ರಾಜ್ಯದ ಈ ಜಿಲ್ಲೆಗಳಲ್ಲಿ ಇನ್ನೂ ನಾಲ್ಕು ದಿನಗಳ ಕಾಲ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು: ಕರ್ನಾಟಕದಲ್ಲಿ ಮಳೆಯ ಆರ್ಭಟ ಮುಂದುವರೆದಿದೆ. ರಾಜ್ಯ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ನಾಲ್ಕು ದಿನ ಮಳೆ ಮುನ್ಸೂಚನೆ ನೀಡಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಇನ್ನು 4 ದಿನ ಹಳದಿ ಅಲರ್ಟ್​ (Yellow Alert) ಘೋಷಿಸಲಾಗಿದೆ.
ರಾಜ್ಯದ ಕರಾವಳಿ, ಮಲೆನಾಡು, ಉತ್ತರ ಕರ್ನಾಟಕದ ಹಲವು ಭಾಗಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಮಲೆನಾಡು ಜಿಲ್ಲೆಗಳಾದ ಕೊಡಗು, ಹಾಸನ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದ್ದು ‘ಹಳದಿ ಅಲರ್ಟ್’ ಘೋಷಿಸಲಾಗಿದೆ.

ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಬಾಗಲಕೋಟೆ, ಕಲಬುರಗಿ, ವಿಜಯಪುರ, ಬೀದರ, ರಾಯಚೂರು, ಯಾದಗಿರಿ, ದಕ್ಷಿಣ ಒಳನಾಡಿನ ಬಳ್ಳಾರಿ,ಚಾಮರಾಜನಗರ, ಹಾಸನ, ದಾವಣಗೆರೆ, ಮೈಸೂರು ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಕೂಡ ಇಂದು ‘ಹಳದಿ ಅಲರ್ಟ್’ ನೀಡಲಾಗಿದೆ.
ಈ ಮಳೆಯ ಅಬ್ಬರ ಇಂದು ಕೂಡ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಪ್ರದೇಶಗಳಲ್ಲಿ ಹಳದಿ ಅಲರ್ಟ್‌ ಘೋಷಿಸಲಾಗಿದೆ.

ಪ್ರಮುಖ ಸುದ್ದಿ :-   ವೀಡಿಯೊಗಳು..| ಬೆಂಗಳೂರಿನಲ್ಲಿ ಭಾರೀ ಮಳೆ : ತಾಪಮಾನ ದಿಢೀರ್‌ ಕುಸಿತ

4.4 / 5. 5

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement