ಟಿ20 ವಿಶ್ವಕಪ್ ಟೂರ್ನಿಗೆ ಭಾರತದ ಕ್ರಿಕೆಟ್ ತಂಡ ಪ್ರಕಟ

ಮುಂಬೈ : ಮುಂಬರುವ ಐಸಿಸಿ ಟಿ20 ವಿಶ್ವಕಪ್ ಕ್ರಿಕೆಟ್ ಟೂರ್ನಿಗೆ ಭಾರತ ಕ್ರಿಕೆಟ್ ತಂಡ ಪ್ರಕಟಿಸಲಾಗಿದೆ. ರೋಹಿತ್ ಶರ್ಮಾ ನಾಯಕರಾಗಿ ಭಾರತದ ತಂಡವನ್ನು ಮುನ್ನಡೆಸಲಿದ್ದಾರೆ.ವಿಕೆಟ್ ಕೀಪರ್‌ ಆಗಿ ದಿನೇಶ್ ಕಾರ್ತಿಕ್ ಹಾಗೂ ರಿಷಭ್ ಪಂತ್ ಇಬ್ಬರೂ ಸ್ಥಾನ ತಂಡದಲ್ಲಿ ಪಡೆದಿದ್ದಾರೆ.
ಅಕ್ಟೋಬರ್ 22 ರಿಂದ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯು ಆಸ್ಟ್ರೇಲಿಯಾದಲ್ಲಿ ಆರಂಭವಾಗಲಿದ್ದು, ನವೆಂಬರ್ 13ರವರೆಗೆ ನಡೆಯಲಿದೆ. ಈ ವಿಶ್ವಕಪ್‌ಗೆ 15 ಆಟಗಾರರನ್ನೊಳಗೊಂಡ ಭಾರತ ಕ್ರಿಕೆಟ್ ತಂಡವನ್ನು ಪ್ರಕಟಿಸಲಾಗಿದೆ.

ಟಿ20 ವಿಶ್ವಕಪ್‌ಗೆ ಟೀಂ ಇಂಡಿಯಾದ ದೊಡ್ಡ ಹೆಸರುಗಳ ಆಯ್ಕೆಯನ್ನು ಈಗಾಗಲೇ ನಿರ್ಧರಿಸಲಾಗಿದೆ. ನಾಯಕ ರೋಹಿತ್ ಶರ್ಮಾ ಅವರಲ್ಲದೆ, ಕೆಎಲ್ ರಾಹುಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ಜಸ್ಪ್ರೀತ್ ಬುಮ್ರಾ, ಭುವನೇಶ್ವರ್ ಕುಮಾರ್, ಯುಜ್ವೇಂದ್ರ ಚಾಹಲ್. ಇವರು ತಂಡದ ಸಾಮಾನ್ಯ ಸದಸ್ಯರಾಗಿರುವ ಆಟಗಾರರು. T20 ವಿಶ್ವಕಪ್ ಅಕ್ಟೋಬರ್ 22 ರಿಂದ ನವೆಂಬರ್ 13 ರವರೆಗೆ ನಡೆಯಲಿದೆ. ಈ ಟೂರ್ನಿಯಲ್ಲಿ ಭಾರತ ತಂಡ ಅಕ್ಟೋಬರ್ 23 ರಂದು ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧ ಅಭಿಯಾನ ಆರಂಭಿಸಲಿದೆ. ಈ ಪಂದ್ಯ ಮೆಲ್ಬೋರ್ನ್‌ನಲ್ಲಿ ನಡೆಯಲಿದೆ.

ಪ್ರಮುಖ ಸುದ್ದಿ :-   ಇವಿಎಂ ಮತಗಳ ಜೊತೆ ವಿವಿಪ್ಯಾಟ್ ಮತಗಳ ಸಂಪೂರ್ಣ ಎಣಿಕೆ : ಎಲ್ಲ ಅರ್ಜಿಗಳನ್ನು ವಜಾ ಮಾಡಿದ ಸುಪ್ರೀಂ ಕೋರ್ಟ್

ಮುಂಬರುವ ಐಸಿಸಿ ಟಿ20 ವಿಶ್ವಕಪ್ ಪಂದ್ಯಾವಳಿಯ ತಂಡ ಇಂತಿದೆ.
ರೋಹಿತ್ ಶರ್ಮಾ (ನಾಯಕ), ಕೆ.ಎಲ್. ರಾಹುಲ್ (ಉಪನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಿಷಭ್ ಪಂತ್ (ವಿಕೆಟ್-ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್-ಕೀಪರ್), ಹಾರ್ದಿಕ್ ಪಾಂಡ್ಯ, ಆರ್.ಅಶ್ವಿನ್, ಯಜುವೇಂದ್ರ ಚಾಹಲ್, ಅಕ್ಸರ್ ಪಟೇಲ್, ಜಸ್ಪ್ರೀತ್ ಬುಮ್ರಾ, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಆರ್ಶ್‌ದೀಪ್‌ ಸಿಂಗ್.

3.5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement