ಅಯೋಧ್ಯೆ ರಾಮ ಮಂದಿರ-ಸಂಕೀರ್ಣ ನಿರ್ಮಾಣಕ್ಕೆ ಅಂದಾಜು 1800 ಕೋಟಿ ರೂ. ವೆಚ್ಚ, 3 ಅಂತಸ್ತಿನ ಸೂಪರ್‌ ಸ್ಟ್ರಕ್ಚರ್‌ ಕಟ್ಟಡ ನಿರ್ಮಾಣ ಪ್ರಾರಂಭ: ಟ್ರಸ್ಟ್

ನವದೆಹಲಿ: ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರದ ಮೂರು ಅಂತಸ್ತಿನ ನಿರ್ಮಾಣ ಕಾರ್ಯ ಆರಂಭವಾಗಿದೆ. ಮತ್ತು ಪ್ರಸ್ತುತ ಅಂದಾಜಿನ ಪ್ರಕಾರ, ದೇವಾಲಯ ಮತ್ತು ಸಂಕೀರ್ಣದ ಒಟ್ಟು ನಿರ್ಮಾಣ ವೆಚ್ಚ ಸುಮಾರು 1,800 ಕೋಟಿ ರೂಪಾಯಿಗಳಾಗಬಹುದು ಎಂದು ಶ್ರೀರಾಮ ದೇವಾಲಯ ಟ್ರಸ್ಟ್ ಹೇಳಿದೆ. ಗರ್ಭಗೃಹ ಮತ್ತು ಐದು ಮಂಟಪಗಳನ್ನು(ಮುಖಮಂಟಪಗಳು) ಒಳಗೊಂಡಿರುವ ಮೂರು ಅಂತಸ್ತಿನ ಮೇಲ್ವಿನ್ಯಾಸದ ನಿರ್ಮಾಣ ಕಾರ್ಯವು ಪೂರ್ಣ ಸ್ವಿಂಗ್‌ನಲ್ಲಿ … Continued

ಬೆಂಗಳೂರು ರಾಜಕಾಲುವೆ ಅತಿಕ್ರಮ ತೆರವು ಕಾರ್ಯಾಚರಣೆಯಲ್ಲಿ ಭೇದಭಾವ ಮಾಡುವ ಪ್ರಶ್ನೆಯೇ ಇಲ್ಲ: ಸಿಎಂ ಬೊಮ್ಮಾಯಿ

ಬೆಂಗಳೂರು: ರಾಜಕಾಲುವೆ ಒತ್ತುವರಿ ತೆರವುಗೊಳಿಸುವ ಕಾರ್ಯಾಚರಣೆಯಲ್ಲಿ ಭೇದಭಾವ ಮಾಡುವ ಪ್ರಶ್ನೆಯೇ ಇಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಇಂದು ಸೋಮವಾರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ರಾಜಕಾಲುವೆ ಮೇಲೆ ಕಟ್ಟಡ ಹಾಗೂ ಮನೆ ಕಟ್ಟಿದವರ ಮೇಲೆ ಹಾಗೂ ಕಾಲುವೆ ನೀರನ್ನು ಹರಿದು ಹೋಗಲು ತೊಂದರೆ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಇದರಲ್ಲಿ ಭೇದಿ-ಬಾವ … Continued

ಜ್ಞಾನವಾಪಿ ಮಸೀದಿ ಸಂಕೀರ್ಣ ಪ್ರಕರಣ: ಪೂಜೆಗೆ ಅನುಮತಿ ಕೋರಿರುವ ಹಿಂದುಗಳ ಅರ್ಜಿ ವಿಚಾರಣೆಗೆ ಅರ್ಹ, ವಾರಣಾಸಿ ಕೋರ್ಟ್‌ ಮಹತ್ವದ ತೀರ್ಪು

ವಾರಾಣಸಿ:ಅಂಜುಮನ್ ಇಸ್ಲಾಮಿಯಾ ಮಸೀದಿ ಸಮಿತಿಯು ಜ್ಞಾನವಾಪಿ ಮಸೀದಿಯ ಕಾಂಪೌಂಡ್‌ನಲ್ಲಿ ಪೂಜೆ ಮಾಡುವ ಹಕ್ಕುಗಳನ್ನು ಕೋರಿ ಐವರು ಹಿಂದೂ ಮಹಿಳೆಯರು  ಸಲ್ಲಿಸಿರುವ ಮೊಕದ್ದಮೆಯ ನಿರ್ವಹಣೆಯನ್ನು ಪ್ರಶ್ನಿಸಿ ಸಲ್ಲಿಸಿದ್ದ ಮನವಿಯನ್ನು ಕೋರ್ಟ್‌ ತಿರಸ್ಕರಿಸಿದೆ. ವಾರಾಣಸಿ ಜಿಲ್ಲಾ ನ್ಯಾಯಾಲಯ ಸೋಮವಾರ ಮುಸ್ಲಿಂ ಕಡೆಯ ಅರ್ಜಿಯನ್ನು ತಿರಸ್ಕರಿಸಿದೆ. ಹಿಂದೂ ಕಕ್ಷಿದಾರರ ದಾವೆಯನ್ನು ನ್ಯಾಯಾಲಯದಲ್ಲಿ ನಿರ್ವಹಣೆ ನಡೆಸಬಹುದಾಗಿದೆ ಎಂದು ನ್ಯಾಯಾಲಯ ಹೇಳಿದೆ. ನ್ಯಾಯಾಲಯವು … Continued

ಸೋನಾಲಿ ಫೋಗಟ್ ಹತ್ಯೆ ಪ್ರಕರಣ: ಸಿಬಿಐ ತನಿಖೆಗೆ ಶಿಫಾರಸು ಮಾಡಿದ ಗೋವಾ ಸರ್ಕಾರ

ಪಣಜಿ: ಸೋನಾಲಿ ಫೋಗಟ್ ಹತ್ಯೆ ಪ್ರಕರಣವನ್ನು ಕೇಂದ್ರೀಯ ತನಿಖಾ ದಳ (ಸಿಬಿಐ) ತನಿಖೆಗೆ ಗೋವಾ ಸರ್ಕಾರ ಸೋಮವಾರ ಶಿಫಾರಸು ಮಾಡಿದೆ. ಭಾನುವಾರ, ಸೋನಾಲಿ ಫೋಗಟ್ ಅವರ ಕುಟುಂಬವು ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರನ್ನು ಭೇಟಿ ಮಾಡಿ, ಗೋವಾ ಪೊಲೀಸರು ನಡೆಸಿದ ತನಿಖೆಯಿಂದ ಅತೃಪ್ತಿಗೊಂಡಿರುವ ಕಾರಣ ಕೇಂದ್ರೀಯ ಸಂಸ್ಥೆಯಿಂದ ತನಿಖೆ ನಡೆಸುವಂತೆ ಕೋರಿತ್ತು. ನಾವು … Continued

ರಾಯಚೂರು: ಭಾರತ ಜೋಡೋ ಯಾತ್ರೆಯ ಪೂರ್ವಭಾವಿ ಸಭೆಯ ಬ್ಯಾನರ್​ನಲ್ಲಿ ಸಿದ್ದರಾಮಯ್ಯ ಭಾವಚಿತ್ರ ಇಲ್ಲ, ಅಭಿಮಾನಿಗಳ ಬೇಸರ

ರಾಯಚೂರು: ‘ಭಾರತ ಐಕ್ಯತಾ ಯಾತ್ರೆ’ಯ ಪೂರ್ವಭಾವಿ ಸಭೆಯ ಬ್ಯಾನರ್‌ನಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾವಚಿತ್ರ ನಾಪತ್ತೆಯಾಗಿರುವ ವಿದ್ಯಮಾನ ನಡೆದ ಬಗ್ಗೆ ವರದಿಯಾಗಿದೆ. ನಡೆದಿದೆ. ಇದರಿಂದಾಗಿ ಸಿದ್ದರಾಮಯ್ಯನವರ ಅಭಿಮಾನಿಗಳಿಗೆ ಬೇಸರವಾಗಿದೆ. ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಹಮ್ಮಿಕೊಂಡಿರುವ ಭಾರತ ಐಕ್ಯತಾ ಯಾತ್ರೆ ನಿಮಿತ್ತ ಡಿ.ಕೆ.ಶಿವಕುಮಾರ ಸ್ಥಳ ಪರಿಶೀಲನೆಗೆ ಆಗಮಿಸಿದ್ದಾರೆರಾಯಚೂರಿನ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ … Continued

ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ: ಶೇ.37.08 ವಿದ್ಯಾರ್ಥಿಗಳು ಉತ್ತೀರ್ಣ

ಬೆಂಗಳೂರು: ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ಫಲಿತಾಂಶ ಇಂದು, ಸೋಮವಾರ ಪ್ರಕಟವಾಗಿದೆ. ಆಯಾ ಕಾಲೇಜುಗಳಲ್ಲೂ ಫಲಿತಾಂಶ ಪ್ರಕಟವಾಗಲಿದ್ದು, ವಿದ್ಯಾರ್ಥಿಗಳು https://www.karresults.nic.in ವೆಬ್​ಸೈಟ್​ನಲ್ಲಿ ಫಲಿತಾಂಶ ನೋಡಬಹುದಾಗಿದೆ. ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗೆ 1,75,905 ವಿದ್ಯಾರ್ಥಿಗಳು ಹಾಜರಾಗಿದ್ದರು. ಅದರಲ್ಲಿ 65,233 ವದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಅವರಲ್ಲಿ 36,637 ವಿದ್ಯಾರ್ಥಿಗಳು ಹಾಗೂ 28,596 ವಿದ್ಯಾರ್ಥಿನಿಯರಾಗಿದ್ದಾರೆ. ತೇರ್ಗಡೆಯಾಗಿರುವವರ ಒಟ್ಟಾರೆ ಶೇಕಡಾವಾರು ಫಲಿತಾಂಶ 37.08 … Continued

ಒಡೆಯನ ಅಂತ್ಯಸಂಸ್ಕಾರಕ್ಕೆ ಬಂದ ಆಕಳ ಕರು, ಹಣೆಗೆ ಮುತ್ತಿಟ್ಟು ಕಣ್ಣೀರು ಸುರಿಸಿ, ಪಾರ್ಥಿವ ಶರೀರಕ್ಕೆ ಪ್ರದಕ್ಷಿಣೆ ಹಾಕಿದ ಮೂಕ ಪ್ರಾಣಿ: ಜನರೂ ಭಾವುಕ

ಹಜಾರಿಬಾಗ್: ಪ್ರಾಣಿಗಳು ಮತ್ತು ಮನುಷ್ಯರ ನಡುವಿನ ಪ್ರೀತಿಯ ಅನೇಕ ಪ್ರಕರಣಗಳು ಮುನ್ನೆಲೆಗೆ ಬರುತ್ತಲೇ ಇರುತ್ತವೆ. ಆದರೆ ಆಕಳು ಕರುವೊಂದು ತನ್ನ ಮಾಲೀಕ ಸತ್ತಾಗ ತೋರಿದ ಪ್ರೀತಿ ಎಲ್ಲರ ಕಣ್ಣಾಲಿಗಳನ್ನೂ ತೇವವಾಗಿಸಿದೆ. ವ್ಯಕ್ತಿಯ ಮೃತಪಟ್ಟ ನಂತರ, ಅತ ಸಾಕಿದ್ದ ಆಕಳು ಕರು ಅವನ ಮೃತದೇಹದ ಬಳಿಗೆ ತಲುಪಿತು. ಅಷ್ಟೇ ಆದರೆ ಅಂತಹ ವಿಶೇಷ ಇರಲಿಲ್ಲ. ಆದರೆ ಈ … Continued

ಇಂದಿನಿಂದ ವಿಧಾನಮಂಡಲ ಅಧಿವೇಶನ ಆರಂಭ

ಬೆಂಗಳೂರು: ಇಂದಿನಿಂದ (ಸೆಪ್ಟಂಬರ್‌ 12) ವಿಧಾನಮಂಡಲದ ಅಧಿವೇಶನ ಆರಂಭವಾಗಲಿದ್ದು, ಸೆಪ್ಟಂಬರ್‌ 23 ರವರೆಗೆ ನಡೆಯಲಿದೆ. ಮೊದಲ ದಿನದಿಂದಲೇ ಅಧಿವೇಶನ ಕಾವೇರುವ ಸಾಧ್ಯತೆಯಿದೆ. ಕೆಲವು ಮಸೂದೆಗಳನ್ನು ಮಂಡಿಸಿ ಅಂಗೀಕಾರ ಪಡೆದುಕೊಳ್ಳಲು ಆಡಳಿತ ಪಕ್ಷ ಮುಂದಾಗಲಿದೆ. ಸುಗ್ರೀವಾಜ್ಞೆ ಮೂಲಕ ಜಾರಿಗೆ ತಂದಿರುವ ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ಮಸೂದೆ, ಬೆಂಗಳೂರು ಸಂಚಾರ ದಟ್ಟಣೆ ನಿರ್ವಹಣೆಗೆ ಪ್ರತ್ಯೇಕ ಪ್ರಾಧಿಕಾರ … Continued

ಗ್ಯಾಂಗ್‌ಸ್ಟರ್‌ಗಳ ಅಪರಾಧ ಸಿಂಡಿಕೇಟ್‌ ದಮನಕ್ಕೆ ಮುಂದಾದ ಎನ್‌ಐಎ: ದೇಶಾದ್ಯಂತ 60 ಸ್ಥಳಗಳಲ್ಲಿ ದಾಳಿ

ನವದೆಹಲಿ: ಗ್ಯಾಂಗ್‌ಗಳು ಮತ್ತು ಅಪರಾಧ ಸಿಂಡಿಕೇಟ್‌ಗಳನ್ನು ಹತ್ತಿಕ್ಕಲು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಸೋಮವಾರ ಭಾರತದಾದ್ಯಂತ 60 ಸ್ಥಳಗಳಲ್ಲಿ ದಾಳಿ ನಡೆಸಿತು. ಈ 60 ಸ್ಥಳಗಳಲ್ಲಿ ದೆಹಲಿ, ರಾಷ್ಟ್ರೀಯ ರಾಜಧಾನಿ ಪ್ರದೇಶ, ಹರಿಯಾಣ, ಉತ್ತರ ಪ್ರದೇಶ ಮತ್ತು ಪಂಜಾಬ್‌ನ ಸ್ಥಳಗಳು ಸೇರಿವೆ. ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್, ಬಾಂಬಿಹಾ ಗ್ಯಾಂಗ್ ಮತ್ತು ನೀರಜ್ ಬವಾನಾ ಗ್ಯಾಂಗ್‌ಗೆ ಸೇರಿದ … Continued

ಸೆಪ್ಟೆಂಬರ್ 17ರಿಂದ ಪ್ರಧಾನಿ ಮೋದಿಗೆ ನೀಡಿದ ಸಾವಿರಕ್ಕೂ ಹೆಚ್ಚು ಉಡುಗೊರೆಗಳ ಹರಾಜು

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರಿಗೆ ಸಾರ್ವಜನಿಕರು, ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು, ಕ್ರೀಡಾಪಟುಗಳು ಹಾಗೂ ಇತರರು ನೀಡಿರುವ 1,200ಕ್ಕೂ ಅಧಿಕ ಉಡುಗೊರೆಗಳ ಹರಾಜು ಪ್ರಕ್ರಿಯೆಯು ಪ್ರಧಾನಿಯವರ ಜನ್ಮದಿನದ ನಿಮಿತ್ತ ಸೆಪ್ಟೆಂಬರ್ 17ರಿಂದ ಪ್ರಾರಂಭವಾಗಲಿದ್ದು, ಅಕ್ಟೋಬರ್‌ 2ರ ವರೆಗೆ ಆನ್‌ಲೈನ್‌ನಲ್ಲಿ ನಡೆಯಲಿದೆ. ಬಂದ ಆದಾಯವು ನಮಾಮಿ ಗಂಗಾ ಮಿಷನ್‌ಗೆ ಹೋಗುತ್ತದೆ. ಸೆಪ್ಟೆಂಬರ್ 17 ರಂದು ಹರಾಜು ಆರಂಭವಾಗುತ್ತದೆ ಮತ್ತು … Continued