ಪ್ರೌಢಶಾಲೆ ಶಿಕ್ಷಕರ ಹುದ್ದೆ ನಿರೀಕ್ಷೆಯಲ್ಲಿದ್ದವರಿಗೆ ಸಿಹಿಸುದ್ದಿ: 2500 ಶಿಕ್ಷಕರ ನೇಮಕಾತಿಗೆ ಮುಂದಾದ ಸರ್ಕಾರ

ಬೆಂಗಳೂರು: ಈಗಾಲೇ ರಾಜ್ಯ ಸರ್ಕಾರದಿಂದ ಶಿಕ್ಷಕರ ಕೊರತೆ ನೀಗಿಸುವ ನಿಟ್ಟಿನಲ್ಲಿ 15,000 ಶಿಕ್ಷಕರ ನೇಮಕಾತಿಗೆ ರಾಜ್ಯ ಸರ್ಕಾರ ಮುಂದಾಗಿದ್ದು, ನೇಮಕಾತಿ ಪ್ರಕ್ರಿಯೆ ಚಾಲನೆಯಲ್ಲಿದೆ. ಈಗ ಅದರ ಬೆನ್ನಲ್ಲೇ ಮತ್ತೆ 2,500 ಪ್ರೌಢಶಾಲಾ ಶಿಕ್ಷಕರ ನೇಮಕಾತಿ ಮಾಡಲಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ ಹೇಳಿದ್ದಾರೆ.
ರಾಜ್ಯ ಸರ್ಕಾರದಿಂದ ಶಿಕ್ಷಕರ ಕೊರತೆ ನೀಗಿಸುವ ನಿಟ್ಟಿನಲ್ಲಿ 15,000 ಶಿಕ್ಷಕರ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿತ್ತು. ಅದಕ್ಕಾಗಿ ಆ ನೇಮಕಾತಿ ಪ್ರಕ್ರಿಯೆ ಚಾಲನೆಯಲ್ಲಿದೆ. ಈಗ ಇದರ ಬೆನ್ನಲ್ಲೇ 2,500 ಪ್ರೌಢಶಾಲೆ ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ ಟ್ವೀಟ್‌ ಮಾಡಿದ್ದಾರೆ.

ಸರ್ಕಾರಿ ಪ್ರೌಢಶಾಲೆಗಳಲ್ಲಿ ಶಿಕ್ಷಕರ ಕೊರತೆ ನೀಗಿಸಲು 2,500 ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುತ್ತದೆ. ಸಹ ಶಿಕ್ಷಕರು – 2,200 ಹುದ್ದೆಗಳು, ದೈಹಿಕ ಶಿಕ್ಷಣ ಶಿಕ್ಷಕರು – 200 ಹುದ್ದೆಗಳು, ವಿಶೇಷ ಶಿಕ್ಷಕರು – 100 ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ ಎಂದು ಅವರು ಟ್ವೀಟ್‌ನಲ್ಲಿ ಹೇಳಿದ್ದಾರೆ.

15,000 ಶಿಕ್ಷಕರ ಹುದ್ದೆಯ ನೇಮಕಾತಿಯಲ್ಲಿ ದೈಹಿಕ ಶಿಕ್ಷಕರನ್ನು ನೇಮಕ ಮಾಡಿಕೊಂಡಿರಲಿಲ್ಲ. ವಿಷಯ ಶಿಕ್ಷಕರನ್ನು ಅಷ್ಟೇ ನೇಮಕ ಮಾಡಲಾಗಿತ್ತು. ಈಗ 200 ದೈಹಿಕ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. 100 ವಿಶೇಷ ಶಿಕ್ಷಕರನ್ನು ಕೂಡ ನೇಮಕ ಮಾಡಿಕೊಳ್ಳಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.

ಪ್ರಮುಖ ಸುದ್ದಿ :-   ಗದಗ: ನಗರಸಭೆ ಉಪಾಧ್ಯಕ್ಷೆ ಪುತ್ರ ಸೇರಿ ನಾಲ್ವರ ಭೀಕರ ಹತ್ಯೆ

3 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement