ಬೆಂಗಳೂರು ರಾಜಕಾಲುವೆ ಅತಿಕ್ರಮ ತೆರವು ಕಾರ್ಯಾಚರಣೆಯಲ್ಲಿ ಭೇದಭಾವ ಮಾಡುವ ಪ್ರಶ್ನೆಯೇ ಇಲ್ಲ: ಸಿಎಂ ಬೊಮ್ಮಾಯಿ

ಬೆಂಗಳೂರು: ರಾಜಕಾಲುವೆ ಒತ್ತುವರಿ ತೆರವುಗೊಳಿಸುವ ಕಾರ್ಯಾಚರಣೆಯಲ್ಲಿ ಭೇದಭಾವ ಮಾಡುವ ಪ್ರಶ್ನೆಯೇ ಇಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಇಂದು ಸೋಮವಾರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ರಾಜಕಾಲುವೆ ಮೇಲೆ ಕಟ್ಟಡ ಹಾಗೂ ಮನೆ ಕಟ್ಟಿದವರ ಮೇಲೆ ಹಾಗೂ ಕಾಲುವೆ ನೀರನ್ನು ಹರಿದು ಹೋಗಲು ತೊಂದರೆ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಇದರಲ್ಲಿ ಭೇದಿ-ಬಾವ ಮಾಡು ಪ್ರಶ್ನೆಯೇ ಇಲ್ಲ ಎಂದು ಅವರು ಹೇಳಿದರು.
ಕೆಲವರು ರಾಜಕಾಲುವೆಯನ್ನು ಮುಚ್ಚಿದ್ದಾರೆ. ಮಳೆ ನೀರು ಹರಿದು ಹೋಗಲು ಚರಂಡಿಗೆ ಇದು ಅಡ್ಡಿಯಾಗಿದ್ದರೆ, ತೆರವುಗೊಳಿಸಲು ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ. ಮಳೆ ಬಂದಾಗ ನೀರು ನಿಂತು ಐಟಿಬಿಟಿಯವರು ಸೇರಿದಂತೆ ಎಲ್ಲರಿಗೂ ತೊಂದರೆಯಾಗಿದೆ. . ರಸ್ತೆಯಲ್ಲಿ ಓಡಾಡುವವರಿಗೂ ತೊಂದರೆ ಆಗಿದೆ. ಸಾಮಾನ್ಯರಿಗೂ ತೊಂದರೆ ಆಗಿದೆ. ಕೆಳಹಂತದ ಹಾಗೂ ತಗ್ಗಿನಲ್ಲಿರುವ ಮನೆಗಳಿಗೆ ನೀರು ನಿಂತು ತೊಂದರೆಯಾಗಿದೆ ಎಂದರು.

ಇದರಿಂದ ಹಿಂದೆ ಸರಿಯುವ ಮಾತೇ ಇಲ್ಲ. ಎಲ್ಲರಿಗೂ ಕೂಡ ಮಳೆಯಿಂದ ತೊಂದರೆ ಆಗಿದೆ. ತೆರವು ಮಾಡುವುದು ಪ್ರಾರಂಭವಾಗಿದೆ. ಅದು ನಿಲ್ಲುವುದಿಲ್ಲ. ತೆರವುಗೊಳಿಸುವ ಕಾರ್ಯವನ್ನು ಪೂರ್ಣಗೊಳಿಸಲಾಗುವುದು ಎಂದು ಹೇಳಿದ್ದಾರೆ.
ಹಲವಾರು ಪ್ರಕರಣಗಳು ನ್ಯಾಯಾಲಯದಲ್ಲಿ ದಾಖಲಾಗಿ ನಿರ್ದೇಶನ ಪಡೆಯಲಾಗಿದೆ. ನ್ಯಾಯಾಲಯದಲ್ಲಿಯೂ ಗಂಭೀರವಾಗಿ ಇವುಗಳ ಬಗ್ಗೆ ಮಾಹಿತಿ ನೀಡಲಾಗುವುದು. ನ್ಯಾಯಾಲಯವೂ ಪ್ರವಾಹದ ಪ್ರಕರಣದಲ್ಲಿ ನಿರ್ದೇಶನಗಳನ್ನು ನೀಡಿದೆ. ಈ ಬಾರಿ ದೊಡ್ಡ ಪ್ರಮಾಣದಲ್ಲಿ ಅತಿಕ್ರಮಣ ತೆರೆವುಗೊಳಿಸಲಾಗುವುದು ಎಂದು ಅವರು ಭರವಸೆ ನೀಡಿದ್ದಾರೆ.
ಪಿಎಸ್‌ಐ (PSI) ಅಕ್ರಮ ನೇಮಕಾತಿಗೆ ಸಂಬಂಧಿಸಿದಂತೆ ಬಿಜೆಪಿ ಶಾಸಕರು ಮಾತನಾಡಿರುವ ವೀಡಿಯೊ ಬಿಡುಗಡೆಯಾಗಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು ಆ ಬಗ್ಗೆ ನನಗೆ ಗೊತ್ತಿಲ್ಲ. ಅದನ್ನು ಪರಿಶೀಲಿಸಲಾಗುವುದು. ತಪ್ಪು ಕಂಡುಬಂದರೆ ತನಿಖೆಗೆ ಆದೇಶಿಸಲಾಗುವುದು ಎಂದು ತಿಳಿಸಿದ್ದಾರೆ.

ಪ್ರಮುಖ ಸುದ್ದಿ :-   ಬೆಂಗಳೂರಿನ ಹಲವೆಡೆ ಜೋರಾಗಿ ಮಳೆ

3 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement