
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೆಪ್ಟೆಂಬರ್ 26ರಿಂದ ಅಕ್ಟೋಬರ್ 10ರ ವರೆಗೆ ರಜೆ ನೀಡುವಂತೆ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ ಈ ಸಂಬಂಧ ಸೂಚನೆ ನೀಡಿದ್ದಾರೆ.
ಸಚಿವರೊಂದಿಗೆ ಚರ್ಚಿಸಿರುವ ಶಾಸಕ ವೇದವ್ಯಾಸ್ ಕಾಮತ್ ಅವರು ದಸರಾ ಹಬ್ಬಕ್ಕೆ ಪೂರಕವಾಗುವಂತೆ ದಕ್ಷಿಣ ಕನ್ನಡ ಜಿಲ್ಲೆಗೆ ರಜೆ ನೀಡಲು ಮನವಿ ಮಾಡಿಕೊಂಡಿದ್ದರು. ಅದಕ್ಕೆ ಸ್ಪಂದಿಸಿರುವ ಸಚಿವರು ಅಕ್ಟೋಬರ್ 2ರ ಗಾಂಧಿ ಜಯಂತಿ ದಿನವನ್ನು ಹೊರತುಪಡಿಸಿ ದಸರಾ ರಜೆ ನೀಡುವಂತೆ ಸೂಚಿಸಿದ್ದಾರೆ. ಹಾಗೂ ಅಕ್ಟೋಬರ್ 2ರ ಗಾಂಧಿ ಜಯಂತಿಯನ್ನು ಶಾಲೆಗಳಲ್ಲಿ ಆಚರಿಸಬೇಕು ಎಂದು ಷರತ್ತು ವಿಧಿಸಿ ರಜೆಗೆ ಮಂಜೂರಿ ನೀಡಿದ್ದಾರೆ.

ಈ ಕುರಿತು ಮಾತನಾಡಿದ ಶಾಸಕ ವೇವ್ಯಾಸ ಕಾಮತ್, ಸೆಪ್ಟಂಬರ್ 26ರಿಂದ ನವರಾತ್ರಿ ಪ್ರಾರಂಭವಾಗುತ್ತಿದ್ದು, ಅದ್ದೂರಿಯಾಗಿ ನಡೆಯುವ ಮಂಗಳೂರು ದಸರಾ, ಶತಮಾನೋತ್ಸವದ ಸಂಭ್ರಮಾಚರಣೆಯಲ್ಲಿರುವ ರಥಬೀದಿ ಶಾರದಾ ಮಹೋತ್ಸವ, ಮಂಗಳಾದೇವಿ ದೇವಸ್ಥಾನದ ನರವಾತ್ರಿ ಸೇರಿದಂತೆ ಜಿಲ್ಲೆಯಲ್ಲಿ ಅತ್ಯಂತ ಸಂಭ್ರಮದಲ್ಲಿ ದಸರಾ ಹಬ್ಬವನ್ನು ಆಚರಿಸಲಾಗುತ್ತದೆ. ಆದ್ದರಿಂದ ರಜೆಯನ್ನು ದಸರಾ ಹಬ್ಬದ ಸಂದರ್ಭದಲ್ಲಿಯೇ ನೀಡುವಂತೆ ಶಿಕ್ಷಣ ಸಚಿವರಿಗೆ ಮನವಿ ಮಾಡಿದ್ದೆವು ಎಂದರು.


ನಿಮ್ಮ ಕಾಮೆಂಟ್ ಬರೆಯಿರಿ