ಸೌರಶಕ್ತಿ ಚಾಲಿತ ವಿದ್ಯುತ್ ಹೆದ್ದಾರಿ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಕಾರ್ಯೋನ್ಮುಖ: ಗಡ್ಕರಿ

ನವದೆಹಲಿ: ಸೌರಶಕ್ತಿಯಿಂದ (Solar Energy) ಚಾಲಿತವಾಗಿರುವ ಎಲೆಕ್ಟ್ರಿಕ್ ಹೆದ್ದಾರಿಗಳನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಕೆಂದ್ರ ಸರ್ಕಾರ ಕಾರ್ಯ ಪ್ರವೃತ್ತವಾಗಿದೆಯಂತೆ. ಈ ಹೆದ್ದಾರಿಗಳ ಮೂಲಕ ಭಾರೀ ಟ್ರಕ್‌ಗಳು ಮತ್ತು ಬಸ್‌ಗಳನ್ನು ಚಾರ್ಜ್‌ ಮಾಡಲು ಅನುಕೂಲವಾಗಲಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಸೋಮವಾರ ಹೇಳಿದ್ದಾರೆ.
ಇಂಡೋ-ಅಮೆರಿಕನ್ ಚೇಂಬರ್ ಆಫ್ ಕಾಮರ್ಸ್ (IACC) ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕೆಂದ್ರ ಸರ್ಕಾರವು ವಿದ್ಯುತ್‌ ಮೂಲಕ ಭಾರತದ ಸಾರ್ವಜನಿಕ ಸಾರಿಗೆ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸಲು ಬಯಸುತ್ತದೆ ಎಂದು ಹೇಳಿದ್ದಾರೆ.
ಅಲ್ಲದೆ, ಸೌರ ಮತ್ತು ಪವನ ಶಕ್ತಿ ಆಧಾರಿತ ಚಾರ್ಜಿಂಗ್ ಕಾರ್ಯವಿಧಾನಗಳನ್ನು ಕೇಂದ್ರ ಸರ್ಕಾರವು ಪ್ರೋತ್ಸಾಹಿಸುತ್ತಿದೆ. ನಾವು ಸೌರಶಕ್ತಿಯಿಂದ ಚಾಲಿತವಾಗಿರುವ ಎಲೆಕ್ಟ್ರಿಕ್ ಹೆದ್ದಾರಿಗಳನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದೇವೆ. ಇದು ಚಾಲನೆಯಲ್ಲಿರುವಾಗ ಹೆವಿ ಡ್ಯೂಟಿ ಟ್ರಕ್‌ಗಳು ಹಾಗೂ ಬಸ್‌ಗಳನ್ನು ಚಾರ್ಜ್ ಮಾಡಲು ಅನುಕೂಲವಾಗುತ್ತದೆ” ಎಂದೂ ಗಡ್ಕರಿ ಹೇಳಿದ್ದಾರೆ.

ಈ ಹೆದ್ದಾರಿ ರಸ್ತೆ ಮೇಲೆ ಪ್ರಯಾಣಿಸುವ ವಾಹನಗಳಿಗೆ ವಿದ್ಯುತ್ ಸರಬರಾಜು ಮಾಡುತ್ತದೆ. ಓವರ್‌ಹೆಡ್ ಪವರ್ ಲೈನ್‌ಗಳನ್ನು ಸಹ ಈ ಹೈವೇ ಒಳಗೊಂಡಿರುತ್ತದೆ. ಇದರ ಜತೆಗೆ, ಟೋಲ್ ಪ್ಲಾಜಾಗಳನ್ನೂ ಸೌರಶಕ್ತಿಯಿಂದ ಚಾಲಿತಗೊಳಿಸಲು ಕೇಂದ್ರ ಸರ್ಕಾರವು ಪ್ರೋತ್ಸಾಹಿಸುತ್ತಿದೆ. ರಸ್ತೆ ಸಚಿವಾಲಯವು ಪ್ರಮುಖ ಕಾರಿಡಾರ್‌ಗಳಲ್ಲಿಹೊಸ ಜೋಡಣೆಯನ್ನು ವಿನ್ಯಾಸಗೊಳಿಸಿದೆ ಎಂದೂ ಕೇಂದ್ರ ಸಚಿವರು ಹೇಳಿದರು.
ಉತ್ತಮವಾಗಿ ಅಭಿವೃದ್ಧಿ ಹೊಂದಿದ ಮೂಲಸೌಕರ್ಯವು ಆರ್ಥಿಕ ಚಟುವಟಿಕೆಗಳನ್ನು ಹೆಚ್ಚಿಸುತ್ತದೆ, ಉದ್ಯೋಗ ಸೃಷ್ಟಿಯನ್ನು ಉತ್ತೇಜಿಸುತ್ತದೆ. ನಾವು 26 ಗ್ರೀನ್‌ಫೀಲ್ಡ್ ಎಕ್ಸ್‌ಪ್ರೆಸ್‌ವೇಗಳನ್ನು ನಿರ್ಮಿಸುತ್ತಿದ್ದೇವೆ. ಅಲ್ಲದೆ, ಪ್ರಧಾನಮಂತ್ರಿ ಗತಿ ಶಕ್ತಿ ಮಾಸ್ಟರ್ ಪ್ಲಾನ್ ಪ್ರಾರಂಭವಾಗಿದ್ದು, ಇನ್ಮುಂದೆ ಯೋಜನೆಗಳು ವೇಗವಾಗಿ ಅನುಮತಿ ಪಡೆಯುತ್ತವೆ ಮತ್ತು ಇದು ಲಾಜಿಸ್ಟಿಕ್ ವೆಚ್ಚ ಕಡಿಮೆ ಮಾಡುತ್ತದೆ ಎಂದು ಅವರು ಹೇಳಿದರು.

ಪ್ರಮುಖ ಸುದ್ದಿ :-   ಮೈಸೂರು ಅನಂತಸ್ವಾಮಿ ಧಾಟಿಯಲ್ಲಿ ನಾಡಗೀತೆ : ರಾಜ್ಯ ಸರ್ಕಾರದ ಆದೇಶ ಎತ್ತಿ ಹಿಡಿದ ಹೈಕೋರ್ಟ್‌ ; ದಶಕಗಳ ಸಮಸ್ಯೆಗೆ ತೆರೆ

.

4 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement