ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿ ಹುದ್ದೆಗಳ ನೇಮಕಾತಿಗೆ ಶೀಘ್ರವೇ ಅಧಿಸೂಚನೆ: ಶಿಕ್ಷಣ ಸಚಿವ ನಾಗೇಶ

ಬೆಂಗಳೂರು: ರಾಜ್ಯ ಸರ್ಕಾರದಿಂದ ಪದವಿಪೂರ್ವ ಕಾಲೇಜುಗಳಲ್ಲಿ ಖಾಲಿ ಇರುವ ವಿವಿಧ ವಿಷಯಗಳ 778 ಹುದ್ದೆಗಳ ಭರ್ತಿಗೆ ಘ್ರದಲ್ಲೇ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಲಾಗುತ್ತದೆ ಶಿಕ್ಷಣ ಸಚಿವ ಬಿ.ಸಿ. ನಾಗೇಶ ತಿಳಿಸಿದ್ದಾರೆ.
ಈ ಕುರಿತು ಟ್ವೀಟ್ ಮೂಲಕ ಅವರು ತಿಳಿಸಿದ್ದು, ಪದವಿಪೂರ್ವ ಶಿಕ್ಷಣ ಇಲಾಖೆಯ ಸರ್ಕಾರಿ ಪದವಿಪೂರ್ವ ಕಾಲೇಜುಗಳಲ್ಲಿ ಖಾಲಿ ಇರುವ 778 ಉಪನ್ಯಾಸಕರ ಖಾಲಿ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಿಕೊಳ್ಳಲಾಗುತ್ತದೆ. ಶೀಘ್ರದಲ್ಲೇ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಲಾಗುತ್ತದೆ ಎಂದು ತಿಳಿಸಿದ್ದಾರೆ.

ಪದವಿ ಪೂರ್ವ ಶಿಕ್ಷಣ ಇಲಾಖೆಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿಯವರು, ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕರಿಗೆ ಪತ್ರ ಬರೆದಿದ್ದು, ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿ ಇರುವ ವಿವಿಧ ವಿಷಯಗಳ ಉಪನ್ಯಾಸಕರ ಖಾಲಿ ಹುದ್ದೆಗಳನ್ನು ನೇರನೇಮಕಾತಿ ಮೂಲಕ ಭರ್ತಿ ಮಾಡಲು ಅನುಮತಿ ಕೋರಿದ್ದರು..

ವಿಷಯವಾರು ಉಪನ್ಯಾಸಕರ ಖಾಲಿ ಹುದ್ದೆ ವಿವರ ಇಂತಿದೆ: ಕನ್ನಡ – 100 ಹುದ್ದೆ, ಇಂಗ್ಲೀಷ್ – 120, ಇತಿಹಾಸ – 120, ಅರ್ಥಶಾಸ್ತ್ರ – 180, ಭೂಗೋಳಶಾಸ್ತ್ರ – 20, ವಾಣಿಜ್ಯ ಶಾಸ್ತ್ರ – 80, ಸಮಾಜಶಾಸ್ತ್ರ -75, ರಾಜ್ಯಶಾಸ್ತ್ರ – 75, ಮನಶಾಸ್ತ್ರ -02, ಗಣಕ ವಿಜ್ಞಾನ – 06

ಪ್ರಮುಖ ಸುದ್ದಿ :-   ಹುಕ್ಕಾ, ಹುಕ್ಕಾ ಬಾರ್‌ ನಿಷೇಧಿಸಿರುವ ರಾಜ್ಯ ಸರ್ಕಾರದ ಆದೇಶ ಎತ್ತಿ ಹಿಡಿದ ಹೈಕೋರ್ಟ್‌

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement