ಧಾರವಾಡದ ಕೆಸಿಸಿ ಬ್ಯಾಂಕ್​ನಲ್ಲಿ 87 ಕ್ಲರ್ಕ್​​ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ಡಿಗ್ರಿಯಾದವರಿಗೆ ಅವಕಾಶ

ಧಾರವಾಡದ ಕರ್ನಾಟಕ ಸೆಂಟ್ರಲ್​ ಕೋ-ಆಪರೇಟಿವ್​​ ಬ್ಯಾಂಕ್​ ಲಿಮಿಟೆಡ್​ನಲ್ಲಿ ( KCCBank) ನೇರ ನೇಮಕಾತಿ ಮೂಲಕ ಒಟ್ಟು 87 ಕ್ಲರ್ಕ್​ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಪದವೀಧರ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಕೆಯನ್ನು ಆನ್​ಲೈನ್​ ಮೂಲಕ ಸಲ್ಲಿಕೆ ಮಾಡಬಹುದಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಸೆಪ್ಟೆಂಬರ್​​ 30 ಆಗಿದೆ.
ಬ್ಯಾಂಕ್ -ಕರ್ನಾಟಕ ಸೆಂಟ್ರಲ್​ ಕೋ-ಆಪರೇಟಿವ್​​ ಬ್ಯಾಂಕ್​ ಲಿಮಿಟೆಡ್ ಧಾರವಾಡ (ಕೆಸಿಸಿ ಬ್ಯಾಂಕ್ ಧಾರವಾಡ)
ಹುದ್ದೆಯ ಹೆಸರು-ಕ್ಲರ್ಕ್
ಒಟ್ಟು ಹುದ್ದೆಗಳು- 87
ಉದ್ಯೋಗ ಸ್ಥಳ -ಧಾರವಾಡ
ಮಾಸಿಕ ವೇತನ-16000-29600 ರೂ.ಗಳೂ
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ ಮತ್ತು ಸಂದರ್ಶನ

ಶೈಕ್ಷಣಿಕ ಅರ್ಹತೆ: ಕೆಸಿಸಿ ಬ್ಯಾಂಕ್ ಧಾರವಾಡ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ ಪಡೆದಿರಬೇಕು.
ವಿಶೇಷ ಅರ್ಹತೆಗಳು:
ಅಭ್ಯರ್ಥಿಗಳಿಗೆ ಕನ್ನಡ ಭಾಷೆಯನ್ನು ಓದಲು, ಬರೆಯಲು ಮತ್ತು ಮಾತನಾಡಲು ತಿಳಿದಿರಬೇಕು
ಅಭ್ಯರ್ಥಿಗಳು ಕಂಪ್ಯೂಟರ್ ಆಪರೇಷನ್ ಮತ್ತು ಅಪ್ಲಿಕೇಶನ್‌ನಲ್ಲಿ ಜ್ಞಾನ ಹೊಂದಿರಬೇಕು.
ವಯೋಮಿತಿ: ಕರ್ನಾಟಕ ಕೇಂದ್ರ ಸಹಕಾರಿ ಬ್ಯಾಂಕ್ ಲಿಮಿಟೆಡ್ ಧಾರವಾಡ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗೆ ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 35 ವರ್ಷಗಳಾಗಿರಬೇಕು.
ಯಾರ್ಯಾರಿಗೆ ವಯೋಮಿತಿ ಸಡಿಲಿಕೆ:
ವಿಕಲಚೇತನ, ವಿಧವೆ, ಮಾಜಿ ಸೈನಿಕರಿಗೆ 10 ವರ್ಷಗಳ ಸಡಿಲಿಕೆ
ಪ.ಜಾ, ಪ.ವ ಮತ್ತು ಪ್ರವರ್ಗ- 1 ಅಭ್ಯರ್ಥಿಗಳಿಗೆ 5 ವರ್ಷಗಳು
ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷಗಳು

ಪ್ರಮುಖ ಸುದ್ದಿ :-   ಹತ್ಯೆಗೀಡಾದ ನೇಹಾ ಹಿರೇಮಠ ಮನೆಗೆ ಸಿಎಂ ಸಿದ್ದರಾಮಯ್ಯ ಭೇಟಿ ; ಕುಟುಂಬಸ್ಥರಿಗೆ ಸಾಂತ್ವನ

ಅರ್ಜಿ ಶುಲ್ಕ:
ಪ.ಜಾ, ಪ.ಪಂ, ಪ್ರವರ್ಗ 1, ವಿಕಲಚೇತನ ಮತ್ತು ನಿವೃತ್ತ ಸೇವಾಧಿಕಾರಿ ಅಭ್ಯರ್ಥಿಗಳಿಗೆ 590 ರೂ.ಗಳ ಶುಲ್ಕ
ಸಾಮಾನ್ಯ ಮತ್ತು ಇತರೆ ಹಿಂದುಳಿದ ವರ್ಗಳ ಅಭ್ಯರ್ಥಿಗಳಿಎ 1180 ರೂ.
ಪಾವತಿ ವಿಧಾನ: NEFT

ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 6 ಸೆಪ್ಟೆಂಬರ್​​ , 2022
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಮತ್ತು ಶುಲ್ಕ ಪಾವತಿಸಲು ಕೊನೆಯ ದಿನಾಂಕ: 30 ಸೆಪ್ಟೆಂಬರ್​​ 2022

ಅಧಿಸೂಚನೆ ಪ್ರಮುಖ ಲಿಂಕ್‌ಗಳು
ಅಧಿಕೃತ ಅಧಿಸೂಚನೆ ಪಿಡಿಎಫ್ ನೋಡಲು ಇಲ್ಲಿ ಕ್ಲಿಕ್ ಮಾಡಿclerk-87-notification-
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ: ಇಲ್ಲಿ ಕ್ಲಿಕ್ ಮಾಡಿ-Instruction – Karnataka Central Co-Operative Bank Ltd.,
ಅಧಿಕೃತ ವೆಬ್‌ಸೈಟ್: kccbankdharwad.in

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement