ಪ್ರಾಧ್ಯಾಪಕ ಡಾ. ಎಂ. ಎಸ್. ಹುಲಗೂರಗೆ ಎನ್ಎಸ್ಎಸ್ ರಾಜ್ಯ ಪ್ರಶಸ್ತಿ ಪ್ರದಾನ

ಹುಬ್ಬಳ್ಳಿ : ಹುಬ್ಬಳ್ಳಿ ಜೈನ್ ಮಹಾವಿದ್ಯಾಲಯದ ಹಿಂದಿ ಪ್ರಾಧ್ಯಾಪಕರಾದ ಡಾ. ಎಂ. ಎಸ್. ಹುಲಗೂರ ಅವರಿಗೆ ರಾಷ್ಟ್ರೀಯ ಸೇವಾ ಯೋಜನೆ (ಎನ್ಎಸ್ಎಸ್) ರಾಜ್ಯ ಪ್ರಶಸ್ತಿ ನೀಡಲಾಗಿದೆ.
ಎನ್‌ಎಸ್‌ಎಸ್ ಕಾರ್ಯಕ್ರಮ ಅಧಿಕಾರಿಯಾಗಿ ಅವರು ಸಲ್ಲಿಸಿದ ಸೇವೆ ಪರಿಗಣಿಸಿ ರಾಜ್ಯ ಸರ್ಕಾರ ಕೊಡ ಮಾಡುವ ಅತ್ಯುತ್ತಮ ಎನ್‌ಎಸ್‌ಎಸ್‌ ಕಾರ್ಯಕ್ರಮ ಅಧಿಕಾರಿ ರಾಜ್ಯ ಪ್ರಶಸ್ತಿಯನ್ನು ರಾಜ್ಯಪಾಲರಾದ ಥಾವರಚಂದ್ ಗೆಹ್ಲೋತ್ ಅವರು ಶನಿವಾರ ರಾಜ ಭವನದಲ್ಲಿ ನಡೆದ ಸಮಾರಂಭದಲ್ಲಿ ಪ್ರದಾನ ಮಾಡಿದ್ದಾರೆ. ಈ ಪ್ರಶಸ್ತಿಯು ಫಲಕ ಮತ್ತು 10,000 ರೂ.ಗಳ ನಗದನ್ನು ಒಳಗೊಂಡಿದೆ. ಅವರು ಕಾಲೇಜಿನ ಪ್ರಾಚಾರ್ಯರಾದ ಪ್ರೊ. ಮಾಯಾ ಕುಲಹಳ್ಳಿ ಅವರೊಂದಿಗೆ ಸ್ವೀಕರಿಸಿದ್ದಾರೆ.

ಡಾ. ಎಂ ಎಸ್ ಹುಲಗೂರ ಅವರು ತಾವು ವಿದ್ಯಾರ್ಥಿಯಾಗಿದ್ದಾಗಿನಿಂದಲೂ ಹಿಡಿದು ತಾವು ಎನ್.ಎಸ್.ಎಸ್. ಕಾರ್ಯಕ್ರಮ ಅಧಿಕಾರಿಗಳಿಗೆ ಹಲವಾರು ಸಾಮಾಜಿಕ ಕೆಲಸ-ಕಾರ್ಯಗಳಲ್ಲಿ ತೊಡಗಿಕೊಂಡಿದ್ದು, ಅನೇಕ ಬಡವರು ಹಾಗೂ ನಿರಾಶ್ರಿತರಿಗೆ ಸಹಾಯ, ಸಹಕಾರ ಮಾಡಿದ್ದಾರೆ. ಹಲವಾರು ಹಳ್ಳಿಗಳಲ್ಲಿ ಎನ್‌ಎಸ್‌ಎಸ್‌ ಶಿಬಿರಗಳನ್ನು, ರಾಷ್ಟ್ರೀಯ ಭಾವೈಕ್ಯತಾ ಶಿಬಿರ ನಡೆಸಿದ್ದಾರೆ,. ಸ್ವಯಂ ಸೇವಕರಿಗೆ ಮಾರ್ಗದರ್ಶನವನ್ನು ನೀಡಿದ್ದಾರೆ.

ಸಮಾರಂಭದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಚಿವರಾದ ಡಾ. ಸಿ ನಾರಾಯಣ ಗೌಡ, , ಐಎಎಸ್ ಅಧಿಕಾರಿ ಗೋಪಾಲಕೃಷ್ಣ, ಎನ್ಎಸ್ಎಸ್ ನ ಪ್ರಾದೇಶಿಕ ನಿರ್ದೇಶಕ ಕೆ. ವಿ. ಖಾದ್ರಿ ನರಸಿಂಹಯ್ಯ, ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿಗಳಾದ ಡಾ. ಲಿಂಗರಾಜ್ ಗಾಂಧಿ ಹಾಗೂ ರಾಜ್ಯ ಎನ್ಎಸ್ಎಸ್ ಅಧಿಕಾರಿಗಳಾದ ಪ್ರತಾಪ್ ಲಿಂಗಯ್ಯ ಮತ್ತು ಡಾ. ಗೋವಿಂದ್ ಗೌಡ ಉಪಸ್ಥಿತರಿದ್ದರು.
ರಾಜ್ಯ ಸರ್ಕಾರ ಕೊಡಮಾಡುವ ಎನ್.ಎಸ್.ಎಸ್ ಅತ್ಯುತ್ತಮ ಕಾರ್ಯಕ್ರಮ ಅಧಿಕಾರಿ ರಾಜ್ಯ ಪ್ರಶಸ್ತಿ ಪಡೆದಿದ್ದಕ್ಕಾಗಿ ಕರ್ನಾಟಕ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ. ಕೆ.ಬಿ. ಗುಡಸಿ, ಜೈನ್ ಮಹಾವಿದ್ಯಾಲಯದ ಪ್ರಾಚಾರ್ಯ ಪ್ರೊ. ಮಾಯಾ ಕುಲಹಳ್ಳಿ, ಹುಬ್ಬಳ್ಳಿ ಪೂರ್ವ ಶಾಸಕ ಪ್ರಸಾದ ಅಬ್ಬಯ್ಯ, ಸಹೋದ್ಯೋಗಿಗಳು, ಇತರರು ಅಭಿನಂದಿಸಿದ್ದಾರೆ.

ಪ್ರಮುಖ ಸುದ್ದಿ :-   ಸಿಎಂ ಸಿದ್ದರಾಮಯ್ಯ ಹೇಳಿಕೆಯಿಂದ ನಮ್ಮ ಮನೆತನದ ಗೌರವ ಹಾಳಾಗುತ್ತಿದೆ : ನೇಹಾ ತಂದೆ ನಿರಂಜನ ಹಿರೇಮಠ

4 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement