ಮೈಸೂರು ದಸರಾ ಉದ್ಘಾಟಿಸಲಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು : ಸಿಎಂ ಬೊಮ್ಮಾಯಿ

ಬೆಂಗಳೂರು: ರಾಷ್ಟ್ರಪತಿ ದ್ರೌಪದಿ ಮುರ್ಮು ನಾಡಹಬ್ಬ ಮೈಸೂರು ದಸರಾ ಉದ್ಘಾಟಿಸಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಈ ಬಾರಿಯ ದಸರಾ ಉದ್ಘಾಟನೆ ನೆರವೇರಿಸಲು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಒಪ್ಪಿರುವುದಾಗಿ ಶನಿವಾರ ಹೇಳಿದರು.
2022ರ ಸೆಪ್ಟೆಂಬರ್ 26 ರಿಂದ ಅಕ್ಟೋಬರ್ 5 ರವರೆಗೆ ವೈಭವಯುತವಾಗಿ ದಸರಾ ಆಚರಣೆಗೆ ಸಿದ್ಧತೆ ನಡೆದಿದೆ. ಸೆಪ್ಟೆಂಬರ್‌ 26ರಂದು ಬೆಳಿಗ್ಗೆ ಚಾಮುಂಡೇಶ್ವರಿ ಬೆಟ್ಟದಲ್ಲಿ ಪೂಜೆ ನಡೆಯಲಿದೆ. ನಂತರ ದಸರಾಗೆ ಅಧಿಕೃತ ಚಾಲನೆ ದೊರೆಯಲಿದೆ ಎಂದು ಮಾಹಿತಿ ನೀಡಿದರು.

ದಸರಾ ಉದ್ಘಾಟನೆಗೆ ಸಂಬಂಧಿಸಿದಂತೆ ಸಭೆ ನಡೆಸಿದ ನಂತರ ಉದ್ಘಾಟನೆಗೆ ಆಗಮಿಸುವಂತೆ ಮನವಿ ಮಾಡಿ ರಾಷ್ಟ್ರಪತಿ ಮುರ್ಮು ಅವರಿಗೆ ಪತ್ರ ಬರೆಯಲಾಗಿತ್ತು. ಪತ್ರಕ್ಕೆ ಸಮ್ಮತಿಸಿ ಇಂದು, ಶನಿವಾರ ಪತ್ರ ಬಂದಿದೆ ಎಂದು ಬೊಮ್ಮಾಯಿ ಹೇಳಿದರು.
ಪುರಾತತ್ವ ಸಂಗ್ರಹಾಲಯ ಮತ್ತು ಪರಂಪರೆ ಇಲಾಖೆ ವತಿಯಿಂದ ದಸರಾ ಮಹೋತ್ಸವದ ಅಂಗವಾಗಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.
ಶಾಲಾ-ಕಾಲೇಜು ವಿದ್ಯಾರ್ಥಿಗಳು, ಹಿರಿಯ ನಾಗರಿಕರು, ಜನಸಾಮಾನ್ಯರು ಹಾಗೂ ಪ್ರವಾಸಿಗರಿಗೆ ಮೈಸೂರಿನ ಇತಿಹಾಸ, ಪಾರಂಪರಿಕ ಕಟ್ಟಡಗಳ ಹಿನ್ನೆಲೆ, ವಾಸ್ತುಶಿಲ್ಪ ಶೈಲಿ ಬಗ್ಗೆ ಪರಿಚಯ ಮಾಡಿಕೊಡುವ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.

ಪ್ರಮುಖ ಸುದ್ದಿ :-   ಚುನಾವಣಾ ಭಾಷಣ ಮಾಡುವ ವೇಳೆ ವೇದಿಕೆಯಲ್ಲೇ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement