2015ರ ಪೊಲೀಸ್ ಠಾಣೆ ಗಲಭೆ ಪ್ರಕರಣ: ಎಎಪಿಯ ಇಬ್ಬರು ಶಾಸಕರು ದೋಷಿಗಳು ಎಂದ ದೆಹಲಿ ನ್ಯಾಯಾಲಯ

ನವದೆಹಲಿ: ಏಳು ವರ್ಷಗಳ ಹಿಂದೆ ಪೊಲೀಸ್‌ ಠಾಣೆಯೊಂದಕ್ಕೆ ಗುಂಪೊಂದು ನುಗ್ಗಿ ಗಲಭೆ ನಡೆಸಿ, ಪೊಲೀಸ್‌ ಸಿಬ್ಬಂದಿ ಮೇಲೆ ಹಲ್ಲೆ ನಡೆಸಲು ಪ್ರಚೋದನೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಮ್‌ ಆದ್ಮಿ ಪಕ್ಷದ (ಎಎಪಿ) ಇಬ್ಬರು ಶಾಸಕರು ಹಾಗೂ ಇತರ 15 ಮಂದಿ ದೋಷಿಗಳು ಎಂದು ಸಂಸದರು ಮತ್ತು ಶಾಸಕರ ಪ್ರಕರಣಗಳ ವಿಚಾರಣೆ ನಡೆಸುತ್ತಿರುವ ದೆಹಲಿಯ ವಿಶೇಷ ನ್ಯಾಯಾಲಯವು ತೀರ್ಪು ನೀಡಿದೆ.
ಪೊಲೀಸ್‌ ಸಿಬ್ಬಂದಿ ಮೇಲೆ ಹಲ್ಲೆ ಮಾಡಲು ಗುಂಪಿಗೆ ಪ್ರಚೋದನೆ ನೀಡಿ ಘೋಷಣೆ ಕೂಗಿದರು ಎಂದು ಸೆಪ್ಟೆಂಬರ್ 7ರಂದು ನಿರ್ಧರಿಸಿದ ರೌಸ್‌ ಅವೆನ್ಯೂ ನ್ಯಾಯಾಲಯದ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ (ಎಸಿಎಂಎಂ) ವೈಭವ್‌ ಮೆಹ್ತಾ, ಶಾಸಕರಾದ ಅಖಿಲೇಶ್‌ ಪಾಟಿ ತ್ರಿಪಾಠಿ, ಸಂಜೀವ್ ಝಾ ಇನ್ನಿತರ ಆರೋಪಿಗಳನ್ನು ದೋಷಿಗಳೆಂದು ಘೋಷಿಸಿದರು.

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189

ಗುಂಪು ಹಿಂಸಾಚಾರಕ್ಕೆ ತಿರುಗಿದಾಗ ಸಂಜೀವ್ ಝಾ ಮತ್ತು ಅಖಿಲೇಶ್ ಪಾಟಿ ತ್ರಿಪಾಠಿ ಇಬ್ಬರೂ ಸ್ಥಳದಲ್ಲಿದ್ದರು. ಜೊತೆಗೆ ಪ್ರಚೋದನೆ ಮತ್ತು ಕುಮ್ಮಕ್ಕು ನೀಡುವಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಸಾಬೀತುಪಡಿಸುವಲ್ಲಿ ಪ್ರಾಸಿಕ್ಯೂಷನ್ ಯಶಸ್ವಿಯಾಗಿದೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.
ಘಟನೆ ಫೆಬ್ರವರಿ 20, 2015ರಂದು ರಾತ್ರಿ ನಡೆದಿತ್ತು, ಈ ಘಟನೆಯಲ್ಲಿ ರಾತ್ರಿ ಬುರಾರಿ ಪೊಲೀಸ್ ಠಾಣೆಯಲ್ಲಿ ಪೊಲೀಸ್ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿತು ಮತ್ತು ಆವರಣದಲ್ಲಿದ್ದ ಆಸ್ತಿಗೆ ಹಾನಿ ಮಾಡಿತ್ತು. ಪೊಲೀಸರು ಬಂಧನದಲ್ಲಿರಿಸಿದ್ದ ಇಬ್ಬರ ಮೇಲೆ ಹಲ್ಲೆ ಮಾಡಲು ತಮ್ಮ ವಶಕ್ಕೆ ನೀಡುವಂತೆ ಒತ್ತಾಯಿಸಿ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಗುಂಪೊಂದು ಪೊಲೀಸ್‌ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿತ್ತು. ತಾವು ಗುಂಪನ್ನು ಸಮಾಧಾನಪಡಿಸಲು ಯತ್ನಿಸಿದರೂ ಶಾಸಕರು ಗುಂಪಿಗೆ ಪ್ರಚೋದನೆ ನೀಡಿ ತಮ್ಮ ಮೇಲೆ ಹಲ್ಲೆ ಮತ್ತು ಕಲ್ಲು ತೂರಾಟ ನಡೆಸುವಂತೆ ಮಾಡಿದರು ಎಂದು ಪೊಲೀಸರು ಆರೋಪಿಸಿದ್ದರು.

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ಟೆಲಿಗ್ರಾಮ್ ಚಾನೆಲ್ ಸೇರಿ
ವಾಟ್ಸಾಪ್ ಗ್ರೂಪ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ಓದಿರಿ :-   ಸೈಬರ್ ವಂಚನೆ ವಿರುದ್ಧದ ಬೃಹತ್ ಕಾರ್ಯಾಚರಣೆ: ದೇಶಾದ್ಯಂತ 105 ಸ್ಥಳಗಳಲ್ಲಿ ಸಿಬಿಐ ದಾಳಿ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

1 / 5. ಒಟ್ಟು ವೋಟುಗಳು 1

ನಿಮ್ಮ ಕಾಮೆಂಟ್ ಬರೆಯಿರಿ

advertisement