ಭದ್ರಾವತಿ : ಚಲಿಸುತ್ತಿದ್ದ ರೈಲು ಹತ್ತಲು ಹೋಗಿ ತಂದೆ- ಮಗ ಸಾವು

ಶಿವಮೊಗ್ಗ: ಚಲಿಸುತ್ತಿದ್ದ ರೈಲು ಹತ್ತಲು ಹೋಗಿ ಪ್ಲಾಟ್ ಫಾರಂನಿಂದ ಕೆಳಗೆ ಬಿದ್ದು ತಂದೆ-ಮಗ ಸಾವಿಗೀಡಾದ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ರೈಲ್ವೆ ನಿಲ್ದಾಣದಲ್ಲಿ ನಡೆದ ವರದಿಯಾಗಿದೆ.
ಭದ್ರಾವತಿಯ ರೈಲ್ವೆ ನಿಲ್ದಾಣದಲ್ಲಿ ಮೋಹನಪ್ರಸಾದ (70) ಹಾಗೂ ಅಮರನಾತ (31) ಮೃತಪಟ್ಟವರು ಎಂದು ಗುರುತಿಸಲಾಗಿದೆ. ತಂದೆ ಮಗ ಇಬ್ಬರೂ ತಾಳಗುಪ್ಪ -ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ರೈಲಿನ ಮೂಲಕ ಬೆಂಗಳೂರಿಗೆ ತೆರಳಲು ಆಗಮಿಸಿದ್ದರು. ಇಬ್ಬರೂ ನಿಲ್ದಾಣಕ್ಕೆ ಬಂದಾಗ ರೈಲು ಅದಾಗಲೇ ಹೊರಟಿತ್ತು. ಚಲಿಸುತ್ತಿದ್ದ ರೈಲು ಹತ್ತಲು ಹೋಗಿ ಮಗ ಕಾಲು ಜಾರಿ ಕೆಳಗೆ ಬಿದ್ದಿದ್ದಾರೆ. ಮಗನ ರಕ್ಷಣೆಗೆ ಧಾವಿಸಿದ ತಂದೆ ಕೂಡ ರೈಲಿಗೆ ಸಿಲುಕಿ ಸಾವಿಗೀಡಾಗಿದ್ದಾರೆ.

ಮಗ ಅಮರನಾಥ ಅವರ ತಲೆಗೆ ಗಂಭೀರವಾಗಿ ಪೆಟ್ಟು ಬಿದ್ದಿದ್ದರಿಂದ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಮೋಹನಪ್ರಸಾದ ಅವರಿಗೆ ತಕ್ಷಣವೇ ಭದ್ರಾವತಿಯ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಯಿತು. ನಂತರ ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿಗೆ ಕರೆದೊಯ್ಯುತ್ತಿದ್ದಾಗ ಮಾರ್ಗ ಮಧ್ಯೆ ಅವರು ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ. ಮೋಹನಪ್ರಸಾದ ಅವರು ವಿಐಎಸ್‌ಎಲ್ ನಿವೃತ್ತ ನೌಕರರಾಗಿದ್ದರು.

ಪ್ರಮುಖ ಸುದ್ದಿ :-   ಕರ್ನಾಟಕದಲ್ಲಿ ಪೂರ್ವ ಮುಂಗಾರು ಚುರುಕು; ಏಪ್ರಿಲ್‌ 19 ರಿಂದ ಮೂರು ದಿನ ಈ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

2 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement