ರಾಯಚೂರು: ಭಾರತ ಜೋಡೋ ಯಾತ್ರೆಯ ಪೂರ್ವಭಾವಿ ಸಭೆಯ ಬ್ಯಾನರ್​ನಲ್ಲಿ ಸಿದ್ದರಾಮಯ್ಯ ಭಾವಚಿತ್ರ ಇಲ್ಲ, ಅಭಿಮಾನಿಗಳ ಬೇಸರ

ರಾಯಚೂರು: ‘ಭಾರತ ಐಕ್ಯತಾ ಯಾತ್ರೆ’ಯ ಪೂರ್ವಭಾವಿ ಸಭೆಯ ಬ್ಯಾನರ್‌ನಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾವಚಿತ್ರ ನಾಪತ್ತೆಯಾಗಿರುವ ವಿದ್ಯಮಾನ ನಡೆದ ಬಗ್ಗೆ ವರದಿಯಾಗಿದೆ. ನಡೆದಿದೆ. ಇದರಿಂದಾಗಿ ಸಿದ್ದರಾಮಯ್ಯನವರ ಅಭಿಮಾನಿಗಳಿಗೆ ಬೇಸರವಾಗಿದೆ.
ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಹಮ್ಮಿಕೊಂಡಿರುವ ಭಾರತ ಐಕ್ಯತಾ ಯಾತ್ರೆ ನಿಮಿತ್ತ ಡಿ.ಕೆ.ಶಿವಕುಮಾರ ಸ್ಥಳ ಪರಿಶೀಲನೆಗೆ ಆಗಮಿಸಿದ್ದಾರೆರಾಯಚೂರಿನ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ನಡೆಯಲಿದ್ದು, ಅದಕ್ಕೆ ಸಂಬಂಧಿಸಿದ ಬ್ಯಾನರ್​ ಇದು ಎಂದು ಹೇಳಲಾಗಿದೆ. . ಈ ವೇಳೆ ಸುದ್ದಿಗೋಷ್ಠಿ ಕರೆದಿದ್ದು, ಬ್ಯಾನರ್ ಹಾಕಲಾಗಿದೆ. ಆದರೆ, ಇದು ಸ್ಥಳೀಯ ನಾಯಕರ ಕಣ್ತಪ್ಪಿನಿಂದ ಆಗಿದೆಯೋ ಅಥವಾ ಕೈಬಿಡಲಾಗಿದೆಯೋ ಎಂಬುದ ಗೊತ್ತಿಲ್ಲ, ಆದರೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾವಚಿತ್ರ ಬ್ಯಾನರ್‌ನಲ್ಲಿ ಇಲ್ಲ.

ಬ್ಯಾನರ್ ನಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ಚರ್ ಖಂಡ್ರೆ , ಎನ್.ಎಸ್ .ಬೋಸರಾಜು , ಮಾಜಿ ಸಚಿವ ಎಚ್. ಆಂಜನೇಯ, ಕುಷ್ಟಗಿ ಶಾಸಕ ಅಮರೇಗೌಡ ಭಯ್ಯಾಪುರ, ಮಾಜಿ ಶಾಸಕ ಹಂಪನಗೌಡ ಬಾದರ್ಲ,ರಾಯಚೂರು ಗ್ರಾಮೀಣ ಶಾಸಕ ಬಸನಗೌಡ ದದ್ದಲ್ , ಲಿಂಗಸೂಗೂರು ಶಾಸಕ ಡಿ.ಎಸ್. ಹೂಲಗೇರಿ, ಮಸ್ಕಿ ಶಾಸಕ ಬಸನಗೌಡ ತುರ್ವಿಹಾಳ ಹಾಗೂ ಎಂಎಲ್ ಸಿ ಶರಣಗೌಡ ಭಯ್ಯಾಪುರ ಮತ್ತು ಮಾಜಿ ಶಾಸಕರ ಫೋಟೋ ಗಳು ಬ್ಯಾನರ್ ನಲ್ಲಿ ಹಾಕಲಾಗಿದೆ. ಆದರೆ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಫೋಟೋ ಕೈಬಿಟ್ಟಿದ್ದರಿಂದ ಅವರ ಅಭಿಮಾನಿಗಳಿಗೆ ಬೇಸರವಾಗಿದೆ.
ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ನೇತೃತ್ವದಲ್ಲಿ ‘ಭಾರತ ಐಕ್ಯತಾ ಯಾತ್ರೆ’ ನಡೆಯುತ್ತಿದ್ದು, ಈ ಯಾತ್ರೆ ಸೆಪ್ಟೆಂಬರ್‌ 30ರಂದು ರಾಜ್ಯ ಪ್ರವೇಶಿಸಲಿದೆ. ರಾಜ್ಯದಲ್ಲಿ ರಾಜ್ಯದಲ್ಲಿ 510 ಕಿಲೋ ಮೀಟರ್​ ದೂರ ಯಾತ್ರೆ ಸಂಚರಿಸಲಿದೆ. ರಾಜ್ಯದಲ್ಲಿ ಒಟ್ಟು 21 ದಿನ ಪಾದಯಾತ್ರೆ ನಡೆಯಲಿದೆ.

ಪ್ರಮುಖ ಸುದ್ದಿ :-   ಕರ್ನಾಟಕದಲ್ಲಿ ಪೂರ್ವ ಮುಂಗಾರು ಚುರುಕು; ಏಪ್ರಿಲ್‌ 19 ರಿಂದ ಮೂರು ದಿನ ಈ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

3 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement