ನಿಮಗೆ ತಮಿಳು ಹುಡುಗಿಯನ್ನೇ ಮದುವೆ ಮಾಡಿಕೊಡಲು ಸಿದ್ಧ: ಮಹಿಳೆ ಮಾತಿಗೆ ನಾಚಿನೀರಾದ ರಾಹುಲ್ ಗಾಂಧಿ

ನವದೆಹಲಿ: ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ನಡೆಯುತ್ತಿರುವ ಕಾಂಗ್ರೆಸ್‌ನ ‘ಭಾರತ್‌ ಜೋಡೋ ಯಾತ್ರೆ’ ಅನೇಕ ತಮಾಷೆಯ ಸನ್ನಿವೇಶಗಳಿಗೆ ಸಾಕ್ಷಿಯಾಗುತ್ತಿದೆ.
ತಮಿಳುನಾಡಿನಲ್ಲಿ ಸಂಚರಿಸಿದ ಯಾತ್ರೆಯುದ್ದಕ್ಕೂ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಜನರೊಂದಿಗೆ ಸಂವಾದ ನಡೆಸಿದ್ದಾರೆ.
ತಮಿಳುನಾಡಿನಲ್ಲಿ ರಾಹುಲ್ ಅವರು ಮಹಿಳೆಯರ ಗುಂಪಿನೊಂದಿಗೆ ಸಂವಾದ ನಡೆಸುತ್ತಿದ್ದಾಗ ನಡೆದ ತಮಾಷೆಯ ವಿದ್ಯಮಾನದ ಬಗ್ಗೆ ಕಾಂಗ್ರೆಸ್ ಸಂಸದ ಜೈರಾಮ್ ರಮೇಶ್ ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ.

ಇಂದು, ಭಾನುವಾರ ಮಧ್ಯಾಹ್ನ ತಮಿಳುನಾಡಿನ ಮಾರ್ತಾಂಡಮ್‌ನಲ್ಲಿ ಮಹಿಳೆಯರೊಂದಿಗೆ ರಾಹುಲ್ ಗಾಂಧಿ ಸಂವಾದದ ನಡೆಸಿದರು. ಈ ಸಂದರ್ಭದಲ್ಲಿ, ಮಹಿಳೆಯೊಬ್ಬರು ರಾಹುಲ್‌ ಅವರಿಗೆ, ‘ನೀವು ತಮಿಳುನಾಡನ್ನು ಹೆಚ್ಚು ಪ್ರೀತಿಸುತ್ತೀರಿ ಎಂಬುದು ನಮಗೆ ತಿಳಿದಿದೆ. ಆ ಕಾರಣ, ನೀವು ಮದುವೆಯಾಗುವುದಾದರೆ ನಾವು ತಮಿಳು ಹುಡುಗಿಯನ್ನೇ ನಿಮಗೆ ಮದುವೆ ಮಾಡಿ ಕೊಡಲು ನಾವು ಸಿದ್ಧರಿದ್ದೇವೆ ಎಂದು ಹೇಳಿದ್ದಾರೆ.

ಮಹಿಳೆಯ ಮಾತುಗಳನ್ನು ಕೇಳಿದ ನಂತರ ರಾಹುಲ್‌ ನಾಚಿಕೊಂಡಿದ್ದಾರೆ. ಇದನ್ನು ಫೋಟೋದಲ್ಲಿ ಕಾಣಬಹುದು ಎಂದು ಜೈರಾಮ ರಮೇಶ್‌ ಹೇಳಿದ್ದಾರೆ.
ಕಾಂಗ್ರೆಸ್‌ನ ‘ಭಾರತ್ ಜೋಡೋ ಯಾತ್ರೆ’ 12 ರಾಜ್ಯಗಳು ಮತ್ತು ಎರಡು ಕೇಂದ್ರಾಡಳಿತ ಪ್ರದೇಶಗಳಲ್ಲಿ ಸಂಚರಿಸಲಿದೆ. ಈ ಅವಧಿಯಲ್ಲಿ 3,750 ಕಿ.ಮೀ ದೂರ ಕ್ರಮಿಸಲಿದೆ.

ಪ್ರಮುಖ ಸುದ್ದಿ :-   ಲೋಕಸಭೆ ಚುನಾವಣೆ : ಬಿಜೆಪಿ ಮೈತ್ರಿಕೂಟ Vs ಕಾಂಗ್ರೆಸ್‌ ಮೈತ್ರಿಕೂಟದ ಜಿದ್ದಾಜಿದ್ದಿ ಸ್ಪರ್ಧೆಯಲ್ಲಿ ಯಾರಿಗೆ ಎಷ್ಟು ಸ್ಥಾನಗಳು..? ಎಬಿಪಿ-ಸಿವೋಟರ್ ಸಮೀಕ್ಷೆ ಏನು ಹೇಳುತ್ತದೆ..?

4 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement