ಕನ್ನಡಕ್ಕೆ ಕಾನೂನಿನ ಬಲ ನೀಡಲು ಈ ಅಧಿವೇಶನದಲ್ಲೇ ಮಸೂದೆ ಮಂಡನೆ: ಸಿಎಂ ಬೊಮ್ಮಾಯಿ

ಬೆಂಗಳೂರು: ಎಲ್ಲ ಹಂತಗಳಲ್ಲಿ ಕನ್ನಡ ಕಡ್ಡಾಯಗೊಳಿಸುವುದಕ್ಕಾಗಿ ಅದಕ್ಕೆ ಕಾನೂನು ಬಲ ನೀಡಲು ಇದೇ ಅಧಿವೇಶನದಲ್ಲಿ ಮಸೂದೆ ಮಂಡಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ವಿಧಾನಸಭೆಯಲ್ಲಿ ಮಾತನಾಡಿದ ಅವರು, ಇದೇ ಮೊದಲ ಬಾರಿಗೆ ಕಾನೂನಿನ ಮೂಲಕ ಕನ್ನಡ ಭಾಷೆ ಮತ್ತು ಕನ್ನಡದ ಜನರಿಗೆ ರಕ್ಷಣೆ ನೀಡುವ ಕೆಲಸ ಮಾಡಲಾಗುತ್ತಿದೆ. ರಾಜ್ಯದಲ್ಲಿ ನೆಲೆಸಿರುವ ಅನ್ಯಭಾಷಿಕರು ಕನ್ನಡ ಕಲಿತುಕೊಳ್ಳಲು ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದರು.
ಕನ್ನಡದ ರಕ್ಷಣೆ ಮತ್ತು ಬೆಳವಣಿಗೆಗೆ ಸರ್ಕಾರ ಸದಾ ಬದ್ಧವಾಗಿದೆ. ಈ ವಿಚಾರದಲ್ಲಿ ನಾವು ರಾಜೀ ಮಾಡಿಕೊಳ್ಳುವುದಿಲ್ಲ. ರಾಜ್ಯದಲ್ಲಿ ಕನ್ನಡ ಅಗ್ರಮಾನ್ಯ ಭಾಷೆಯಾಗಿ ಬಳಕೆ ಆಗುತ್ತದೆ ಎಂದು ಬೊಮ್ಮಾಯಿ ಹೇಳಿದರು.

ಹೊಸ ಶಿಕ್ಷಣ ನೀತಿಯಲ್ಲಿ ಆಯಾಯ ರಾಜ್ಯ ಭಾಷೆಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ನಮ್ಮ ರಾಜ್ಯದಲ್ಲಿ ಕನ್ನಡದಲ್ಲಿ ಎಂಜಿನಿಯರಿಂಗ್‌ ಕೋರ್ಸ್‌ ನಡೆಸಲಾಗುತ್ತದೆ. ಮೊದಲ ಬ್ಯಾಚ್‌ನ ಮೊದಲ ಸೆಮಿಸ್ಟರ್‌ ಪರೀಕ್ಷೆ ಕನ್ನಡದಲ್ಲಿಯೇ ನಡೆದಿದೆ ಎಂದು ಅವರು ತಿಳಿಸಿದರು.
ಕನ್ನಡ ರಕ್ಷಣೆಗೆ ಸರ್ಕಾರ ಬದ್ಧವಾಗಿದೆ, ನೆಲ, ಜಲ, ಭಾಷೆ ವಿಚಾರದಲ್ಲಿ ರಾಜಕೀಯ ಮೀರಿ ನಡೆದುಕೊಂಡಿದ್ದೇವೆ. ಕನ್ನಡ ಕಡ್ಡಾಯಗೊಳಿಸಲು ಹೊಸ ಕಾನೂನು ತರುತ್ತೇವೆ. ಇದೇ ಅಧಿವೇಶನದಲ್ಲಿ ಹೊಸ ಕಾನೂನು ತರಲಾಗುವುದು ಎಂದು ತಿಳಿಸಿದರು.

ಪ್ರಮುಖ ಸುದ್ದಿ :-   ಸುಳ್ಳು ಚುನಾವಣಾ ಅಫಿಡವಿಟ್‌ ಪ್ರಕರಣ : ಬಿಜೆಪಿ ಶಾಸಕ ಗರುಡಾಚಾರಗೆ ವಿಧಿಸಿದ್ದ ಜೈಲು ಶಿಕ್ಷೆ ರದ್ದುಮಾಡಿದ ಹೈಕೋರ್ಟ್

ಇದೇವೇಳೆ ಹಿಂದಿ ಭಾಷೆ ಹೇರಿಕೆ ವಿರೋಧಿಸಿ ಕಾಂಗ್ರೆಸ್​ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿರುವ ರಾಜ್ಯ ಬಿಜೆಪಿ ಘಟಕ ಟ್ವೀಟ್​​​​​​ ಮಾಡಿ, ಈ ಹಿಂದಿನಿಂದಲೂ, ಮಾತೃಭಾಷೆಯಲ್ಲೇ (Mother Tongue) ಶಿಕ್ಷಣ ಪಡೆಯುವ ಅವಕಾಶ ಕಲ್ಪಿಸಲಾಗಿದೆ. ಪ್ರಧಾನಿ ಮೋದಿ ಸರ್ಕಾರ ಎನ್‌ಇಪಿ ಮೂಲಕ ಈ ಅವಕಾಶ ಕಲ್ಪಿಸಿದೆ ಎಂದು ಹೇಳಿದೆ.
ದೇಶದಲ್ಲಿ ಹಿಂದಿ ದಿವಸ್​, ತ್ರಿಭಾಷಾ ಸೂತ್ರ ಹೇರಿರುವುದು ಕಾಂಗ್ರೆಸ್. ನಿಮ್ಮ ಅಧಿಕಾರದ ಕನಸಿನಲ್ಲಾದರೂ ಹಿಂದಿ ದಿವಸ್ ರದ್ದು ಮಾಡುತ್ತೇವೆ ಎಂದು ಸೋನಿಯಾ ಗಾಂಧಿ ಮತ್ತು ರಾಹುಲ್​ರಿಂದ ಹೇಳಿಕೆ ಕೊಡಿಸುವ ಧಮ್ ಇದೆಯೇ ಎಂದು ಟ್ವೀಟ್​ ಮೂಲಕ ಕಾಂಗ್ರೆಸ್​ ಅನ್ನು ಬಿಜೆಪಿ ಲೇವಡಿ ಮಾಡಿದೆ.

2 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement