ಎಲ್ಲ ಮಾದರಿ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಸ್ಫೋಟಕ ಬ್ಯಾಟ್ಸ್‌ಮನ್ ರಾಬಿನ್‌ ಉತ್ತಪ್ಪ

ಬೆಂಗಳೂರು: ಟೀಂ ಇಂಡಿಯಾ ಕ್ರಿಕೆಟಿಗ, ಕನ್ನಡಿಗ ರಾಬಿನ್ ಉತ್ತಪ್ಪ ಎಲ್ಲ ಮಾದರಿ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ಎಲ್ಲಾ ಮಾದರಿ ಕ್ರಿಕೆಟ್‌ನಿಂದ ವಿದಾಯ ಘೋಷಿಸಿದ ರಾಬಿನ್ ಉತ್ತಪ್ಪ ಈಗ ವಿದೇಶಿ ಲೀಗ್ ಟೂರ್ನಿಯಲ್ಲಿ ಆಡುತ್ತಿದ್ದಾರೆ.
2006ರಲ್ಲಿ ಅಂತಾರಾಷ್ಟ್ರೀಯ ಪಂದ್ಯಕ್ಕೆ ಪದಾರ್ಪಣೆ ಮಾಡಿದ ಕೊಡಗಿನ ರಾಬಿನ್ ಉತ್ತಪ್ಪ, ಸ್ಫೋಟಕ ಬ್ಯಾಟ್ಸ್‌ಮನ್ ಎಂದೇ ಹೆಸರು ಪಡೆದಿದ್ದಾರೆ. 2007ರ ಟಿ20 ವಿಶ್ವಕಪ್ ಚಾಂಪಿಯನ್ ತಂಡದ ಭಾಗವಾಗಿದ್ದ ರಾಬಿನ್ ಉತ್ತಪ್ಪ, ಭಾರತದ ಹಲವು ಐತಿಹಾಸಿಕ ಗೆಲುವುಗಳಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ್ದರು. 2015ರ ಬಳಿಕ ರಾಬಿನ್ ಉತ್ತಪ್ಪ, ಐಪಿಎಲ್ ಹಾಗೂ ರಣಜಿ ಕ್ರಿಕೆಟ್‌ನಲ್ಲಿ ಸಕ್ರಿಯರಾಗಿದ್ದರು.
ಕರ್ನಾಟಕ ಪರ ದೇಸಿ ಕ್ರಿಕೆಟ್ ಆಡುತ್ತಿದ್ದ ರಾಬಿನ್ ಉತ್ತಪ್ಪ ನಂತರ ಕೇರಳಕ್ಕೆ ವಲಸೆ ಹೋಗಿದ್ದರು. ವಿದೇಶಿ ಲೀಗ್‌ನಲ್ಲಿ ಪಾಲ್ಗೊಳ್ಳಲು ಬಯಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ರಾಬಿನ್ ಉತ್ತಪ್ಪ, ಟೀಂ ಇಂಡಿಯಾ ಹಾಗೂ ಕರ್ನಾಟಕ ತಂಡ ಪ್ರತಿನಿಧಿಸಿರುವುದು ನನಗೆ ಅತ್ಯಂತ ಹೆಮ್ಮೆಯ ಹಾಗೂ ಗೌರವ ತಂದಿದೆ. ಪ್ರಸಿದ್ಧ ಮಾತಿನಂತೆ ಎಲ್ಲಾ ಉತ್ತಮ ವಿಚಾರಗಳು ಕೊನೆಗೊಳ್ಳಬೇಕು. ಕೃತಜ್ಞತೆ ಹಾಗೂ ಪ್ರೀತಿಯಿಂದ ಭಾರತೀಯ ಕ್ರಿಕೆಟ್‌ನಿಂದ ನಿವೃತ್ತಿ ಹೊಂದುತ್ತಿದ್ದೇನೆ ಎಂದು ರಾಬಿನ್ ಉತ್ತಪ್ಪ ಟ್ವೀಟ್ ಮಾಡಿದ್ದಾರೆ. ಇದೇ ಟ್ವೀಟ್‍ನಲ್ಲಿ ವಿದಾಯದ ಪತ್ರವನ್ನು ಹಂಚಿಕೊಂಡಿದ್ದಾರೆ.
2007ರ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಟೀಂ ಇಂಡಿಯಾ ಗೆುವಿನಲ್ಲಿ ರಾಬಿನ್ ಉತ್ತಪ್ಪ ಪ್ರಮುಖ ಪಾತ್ರ ನಿರ್ವಹಿಸಿದ್ದರು. ಏಕದಿನ ವಿಶ್ವಕಪ್ ಟೂರ್ನಿ ಆಡಿದ ಉತ್ತಪ್ಪ, 2011ರಿಂದ ಟೀಂ ಇಂಡಿಯಾದಲ್ಲಿ ಅಷ್ಟೊಂದು ಅವಕಾಶ ಪಡೆಯಲಿಲ್ಲ. ಆದರೆ ರಣಜಿ ಹಾಗೂ ಐಪಿಎಲ್ ಟೂರ್ನಿಯಲ್ಲಿ ಅತ್ತುತ್ತಮ ಪ್ರದರ್ಶನದ ಮೂಲಕ ರಾಬಿನ್ ಉತ್ತಪ್ಪ ಮತ್ತೆ ಟೀಂ ಇಂಡಿಯಾ ಪ್ರವೇಶ ಪಡೆದರು.

36 ವರ್ಷದ ರಾಬಿನ್ ಉತ್ತಪ್ಪ, 2015ರಲ್ಲಿ ಜಿಂಬಾಬ್ವೆ ವಿರುದ್ಧ ಕೊನೆಯ ಬಾರಿಗೆ ಟಿ20 ಹಾಗೂ ಏಕದಿನ ಪಂದ್ಯ ಆಡಿದ್ದರು.
2014ರಲ್ಲಿ ಕೋಲ್ಕತಾ ನೈಟ್ ರೈಡರ್ಸ್ ಹಾಗೂ 2021ರಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಳ್ಳಲು ರಾಬಿನ್ ಉತ್ತಪ್ಪ ಪ್ರಮುಖ ಪಾತ್ರ ನಿರ್ವಹಿಸಿದ್ದರು. 2007 ರ T20 ವಿಶ್ವಕಪ್‌ನಲ್ಲಿ ಪಾಕಿಸ್ತಾನದ ವಿರುದ್ಧದ ಗುಂಪು ಪಂದ್ಯದಲ್ಲಿ 50 ರನ್‌ಗಳನ್ನು ಗಳಿಸಿದ್ದು ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅವರ ಅತ್ಯಂತ ಮಹತ್ವದ ಕೊಡುಗೆಗಳಲ್ಲಿ ಒಂದಾಗಿದೆ. ಪಂದ್ಯವು ಟೈನಲ್ಲಿ ಕೊನೆಗೊಂಡ ನಂತರ ಅವರು “ಬೌಲ್ ಔಟ್” ನಲ್ಲಿ ಸ್ಟಂಪ್‌ಗೆ ಹೊಡೆಯಲು ಮರಳಿದರು.ಟೀಂ ಇಂಡಿಯಾ ಪರ 46 ಏಕದಿನ ಹಾಗೂ 13 ಟಿ20 ಪಂದ್ಯಗಳನ್ನು ಆಡಿದ್ದಾರೆ.
ಐಪಿಎಲ್‌ನಲ್ಲಿ ಕೋಲ್ಕತಾ ನೈಟ್ ರೈಡರ್ಸ್, ಮುಂಬೈ ಇಂಡಿಯನ್ಸ್, ಪುಣೆ ವಾರಿಯರ್ಸ್, ರಾಯಲ್ ಚಾಲೆಂಜರ್ಸ್ ಬೆಂಗಳೂರು, ರಾಜಸ್ಥಾನ ರಾಯಲ್ಸ್ ಸೇರಿ 6 ಐಪಿಎಲ್ ತಂಡದ ಪರ ಆಢಿದ್ದಾರೆ. 205 ಐಪಿಎಲ್ ಪಂದ್ಯದಲ್ಲಿ 4,952 ರನ್ ಸಿಡಿಸಿದ್ದಾರೆ.

ಪ್ರಮುಖ ಸುದ್ದಿ :-   ನೇಹಾ ಹಿರೇಮಠ ಕೊಲೆ ಪ್ರಕರಣ: ಆರೋಪಿ ಫಯಾಜ್‌ ಆರು ದಿನ ಸಿಐಡಿ ಕಸ್ಟಡಿಗೆ

3 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement