ಥ್ಯಾಂಕ್ ಗಾಡ್ ಸಿನೆಮಾದಲ್ಲಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ : ಬಾಲಿವುಡ್‌ ನಟರಾದ ಅಜಯ್ ದೇವಗನ್, ಸಿದ್ಧಾರ್ಥ್ ಮಲ್ಹೋತ್ರಾ ವಿರುದ್ಧ ದೂರು

ಜೌನಪುರ: ಮುಂಬರುವ ಚಿತ್ರ ಥ್ಯಾಂಕ್ ಗಾಡ್‌ನಲ್ಲಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲಾಗಿದೆ ಎಂದು ಆರೋಪಿಸಿ ಬಾಲಿವುಡ್‌ ನಟರಾದ ಅಜಯ್ ದೇವಗನ್, ಸಿದ್ಧಾರ್ಥ ಮಲ್ಹೋತ್ರಾ ಮತ್ತು ನಿರ್ದೇಶಕ ಇಂದ್ರಕುಮಾರ್ ಅವರ ಮೇಲೆ ದೂರು ದಾಖಲಾಗಿದೆ. ಭಗವಾನ್ ಚಿತ್ರಗುಪ್ತನನ್ನು ಪೂಜಿಸುವ ಕಾಯಸ್ಥ ಸಮುದಾಯದ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂದು ಆರೋಪಿಸಿ ಹೆಚ್ಚುವರಿ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಲಾಗಿದೆ. … Continued

ಸುಕೇಶ ಚಂದ್ರಶೇಖರ 200 ಕೋಟಿ ಹಗರಣ : 8 ಗಂಟೆಗಳ ಕಾಲ ಬಾಲಿವುಡ್‌ ನಟಿ ಜಾಕ್ವೆಲಿನ್ ಫರ್ನಾಂಡೀಸ್ ವಿಚಾರಣೆ ನಡೆಸಿದ ಪೊಲೀಸರು

ನವದೆಹಲಿ: ಸುಕೇಶ್ ಚಂದ್ರಶೇಖರ್‌ಗೆ ಸಂಬಂಧಿಸಿದ ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸ್‌ ಆರ್ಥಿಕ ಅಪರಾಧಗಳ ವಿಭಾಗದ ಮುಂದೆ ವಿಚಾರಣೆಗೆ ಬುಧವಾರ ಹಾಜರಾಗಿದ್ದ ಜಾಕ್ವೆಲಿನ್ ಫರ್ನಾಂಡೀಸ್ ಮತ್ತು ಪಿಂಕಿ ಇರಾನಿ ನೀಡಿದ ಉತ್ತರದಲ್ಲಿ ದೆಹಲಿ ಪೊಲೀಸರಿಗೆ ಅಸಮಂಜಸತೆ ಕಂಡುಬಂದಿದೆ ಎಂದು ಮೂಲಗಳು ತಿಳಿಸಿವೆ. ಹಿರಿಯ ಅಧಿಕಾರಿಗಳು ಜಾಕ್ವೆಲಿನ್ ಅವರ ಹೇಳಿಕೆಗಳನ್ನು ತಮ್ಮಲ್ಲಿ ಚರ್ಚಿಸಿದ ನಂತರ ನಟಿಯನ್ನು ಮತ್ತೆ … Continued

ಅಯೋಧ್ಯಾ ರಾಮಮಂದಿರ ಉದ್ಘಾಟನೆಗೂ ಮುನ್ನ ಉಡುಪಿ ಪೇಜಾವರ ಶ್ರೀಗಳಿಂದ ದೇಶದ ಉದ್ದಗಲಕ್ಕೂ ರಥಯಾತ್ರೆ ಪ್ರಸ್ತಾಪ

posted in: ರಾಜ್ಯ | 0

ಉಡುಪಿ: ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಗೂ ಮುನ್ನ ರಾಮೇಶ್ವರಂನಿಂದ ಕಾಶ್ಮೀರದವರೆಗೆ ‘ರಥಯಾತ್ರೆ’ ನಡೆಸಲು ಉಡುಪಿ ಪೇಜಾವರ ಮಠದ ಪೀಠಾಧಿಪತಿ ಹಾಗೂ ರಾಮಜನ್ಮಭೂಮಿ ಟ್ರಸ್ಟ್‌ನ ಸದಸ್ಯ ಸ್ವಾಮಿ ವಿಶ್ವಪ್ರಸನ್ನ ತೀರ್ಥರು ಪ್ರಸ್ತಾವನೆ ಮುಂದಿಟ್ಟಿದ್ದಾರೆ. ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಮಮಂದಿರ ಉದ್ಘಾಟನೆಯಲ್ಲಿ ಭಾಗವಹಿಸುವಂತೆ ದೇಶದ ನಾಗರಿಕರನ್ನು ಸೆಳೆಯುವುದು ಯಾತ್ರೆಯ ಉದ್ದೇಶವಾಗಿದೆ ಎಂದು ತಿಳಿಸಿದರು. ಅಯೋಧ್ಯೆಯ ವಿಮೋಚನೆಗಾಗಿ ತಮ್ಮ ಪ್ರಾಣವನ್ನೇ … Continued

ಎಲ್ಲ ಮಾದರಿ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಸ್ಫೋಟಕ ಬ್ಯಾಟ್ಸ್‌ಮನ್ ರಾಬಿನ್‌ ಉತ್ತಪ್ಪ

posted in: ರಾಜ್ಯ | 0

ಬೆಂಗಳೂರು: ಟೀಂ ಇಂಡಿಯಾ ಕ್ರಿಕೆಟಿಗ, ಕನ್ನಡಿಗ ರಾಬಿನ್ ಉತ್ತಪ್ಪ ಎಲ್ಲ ಮಾದರಿ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ಎಲ್ಲಾ ಮಾದರಿ ಕ್ರಿಕೆಟ್‌ನಿಂದ ವಿದಾಯ ಘೋಷಿಸಿದ ರಾಬಿನ್ ಉತ್ತಪ್ಪ ಈಗ ವಿದೇಶಿ ಲೀಗ್ ಟೂರ್ನಿಯಲ್ಲಿ ಆಡುತ್ತಿದ್ದಾರೆ. 2006ರಲ್ಲಿ ಅಂತಾರಾಷ್ಟ್ರೀಯ ಪಂದ್ಯಕ್ಕೆ ಪದಾರ್ಪಣೆ ಮಾಡಿದ ಕೊಡಗಿನ ರಾಬಿನ್ ಉತ್ತಪ್ಪ, ಸ್ಫೋಟಕ ಬ್ಯಾಟ್ಸ್‌ಮನ್ ಎಂದೇ ಹೆಸರು ಪಡೆದಿದ್ದಾರೆ. 2007ರ ಟಿ20 ವಿಶ್ವಕಪ್ … Continued

ಮಗಳು ಜಾನಕಿ ಧಾರಾವಾಹಿ ಖ್ಯಾತಿಯ ಕಿರುತೆರೆಯ ನಟ ಮಂಡ್ಯ ರವಿಪ್ರಸಾದ ಇನ್ನಿಲ್ಲ

posted in: ರಾಜ್ಯ | 0

ಬೆಂಗಳೂರು: ಕನ್ನಡ ಕಿರುತೆರೆಯ ಖ್ಯಾತ ನಟ, ಮಗಳು ಜಾನಕಿ ಖ್ಯಾತಿಯ ನಟ ಮಂಡ್ಯ ರವಿಪ್ರಸಾದ ನಿಧನರಾಗಿದ್ದಾರೆ. ಧಾರಾವಾಹಿಯ ಚಂದು ಭಾರ್ಗಿಯಾಗಿ ಪ್ರೇಕ್ಷಕರ ಹೃದಯ ಗೆದ್ದಿದ್ದಅವರು ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದರು. ಕಿರುತೆರೆ  ನಟ ರವಿಪ್ರಸಾದ ಕಳೆದ ಒಂದು ತಿಂಗಳಿಂದ ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಿಸದೆ ಇಂದು, (ಸೆಪ್ಟೆಂಬರ್ 14) ಸಂಜೆ 6 ಗಂಟೆ … Continued

ವ್ಯಕ್ತಿಯೊಬ್ಬನನ್ನು ಹಿಡಿಯಲು ಬೆಕ್ಕಿನಂತೆ ಮರ ಏರಿದ ಸಿಂಹಿಣಿ, ಮುಂದೇನಾಯ್ತು..? :ವೀಕ್ಷಿಸಿ

ಕಾಡು ಅಥವಾ ಬಯಲಿನಲ್ಲಿ ಪ್ರಾಣೀಗಳನ್ನು ಬೇಟೆಯಾಡುವ ಮತ್ತು ತಿನ್ನುವ ಕಾಡು ಪ್ರಾಣಿಗಳ ಅನೇಕ ವೀಡಿಯೊಗಳನ್ನು ನೋಡುತ್ತಿರುತ್ತೇವೆ. ಆದರೆ ಪಾರ್ಟಿಯಲ್ಲಿ ಸಿಂಹಿಣಿಯೊಂದು ಮನುಷ್ಯನನ್ನು ಅಟ್ಟಿಸಿಕೊಂಡು ಹೋಗುವುದನ್ನು ನೋಡಿದರೆ ಏನನಿಸುತ್ತದೆ? ನಂತರ ಮರ ಏರಿದ ವ್ಯಕ್ತಿಯನ್ನು ಹಿಡಿಯಲು ಮರ ಏರಿದರೆ..? ಇಂತಹದ್ದೇ ಹಳೆಯ ವೀಡಿಯೊವೊಂದು ಈಗ ಮತ್ತೆ ವೈರಲ್‌ ಆಗಿದೆ. ಇದನ್ನು ನೋಡಿದ ನಂತರ ನಿಸ್ಸಂದೇಹವಾಗಿ ನಡುಕ ಬರುವಂತಿದೆ. … Continued

ಅಮೆರಿಕದಲ್ಲಿ ಹಣದುಬ್ಬರಕ್ಕೆ ವಿಶ್ವದ ಶ್ರೀಮಂತರು ಗಡಗಡ: ಒಂದೇ ದಿನಕ್ಕೆ 80,000 ಕೋಟಿ ರೂ. ಕಳೆದುಕೊಂಡ ಜೆಫ್ ಬೆಜೋಸ್, ಮಸ್ಕ್‌ಗೂ ತಟ್ಟಿದ ಭಾರೀ ಬಿಸಿ…!

ವಾಲ್ ಸ್ಟ್ರೀಟ್‌ನಲ್ಲಿ ನಿರೀಕ್ಷಿತಕ್ಕಿಂತ ಹೆಚ್ಚಿನ ಅಮೆರಿಕದ ಹಣದುಬ್ಬರದ ಪರಿಣಾಮ ಅಮೆರಿಕದ ಶ್ರೀಮಂತ ಬಿಲಿಯನೇರ್‌ಗಳ ನಿವ್ವಳ ಮೌಲ್ಯವು ಮಂಗಳವಾರ ಹಠಾತ್‌ ಕುಸಿಯಿತು. ಜೆಫ್ ಬೆಜೋಸ್ ಅವರ ಸಂಪತ್ತು ಒಂದು ದಿನದಲ್ಲಿ $ 9.8 ಶತಕೋಟಿ(ಸುಮಾರು ₹ 80,000 ಕೋಟಿ) ರಯಷ್ಟು ಕುಸಿದಿದೆ. ಇದು ಬ್ಲೂಮ್‌ಬರ್ಗ್ ಬಿಲಿಯನೇರ್ಸ್ ಇಂಡೆಕ್ಸ್‌ನಿಂದ ಟ್ರ್ಯಾಕ್ ಮಾಡಿದವರಲ್ಲಿ ಹೆಚ್ಚಿನ ಕುಸಿತವಾಗಿದೆ. ಬ್ಲೂಮ್‌ಬರ್ಗ್ ಡೇಟಾ ಪ್ರಕಾರ, … Continued

ಕನ್ನಡಕ್ಕೆ ಕಾನೂನಿನ ಬಲ ನೀಡಲು ಈ ಅಧಿವೇಶನದಲ್ಲೇ ಮಸೂದೆ ಮಂಡನೆ: ಸಿಎಂ ಬೊಮ್ಮಾಯಿ

posted in: ರಾಜ್ಯ | 0

ಬೆಂಗಳೂರು: ಎಲ್ಲ ಹಂತಗಳಲ್ಲಿ ಕನ್ನಡ ಕಡ್ಡಾಯಗೊಳಿಸುವುದಕ್ಕಾಗಿ ಅದಕ್ಕೆ ಕಾನೂನು ಬಲ ನೀಡಲು ಇದೇ ಅಧಿವೇಶನದಲ್ಲಿ ಮಸೂದೆ ಮಂಡಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ವಿಧಾನಸಭೆಯಲ್ಲಿ ಮಾತನಾಡಿದ ಅವರು, ಇದೇ ಮೊದಲ ಬಾರಿಗೆ ಕಾನೂನಿನ ಮೂಲಕ ಕನ್ನಡ ಭಾಷೆ ಮತ್ತು ಕನ್ನಡದ ಜನರಿಗೆ ರಕ್ಷಣೆ ನೀಡುವ ಕೆಲಸ ಮಾಡಲಾಗುತ್ತಿದೆ. ರಾಜ್ಯದಲ್ಲಿ ನೆಲೆಸಿರುವ ಅನ್ಯಭಾಷಿಕರು ಕನ್ನಡ ಕಲಿತುಕೊಳ್ಳಲು … Continued

ಭ್ರಷ್ಟಾಚಾರ ಪ್ರಕರಣ: ಯಡಿಯೂರಪ್ಪ, ಕುಟುಂಬ ಸದಸ್ಯರ ವಿರುದ್ಧ ತನಿಖೆಗೆ ವಿಶೇಷ ನ್ಯಾಯಾಲಯದ ಆದೇಶ

ಬೆಂಗಳೂರು: ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಯಡಿಯೂರಪ್ಪ ಮತ್ತು ಅವರ ಕುಟುಂಬಸ್ಥರು ಅಧಿಕಾರ ದುರ್ಬಳಕೆ ಮಾಡಿಕೊಂಡು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (ಬಿಡಿಎ) ವಸತಿ ಯೋಜನೆ ಗುತ್ತಿಗೆ ನೀಡುವ ಸಲುವಾಗಿ ರಾಮಲಿಂಗಂ ಕನಸ್ಟ್ರಕ್ಷನ್‌ ಕಂಪೆನಿಯಿಂದ ಕೋಟ್ಯಂತರ ರೂಪಾಯಿಗಳ ನಗದು ಮತ್ತು ಶೆಲ್‌ ಕಂಪೆನಿಗಳ ಮೂಲಕ ಲಂಚ ಪಡೆದಿದ್ದಾರೆ ಎಂಬ ಆರೋಪಿಸಿ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ಬೆಂಗಳೂರಿನ ಜನಪ್ರತಿನಿಧಿಗಳ … Continued

ಮುರುಘಾ ಶರಣರಿಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ

posted in: ರಾಜ್ಯ | 0

ಚಿತ್ರದುರ್ಗ: ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಶರಣರಿಗೆ ಇಂದು, ಬುಧವಾರ ನ್ಯಾಯಾಂಗ ಬಂಧನ ಅಂತ್ಯವಾದ ಹಿನ್ನೆಲೆಯಲ್ಲಿ ಜಾಮೀನು ಅರ್ಜಿ ವಿಚಾರಣೆ ಚಿತ್ರದುರ್ಗದ ಜಿಲ್ಲಾ 2ನೇ ಅಪರ ಮತ್ತು ಸತ್ರ ನ್ಯಾಯಾಲಯದಲ್ಲಿ ನಡೆಯಿತು. ಜಾಮೀನು ಅರ್ಜಿಯನ್ನು ವಜಾಗೊಳಿಸಿದ ನ್ಯಾಯಾಲಯ ಮತ್ತೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ. ಸೆಪ್ಟೆಂಬರ್‌ 27ರ ವರೆಗೆ ನ್ಯಾಯಾಂಗ ಬಂಧನ … Continued