೆ ಟೌನ್​ಶಿಪ್​ ಬಗ್ಗೆ ಚಿಂತನೆ ನಡೆದಿದೆ. ಅತಿ ಹೆಚ್ಚು ಉದ್ಯೋಗ ಸೃಷ್ಟಿಸುವ ನಿಟ್ಟಿನಲ್ಲಿ ಕೆಲಸ ಮಾಡ್ತಿದ್ದೇವೆ ಎಂದರು.

ಓದಿರಿ :-   ವಿದ್ಯುತ್ ದರ ಏರಿಕೆ: ಹಿಂಪಡೆಯಲು ರಾಜ್ಯ ಸರ್ಕಾರದ ಚಿಂತನೆ...?

 

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ಟೆಲಿಗ್ರಾಮ್ ಚಾನೆಲ್ ಸೇರಿ
ವಾಟ್ಸಾಪ್ ಗ್ರೂಪ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

2 / 5. ಒಟ್ಟು ವೋಟುಗಳು 1

ನಿಮ್ಮ ಕಾಮೆಂಟ್ ಬರೆಯಿರಿ

advertisement