KSP ನೇಮಕಾತಿ-3484 ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್‌ ಹುದ್ದೆ ಭರ್ತಿಗೆ ಅಧಿಸೂಚನೆ: ಎಸ್‌ಎಸ್‌ಎಲ್‌ಸಿ ಆದವರು ಅರ್ಜಿ ಸಲ್ಲಿಸಬಹುದು

ಪೊಲೀಸ್​ ಕಾನ್ಸ್​ಟೇಬಲ್ (Police Constable)​ ಹುದ್ದೆ ಭರ್ತಿಗೆ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದ್ದು, ಕರ್ನಾಟಕ ಪೊಲೀಸ್ ಇಲಾಖೆಯ ಕಲ್ಯಾಣ ಕರ್ನಾಟಕ ವೃಂದ ಹಾಗೂ ಉಳಿಕೆ ಮೂಲ ವೃಂದದ ಒಟ್ಟು 3484 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. ರಾಜ್ಯದ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದ್ದು,ಅಕ್ಟೋಬರ್​ 31 ಅರ್ಜಿ ಸಲ್ಲಿಕೆಗೆ ಕೊನೆಯ ದಿನವಾಗಿದೆ.
ಸಂಸ್ಥೆಯ ಹೆಸರು: ಕರ್ನಾಟಕ ರಾಜ್ಯ ಪೊಲೀಸ್ (KSP)
ಹುದ್ದೆಯ ಹೆಸರು: ಪೊಲೀಸ್ ಕಾನ್ಸ್ಟೇಬಲ್ (CAR/ DAR)
ಹುದ್ದೆಗಳ ಸಂಖ್ಯೆ: 3484  ((ಪುರುಷ ತೃತೀಯ ಲಿಂಗಿಗಳಿಗೆ 68 ಹುದ್ದೆಗಳು ಸೇರಿ)
ಉದ್ಯೋಗ ಸ್ಥಳ: ಕರ್ನಾಟಕ
ಮಾಸಿಕ ಸಂಬಳ: 23500- 47650 ರೂ.ಗಳು
ಹುದ್ದೆಗಳ ಸಂಖ್ಯೆ- ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್ – 3064 (ರಾಜ್ಯಾದ್ಯಂತ ), ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್- 420 (ಕಲ್ಯಾಣ ಕರ್ನಾಟಕ)

ಶೈಕ್ಷಣಿಕ ಅರ್ಹತೆ: ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಮಾನ್ಯತೆ ಪಡೆದ ಯಾವುದೇ ಮಂಡಳಿಯಿಂದ ಎಸ್‌ಎಸ್‌ಎಲ್‌ಸಿ ಅಥವಾ ತತ್ಸಾಮನ ಪರೀಕ್ಷೆ ಪೂರ್ಣಗೊಳಿಸಿರಬೇಕು.
ವಯೋಮಿತಿ: ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಯ ಅಧಿಸೂಚನೆ ಪ್ರಕಾರ ಮೇಲೆ ಅಭ್ಯರ್ಥಿಯ ವಯಸ್ಸು ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 25 ವರ್ಷಗಳನ್ನು ಮೀರಬಾರದು.
ವಯೋಮಿತಿ ಸಡಿಲಿಕೆ- ಪ.ಜಾ ಹಾಗೂ ಪ.ಪಂ ಅಭ್ಯರ್ಥಿಗಳಿಗೆ 5 ವರ್ಷಗಳು ಹಾಗೂ ಪ್ರವರ್ಗ-2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳಿಗೆ 3 ವರ್ಷಗಳು
ಅರ್ಜಿ ಶುಲ್ಕ:
ಪ.ಜಾ, ಪ.ಪಂ ಮತ್ತು ಪ್ರವರ್ಗ 1 ಅಭ್ಯರ್ಥಿಗಳು: 200 ರೂ.
ಸಾಮಾನ್ಯ, ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳು: 400 ರೂ.
ಪಾವತಿ ವಿಧಾನ: ಆನ್‌ಲೈನ್-ಶೀಘ್ರದಲ್ಲಿ ಪೊಲೀಸ್ ಇಲಾಖೆ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಆಗಲಿದೆ. ಸೆಪ್ಟೆಂಬರ್ 19 ರಿಂದ ಅಕ್ಟೋಬರ್ 31 ರವರೆಗೆ ಆನ್‌ಲೈನ್‌ ಮೂಲಕ ಅರ್ಜಿ ಸ್ವೀಕಾರ ಮಾಡಲಾಗುತ್ತದೆ.
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ, ದೈಹಿಕ ಗುಣಮಟ್ಟದ ಪರೀಕ್ಷೆ, ಸಹಿಷ್ಣುತೆ ಪರೀಕ್ಷೆ, ವೈದ್ಯಕೀಯ ಪರೀಕ್ಷೆ

ಪ್ರಮುಖ ಸುದ್ದಿ :-   ಬೆಂಗಳೂರು: ರೈಲಿಗೆ ಸಿಲುಕಿ ಮೂವರು ಸಾವು

ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 19 ಸೆಪ್ಟೆಂಬರ್, 2022
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31 ಅಕ್ಟೋಬರ್, 2022
ಅರ್ಜಿ ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ 3 ನವೆಂಬರ್, 2022

ಅಧಿಸೂಚನೆ ಲಿಂಕ್‌ಗಳು
ಅಧಿಕೃತ ಅಧಿಸೂಚನೆ (3064 ಪೋಸ್ಟ್‌ಗಳು): ಕ್ಲಿಕ್ ಮಾಡಿpolice recruit-constabel-2022
ಅಧಿಕೃತ ಅಧಿಸೂಚನೆ (420 ಪೋಸ್ಟ್‌ಗಳು): ಕ್ಲಿಕ್ ಮಾಡಿ-police recruit-constable-kalyan karnataka-2022
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವುದು-
ಅಧಿಕೃತ ವೆಬ್‌ಸೈಟ್: ksp.karnataka.gov.in

2 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement