ಸಿಕಂದರಾಬಾದ್‌ ಇ-ಬೈಕ್ ಶೋರೂಮ್‌ನಲ್ಲಿ ಬೆಂಕಿ ಅವಘಡ: ಕನಿಷ್ಠ 8 ಜನರು ಸಾವು, 2ನೇ ಮಹಡಿಯಿಂದ ಜಿಗಿದು ರಕ್ಷಿಸಿಕೊಂಡ ಹಲವರು

ಹೈದರಾಬಾದ್‌: ಸೋಮವಾರ ರಾತ್ರಿ ಸಿಕಂದರಾಬಾದ್‌ನ ಎಲೆಕ್ಟ್ರಿಕ್ ಶೋರೂಮ್‌ನಲ್ಲಿ ಭಾರಿ ಬೆಂಕಿ ಅವಘಡದಲ್ಲಿ ಮಹಿಳೆ ಸೇರಿದಂತೆ ಕನಿಷ್ಠ ಎಂಟು ಜನರು ಸಾವಿಗೀಡಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ರಾತ್ರಿ 10 ಗಂಟೆಗೆ ಬೆಂಕಿ ಕಾಣಿಸಿಕೊಂಡಿದ್ದು, ಪಾಸ್‌ಪೋರ್ಟ್ ಕಚೇರಿಯ ಸಮೀಪವಿರುವ ಕಟ್ಟಡದ ಮೇಲಿನ ನಾಲ್ಕು ಮಹಡಿಗಳಲ್ಲಿರುವ ಲಾಡ್ಜ್ ಮತ್ತು ರೆಸ್ಟೋರೆಂಟ್‌ಗೆ ಬೆಂಕಿ ವ್ಯಾಪಿಸಿದೆ.
ಬೆಂಕಿ ಮತ್ತು ಹೊಗೆ ಹೊರಹೊಮ್ಮುತ್ತಿರುವುದನ್ನು ಗಮನಿಸಿದ ಹೋಟೆಲ್ ಸಿಬ್ಬಂದಿ ಹಾಗೂ ಅತಿಥಿಗಳು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಅಗ್ನಿಶಾಮಕ ದಳದವರು ದೌಡಾಯಿಸಿ ಬೆಂಕಿ ನಂದಿಸಿದ್ದಾರೆ.
ಪ್ರಾಥಮಿಕ ತನಿಖೆಯ ಪ್ರಕಾರ ನೆಲಮಹಡಿಯಲ್ಲಿ ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು ಚಾರ್ಜ್ ಮಾಡುತ್ತಿದ್ದು, ಶಾರ್ಟ್ ಸರ್ಕ್ಯೂಟ್ ಬೆಂಕಿಗೆ ಕಾರಣವಾಗಿರಬಹುದು ಎಂದು ಪೊಲೀಸರು ತಿಳಿಸಿದ್ದಾರೆ. ಸುಮಾರು 24 ಜನರು ಒಳಗೆ ಸಿಲುಕಿಕೊಂಡಿದ್ದರು, ಅದರಲ್ಲಿ ಆರು ಮಂದಿ ಸಾವಿಗೀಡಾಗಿದ್ದಾರೆ ಮತ್ತು ಇತರರನ್ನು ರಕ್ಷಿಸಲಾಗಿದೆ ಮತ್ತು ಮೃತರಲ್ಲಿ ಹೆಚ್ಚಿನವರು ಬೇರೆ ರಾಜ್ಯಗಳಿಗೆ ಸೇರಿದವರು.

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189

ಸಿಕಂದರಾಬಾದ್‌ನ ಹೋಟೆಲ್‌ನಲ್ಲಿ ಬೆಂಕಿ ಕಾಣಿಸಿಕೊಂಡು ಆರು ಮಂದಿ ಸಾವಿಗೀಡಾಗಿದ್ದಾರೆ. ನೆಲಮಹಡಿಯಲ್ಲಿನ ಎಲೆಕ್ಟ್ರಿಕ್ ಸ್ಕೂಟರ್ ರೀಚಾರ್ಜಿಂಗ್ ಘಟಕದಲ್ಲಿ ಬೆಂಕಿ ಕಾಣಿಸಿಕೊಂಡಿತು, ಹೊಗೆ 1 ಮತ್ತು 2 ನೇ ಮಹಡಿಯಲ್ಲಿ ತಂಗಿದ್ದ ಜನರನ್ನು ಆವರಿಸಿತು. ಹಲವರು ಕಟ್ಟಡದಿಂದ ಜಿಗಿದು ರಕ್ಷಿಸಿಕೊಂಡಿದ್ದಾರೆ. ಸ್ಥಳೀಯರು ಅವರನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ, ಸ್ಥಳದಲ್ಲೇ ಅಗ್ನಿಶಾಮಕ ದಳವಿದೆ ಎಂದು ಹೈದರಾಬಾದ್ ಕಮಿಷನರ್ ಸಿವಿ ಆನಂದ್ ತಿಳಿಸಿದ್ದಾರೆ. ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಮತ್ತಿಬ್ಬರು ಮೃತಪಟ್ಟಿದ್ದಾರೆ
ನೆಲ ಮಹಡಿಯಲ್ಲಿರುವ ಶೋರೂಂನಲ್ಲಿ ಬೆಂಕಿ ಕಾಣಿಸಿಕೊಂಡ ನಂತರ ಕಟ್ಟಡದ ಮೇಲಿನ ಮಹಡಿಯಲ್ಲಿರುವ ಲಾಡ್ಜ್‌ಗೆ ದಟ್ಟವಾದ ಹೊಗೆ ಆವರಿಸಿದೆ.

ಓದಿರಿ :-   ಕೆನಡಾದ ಭಗವದ್ಗೀತೆ ಉದ್ಯಾನದಲ್ಲಿ ವಿಧ್ವಂಸಕ ಕೃತ್ಯ: ಭಾರತದ ಖಂಡನೆ

ಇದು ಅತ್ಯಂತ ದುರದೃಷ್ಟಕರ ಘಟನೆ. ಅಗ್ನಿಶಾಮಕ ದಳದ ತಂಡಗಳು ಲಾಡ್ಜ್‌ನಿಂದ ಜನರನ್ನು ರಕ್ಷಿಸಲು ಪ್ರಯತ್ನಿಸಿದವು ಆದರೆ ಭಾರೀ ಹೊಗೆಯಿಂದಾಗಿ ಕೆಲವರು ಸಾವಿಗೀಡಾದರು. ಕೆಲವರನ್ನು ಲಾಡ್ಜ್‌ನಿಂದ ರಕ್ಷಿಸಲಾಗಿದೆ. ಘಟನೆ ಹೇಗೆ ಸಂಭವಿಸಿತು ಎಂದು ನಾವು ತನಿಖೆ ನಡೆಸುತ್ತಿದ್ದೇವೆ ಎಂದು ತೆಲಂಗಾಣ ಗೃಹ ಸಚಿವ ಮೊಹಮ್ಮದ್ ಮಹಮೂದ್ ಅಲಿ ತಿಳಿಸಿದ್ದಾರೆ.
ಅಗ್ನಿ ಅವಘಡದಲ್ಲಿ ಸಾವಿಗೀಡಾದವರಿಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದು, ಮೃತರ ಕುಟುಂಬಕ್ಕೆ 2 ಲಕ್ಷ ರೂ.ಗಳ ಆರ್ಥಿಕ ನೆರವು ಘೋಷಿಸಿದ್ದಾರೆ.
ರಾಜ್ಯ ಪಶುಸಂಗೋಪನಾ ಸಚಿವ, ಟಿ.ಶ್ರೀನಿವಾಸ್ ಯಾದವ್ ಅವರು ಸ್ಥಳಕ್ಕೆ ಧಾವಿಸಿದ್ದು, ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಯ ಮೇಲ್ವಿಚಾರಣೆ ನಡೆಸುತ್ತಿದ್ದಾರೆ.

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ಟೆಲಿಗ್ರಾಮ್ ಚಾನೆಲ್ ಸೇರಿ
ವಾಟ್ಸಾಪ್ ಗ್ರೂಪ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

4 / 5. ಒಟ್ಟು ವೋಟುಗಳು 1

ನಿಮ್ಮ ಕಾಮೆಂಟ್ ಬರೆಯಿರಿ

advertisement