ಮಗಳು ಜಾನಕಿ ಧಾರಾವಾಹಿ ಖ್ಯಾತಿಯ ಕಿರುತೆರೆಯ ನಟ ಮಂಡ್ಯ ರವಿಪ್ರಸಾದ ಇನ್ನಿಲ್ಲ

ಬೆಂಗಳೂರು: ಕನ್ನಡ ಕಿರುತೆರೆಯ ಖ್ಯಾತ ನಟ, ಮಗಳು ಜಾನಕಿ ಖ್ಯಾತಿಯ ನಟ ಮಂಡ್ಯ ರವಿಪ್ರಸಾದ ನಿಧನರಾಗಿದ್ದಾರೆ.
ಧಾರಾವಾಹಿಯ ಚಂದು ಭಾರ್ಗಿಯಾಗಿ ಪ್ರೇಕ್ಷಕರ ಹೃದಯ ಗೆದ್ದಿದ್ದಅವರು ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದರು. ಕಿರುತೆರೆ  ನಟ ರವಿಪ್ರಸಾದ ಕಳೆದ ಒಂದು ತಿಂಗಳಿಂದ ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಿಸದೆ ಇಂದು, (ಸೆಪ್ಟೆಂಬರ್ 14) ಸಂಜೆ 6 ಗಂಟೆ ಸುಮಾರಿಗೆ ನಿಧನರಾಗಿದ್ದಾರೆ. ನಟ ರವಿ ಅವರು ಮಗಳು ಜಾನಕಿ ಧಾರಾವಾಹಿಯ ಚಂದುಭಾರ್ಗಿಪಾತ್ರದ ಮೂಲಕ ಪ್ರಸಿದ್ಧಿ ಪಡೆದಿದ್ದರು.

ಮಂಡ್ಯ ರವಿ ಅವರಿಗೆ ಕಾಮಾಲೆ ರೋಗ ಇತ್ತು. ಇದರ ಜೊತೆಗೆ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದರು ಎಂದು ಹೇಳಲಾಗಿದೆ. ಈ ಕಾರಣಕ್ಕೆ ಅವರನ್ನು ಆಸ್ಪತ್ರೆಯಲ್ಲಿ ದಾಖಲು ಮಾಡಿ ಚಿಕಿತ್ಸೆ ನೀಡಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿ ಆಗಿಲ್ಲ. ಹೀಗಾಗಿ ಅವರು ಕೊನೆಯುಸಿರೆಳೆದಿದ್ದಾರೆ. ಕುಟುಂಬದವರು ಮಂಡ್ಯದತ್ತ ಅವರ ಪಾರ್ಥಿವ ಶರೀರ ಕೊಂಡೊಯ್ಯುತ್ತಿದ್ದಾರೆ. ರವಿ ಅವರ ನಿಧನದಿಂದ ಕುಟುಂಬದವರು ಕಣ್ಣೀರಲ್ಲಿ ಕೈ ತೊಳೆಯುವಂತಾಗಿದೆ. ಅನೇಕ ಕಲಾವಿದರು ರವಿ ನಿಧನಕ್ಕೆ ದುಃಖ ವ್ಯಕ್ತಪಡಿಸಿದ್ದಾರೆ.

ಮಂಡ್ಯದ ಗೆಳೆಯರ ಬಳಗ, ಜನದನಿ ತಂಡಗಳ ಮೂಲಕ ರಂಗಕ್ಷೇತ್ರಕ್ಕೆ ಕಾಲಿಟ್ಟಿದ್ದ ಅವರು ಎಂ.ಎ ಇಂಗ್ಲಿಷ್, ಎಲ್‌ಎಲ್.ಬಿ ಪದವಿ ಪಡೆದಿದ್ದ ಅವರು ನಟನಾ ಕ್ಷೇತ್ರವನ್ನೇ ವೃತ್ತಿಯಾಗಿ ಮಾಡಿಕೊಂಡಿದ್ದರು. ಟಿ.ಎಸ್. ನಾಗಾಭರಣ ನಿರ್ದೇಶನದ ‘ಮಹಾಮಾಯಿ’ ಧಾರಾವಾಹಿಯಲ್ಲಿ ನಟಿಸುವ ಮೂಲಕ ಕಿರುತೆರೆ ಕ್ಷೇತ್ರಕ್ಕೆ ಕಾಲಿಟ್ಟಿದ್ದರು. ನಂತರ ಕಿರುತೆರೆ ಧಾರಾವಾಹಿ, ಸಿನಿಮಾಗಳಲ್ಲಿ ಅಭಿನಯಿಸಿ ‘ಮಂಡ್ಯ ರವಿ’ ಎಂದೇ ಪ್ರಸಿದ್ಧಿ ಪಡೆದಿದ್ದರು.
ಟಿ.ಎನ್‌.ಸೀತಾರಾಮ್‌ ಅವರ ಬಹುತೇಕ ಧಾರಾವಾಹಿಗಳಲ್ಲಿ ನಟಿಸಿದ್ದರು. ಮಿಂಚು, ಮುಕ್ತ ಮುಕ್ತ, ಮಗಳು ಜಾನಕಿ, ಚಿತ್ರಲೇಖ, ಯಶೋಧೆ, ವರಲಕ್ಷ್ಮಿ ಸ್ಟೋರ್ಸ್‌ ಮುಂತಾದ ಧಾರಾವಾಹಿಗಳು ಅವರಿಗೆ ಹೆಸರು ತಂದುಕೊಟ್ಟಿದ್ದವು.
‘ಮಗಳು ಜಾನಕಿಯ ‘ಚಂದು ಭಾರ್ಗಿ’ ರವಿ ಅಸ್ತಂಗತ. ಇನ್ನೂ 42, ನಾಲ್ಕು ಜನ್ಮಕ್ಕಾಗುವಷ್ಟು ಪ್ರತಿಭೆ. ಅತ್ಯಂತ ಆಘಾತಕಾರಿ’ ಎಂದು ನಿರ್ದೇಶಕ ಟಿ.ಎನ್​. ಸೀತಾರಾಮ್​ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ. ಸೀತಾರಾಮ್ ಅವರ ಹಲವು ಧಾರಾವಾಹಿಗಳಲ್ಲಿ ನಟಿಸಿ ರವಿ ಗಮನ ಸೆಳೆದಿದ್ದರು. ಸಿನಿಮಾಗಳಲ್ಲೂ ರವಿ ನಟಿಸಿದ್ದಾರೆ.

ಪ್ರಮುಖ ಸುದ್ದಿ :-   ಮತಗಟ್ಟೆ ಬಳಿ ಮಹಿಳೆಗೆ ಹೃದಯಾಘಾತ ; ತಕ್ಷಣವೇ ಸಿಪಿಆರ್‌ ಮಾಡಿ ಜೀವ ಉಳಿಸಿದ ಮತದಾನ ಮಾಡಲು ಬಂದಿದ್ದ ವೈದ್ಯ

4 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement