ಚಿತ್ರದುರ್ಗ: ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಶರಣರಿಗೆ ಇಂದು, ಬುಧವಾರ ನ್ಯಾಯಾಂಗ ಬಂಧನ ಅಂತ್ಯವಾದ ಹಿನ್ನೆಲೆಯಲ್ಲಿ ಜಾಮೀನು ಅರ್ಜಿ ವಿಚಾರಣೆ ಚಿತ್ರದುರ್ಗದ ಜಿಲ್ಲಾ 2ನೇ ಅಪರ ಮತ್ತು ಸತ್ರ ನ್ಯಾಯಾಲಯದಲ್ಲಿ ನಡೆಯಿತು. ಜಾಮೀನು ಅರ್ಜಿಯನ್ನು ವಜಾಗೊಳಿಸಿದ ನ್ಯಾಯಾಲಯ ಮತ್ತೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ.
ಸೆಪ್ಟೆಂಬರ್ 27ರ ವರೆಗೆ ನ್ಯಾಯಾಂಗ ಬಂಧನ ವಿಸ್ತರಿಸಿ ಚಿತ್ರದುರ್ಗ ಜಿಲ್ಲಾ 2ನೇ ಅಪರ ಮತ್ತು ಸತ್ರ ನ್ಯಾಯಾಲಯ ಆದೇಶ ಬುಧವಾರ ಹೊರಡಿಸಿದೆ.
ಕಳೆದ ಹದಿನಾಲ್ಕು ದಿನಗಳಿಂದ ಮುರುಘಾ ಶರಣರು ಜಿಲ್ಲಾ ಕಾರಾಗೃಹದಲ್ಲಿದ್ದಾರೆ. ಮುರುಘಾ ಶರಣರ ವಿರುದ್ಧ ಮೈಸೂರಿನ ನಜರಾಬಾದ್ ಪೊಲೀಸ್ ಠಾಣೆಯಲ್ಲಿ ಮಠದ ವಿದ್ಯಾರ್ಥಿನಿಲಯದ ಇಬ್ಬರು ವಿದ್ಯಾರ್ಥಿನಿಯಿರಿಂದ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಾಗಿತ್ತು. ನಂತರ ಪ್ರಕರಣವನ್ನು ಮೈಸೂರಿನಿಂದ ಚಿತ್ರದುರ್ಗಕ್ಕೆ ವರ್ಗಾಯಿಸಲಾಗಿತ್ತು.
ನಿಮ್ಮ ಕಾಮೆಂಟ್ ಬರೆಯಿರಿ