ಈ ವಿದ್ಯಾರ್ಥಿಗಳಿಗೆ ಮಾತ್ರ ಅಕ್ಟೋಬರ್‌ 31ರವರೆಗೆ ಎನ್‌ಡಬ್ಲ್ಯುಕೆಆರ್‌ಟಿಸಿ ಬಸ್‌ಗಳಲ್ಲಿ ಪ್ರಯಾಣಿಸಲು ಅವಕಾಶ, ಉಳಿದವರಿಗೆ ಹೊಸ ಬಸ್‌ಪಾಸ್‌ ಪಡೆಯಲು ಸೂಚನೆ

ಹುಬ್ಬಳ್ಳಿ: ಅಂತಿಮ ವರ್ಷದ ಪದವಿ/ ಡಿಪ್ಲೋಮಾ/ ಸ್ನಾತಕೋತ್ತರ/ ವೃತ್ತಿಪರ ಕೋರ್ಸ್/ ಸಂಜೆ ಕಾಲೇಜು/ ಕಾನೂನು ವಿದ್ಯಾರ್ಥಿಗಳ ಪರೀಕ್ಷೆಗಳು ಬಾಕಿ ಇರುವುದರಿಂದ ವಿದ್ಯಾರ್ಥಿಗಳಿಗೆ ತರಗತಿ ಹಾಗೂ ಪರೀಕ್ಷೆಗಳಿಗೆ ಹಾಜರಾಗಲು ಅವಧಿ ವಿಸ್ತರಿಸಿಕೊಂಡ ರಶೀದಿ ಹಾಗೂ ಪ್ರಸ್ತುತ ಚಾಲ್ತಿಯಲ್ಲಿರುವ ಪಾಸುಗಳನ್ನು ತೋರಿಸಿ ಅಕ್ಟೋಬರ್‌ 31ರ ವರೆಗೆ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ನಗರ/ಹೊರವಲಯ/ಸಾಮಾನ್ಯ/ವೇಗದೂತ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ.

ಅಂತಿಮ ವರ್ಷದ ವಿದ್ಯಾರ್ಥಿಗಳನ್ನು ಹೊರತುಪಡಿಸಿ, ಇನ್ನುಳಿದ ಎಲ್ಲಾ ವಿದ್ಯಾರ್ಥಿಗಳ ಚಾಲ್ತಿ ಬಸ್ ಪಾಸ್ ಮಾನ್ಯತಾ ಅವಧಿಯು 30-09-2022ಕ್ಕೆ ಮುಕ್ತಾಯಗೊಳ್ಳುತ್ತಿದ್ದು, ನಿಗದಿತ ದಿನಾಂಕದ ನಂತರ ಈ ಬಸ್‌ ಪಾಸುಗಳ ಮಾನ್ಯತಾ ಅವಧಿಯನ್ನು ವಿಸ್ತರಿಸಲಾಗುವುದಿಲ್ಲ ಎಂದು ತಿಳಿಸಲಾಗಿದೆ.

ಆದ್ದರಿಂದ ಇಂತಹ ವಿದ್ಯಾರ್ಥಿಗಳಿಗೆ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯಾಪ್ತಿಯ ಪ್ರಮುಖ ಬಸ್ ನಿಲ್ದಾಣಗಳ ಪಾಸ್ ಕೌಂಟರ್‌ಗಳಲ್ಲಿ ಬಸ್ ಪಾಸ್ ವಿತರಿಸುವ ಪ್ರಕ್ರಿಯೆ ಜಾರಿಯಲ್ಲಿದೆ. ಹೀಗಾಗಿ ಕೊನೆಯ ಸಮಯದಲ್ಲಿ ನಿರ್ದಿಷ್ಟ ಪಾಸ್ ಕೌಂಟರ್‌ಗಳಲ್ಲಿ ಉಂಟಾಗಬಹುದಾದ ಅನಗತ್ಯ ಜನದಟ್ಟಣೆ ಕಡಿಮೆ ಮಾಡುವ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಪಾಸ್‌ ಮುಕ್ತಾಯದ ಕೊನೆಯ ತಿಂಗಳ ದಿನಾಂಕದವರೆಗೆ ಕಾಯದೆ, ಆದಷ್ಟು ಬೇಗ ಸೇವಾ ಸಿಂಧು ಆನ್‌ಲೈನ್ ಪೋರ್ಟಲ್ ಮುಖಾಂತರ ಅರ್ಜಿ ಸಲ್ಲಿಸಿ ಬಸ್ ಪಾಸ್ ಪಡೆಯುವಂತೆ ಕೋರಲಾಗಿದೆ. ಈ ಸೌಲಭ್ಯದ ಸದುಪಯೋಗ ಪಡೆದು ಸಂಸ್ಥೆಯೊಂದಿಗೆ ಸಹಕರಿಸಬೇಕು ಎಂದು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಮುಖ್ಯ ಸಂಚಾರ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಮುಖ ಸುದ್ದಿ :-   ವೀಡಿಯೊ...| ಎಲ್ಲರೆದುರು ಸರ್ಪಕ್ಕೆ ಮುತ್ತಿಕ್ಕಿದ ಭೂಪ...ಆದ್ರೆ ನಂತರ ಆದದ್ದೇ ಬೇರೆ

2 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement