ಪವರ್‌ಸ್ಟಾರ್ ಪುನೀತ ರಾಜಕುಮಾರ ಜನ್ಮದಿನ ಇನ್ಮುಂದೆ ‘ಸ್ಫೂರ್ತಿ ದಿನ’ವಾಗಿ ಸರ್ಕಾರದಿಂದಲೇ ಆಚರಣೆ: ಸಿಎಂ ಬೊಮ್ಮಾಯಿ

ಬೆಂಗಳೂರು: ಇನ್ಮುಂದೆ ಕನ್ನಡದ ಖ್ಯಾತ ನಟ ಪುನೀತರಾಜಕುಮಾರ ಅವರ ಜನ್ಮದಿನ(ಮಾರ್ಚ್ 17)ವನ್ನು ‘ಸ್ಫೂರ್ತಿ ದಿನ’ವಾಗಿ ಆಚರಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಅವರು ಗುರುವಾರ ಬೆಂಗಳೂರಿನ ಚೌಡಯ್ಯ ಸ್ಮಾರಕ ಸಭಾಭವನದಲ್ಲಿ ನಡೆದ ಬ್ರಹ್ಮರ್ಷಿ ನಾರಾಯಣಗುರು ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಅವರು ಈ ವಿಷಯ ಪ್ರಕಟಿಸಿದರು. ಈ ಕುರಿತು ಇಂಧನ ಸಚಿವ ಸುನಿಲಕುಮಾರ … Continued

ವಿಮ್ಸ್‌ನಲ್ಲಿ ಕರೆಂಟ್‌ ಕೈಕೊಟ್ಟ ವೇಳೆ ರೋಗಿಗಳ ಸಾವು ಆರೋಪ ಪ್ರಕರಣ: ಮೃತರ ಕುಟುಂಬಕ್ಕೆ ₹5 ಲಕ್ಷ ಪರಿಹಾರ ಘೋಷಿಸಿದ ಸಿಎಂ ಬೊಮ್ಮಾಯಿ

ಬೆಂಗಳೂರು: ಬಳ್ಳಾರಿಯ ವಿಮ್ಸ್ ಆಸ್ಪತ್ರೆಯಲ್ಲಿ ನಡೆದ ದುರ್ಘಟನೆಯಲ್ಲಿ ಮೃತಪಟ್ಟ ಮೂವರು ರೋಗಿಗಳ ಕುಟುಂಬಕ್ಕೆ 5 ಲಕ್ಷ ರೂ. ಗಳ ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಗುರುವಾರ ಈ ಕುರಿತಾಗಿ ಮಾತನಾಡಿದ ಅವರು, ವಿಜಯನಗರ ವೈದ್ಯಕೀಯ ವಿಜ್ಞಾನ ಸಂಸ್ಥೆ ವಿಮ್ಸ್‌ನಲ್ಲಿ ವಿದ್ಯುತ್ ಹಾಗೂ ಜನರೇಟರ್‌ ಕೈಕೊಟ್ಟ ಪರಿಣಾಮ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮೂವರು … Continued

ಉಜ್ಬೇಕಿಸ್ತಾನ್‌ಕ್ಕೆ ಬಂದಿಳಿದ ಪ್ರಧಾನಿ ಮೋದಿ : ನಾಳೆ ರಷ್ಯಾ ಅಧ್ಯಕ್ಷ ಪುತಿನ್‌ ಭೇಟಿ

ನವದೆಹಲಿ: ಶುಕ್ರವಾರ ಉಜ್ಬೇಕಿಸ್ತಾನ್‌ನ ಸಮರ್‌ಕಂಡ್‌ನಲ್ಲಿ ನಡೆಯುವ ಪ್ರಾದೇಶಿಕ ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರೊಂದಿಗೆ ದ್ವಿಪಕ್ಷೀಯ ಸಭೆ ನಡೆಸಿದಾಗ ವ್ಯಾಪಾರ ಮತ್ತು ಭೌಗೋಳಿಕ ರಾಜಕೀಯವು ಅಜೆಂಡಾದಲ್ಲಿರುತ್ತದೆ. ರಷ್ಯಾ ಅಧ್ಯಕ್ಷ ವ್ಲಾದಿಮಿರ್‌ ಪುತಿನ್ ಮತ್ತು ಪ್ರಧಾನಿ ಮೋದಿ ಗುರುವಾರ ಪ್ರಾರಂಭವಾಗುವ ಶಾಂಘೈ ಸಹಕಾರ ಸಂಘಟನೆಯ (ಎಸ್‌ಸಿಒ) ಕೌನ್ಸಿಲ್ ಆಫ್ ಹೆಡ್ಸ್ … Continued

ಲಾರೆನ್ಸ್ ಬಿಷ್ಣೋಯ್ ಹತ್ಯೆಯ ಪಟ್ಟಿಯಲ್ಲಿ ಸಲ್ಮಾನ್ ಖಾನ್ : ಗ್ಯಾಂಗ್‌ನ ‘ಪ್ಲಾನ್ ಬಿ’ ಬಹಿರಂಗ

ನವದೆಹಲಿ: ಖ್ಯಾತ ಗಾಯಕ ಸಿದ್ದು ಮೂಸೆವಾಲಾ ಅವರ ಬರ್ಬರ ಹತ್ಯೆಯ ಮಾಸ್ಟರ್ ಮೈಂಡ್ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನ ಹಿಟ್ ಲಿಸ್ಟ್ ನಲ್ಲಿ ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಇದ್ದರು. ದೆಹಲಿಯ ತಿಹಾರ್ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿದ್ದ ಬಿಷ್ಣೋಯ್ ನಾಲ್ಕು ವರ್ಷಗಳಿಂದ ಖಾನ್ ಅವರನ್ನು ಕೊಲ್ಲಲು ಯೋಜಿಸಿದ್ದರು ಎಂದು ವರದಿಯಾಗಿದೆ. ಪ್ರಸ್ತುತ. ಮೂಸೆವಾಲಾ ಹತ್ಯೆಯ ತನಿಖೆಗೆ … Continued

ಸುಕೇಶ್ ಚಂದ್ರಶೇಖರ 200 ಕೋಟಿ ಸುಲಿಗೆ ಹಗರಣ: ಜಾಕ್ವೆಲಿನ್ ಫರ್ನಾಂಡಿಸ್ ನಂತರ ನೋರಾ ಫತೇಹಿ 6 ಗಂಟೆಗಳ ಕಾಲ ಪ್ರಶ್ನಿಸಿದ ದೆಹಲಿ ಪೊಲೀಸರು

ನವದೆಹಲಿ: ಸುಕೇಶ ಚಂದ್ರಶೇಖರಗೆ ಸಂಬಂಧಿಸಿದ ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟಿ ನೋರಾ ಫತೇಹಿ ಅವರನ್ನು ದೆಹಲಿ ಪೊಲೀಸರ ಆರ್ಥಿಕ ಅಪರಾಧ ವಿಭಾಗವು ಗುರುವಾರ ಆರು ಗಂಟೆಗಳ ಕಾಲ ವಿಚಾರಣೆ ನಡೆಸಿತು. ಇದೇ ಪ್ರಕರಣದಲ್ಲಿ ಜಾಕ್ವೆಲಿನ್ ಫೆರ್ನಾಂಡಿಸ್ ಅವರನ್ನು ಸುಮಾರು ಎಂಟು ಗಂಟೆಗಳ ಕಾಲ ಪ್ರಶ್ನಿಸಿದ ಒಂದು ದಿನದ ನಂತರ ಈ ವಿಚಾರಣೆ ನಡೆದಿದೆ. ಕಳೆದ … Continued

ವೃತ್ತಿಪರ ಟೆನಿಸ್‌ಗೆ ನಿವೃತ್ತಿ ಘೋಷಿಸಿದ ದಿಗ್ಗಜ ಆಟಗಾರ ರೋಜರ್ ಫೆಡರರ್

ಬರ್ನ್: 20 ಗ್ರ್ಯಾಂಡ್ ಸ್ಲಾಮ್ ಪ್ರಶಸ್ತಿಗಳನ್ನು ಗೆದ್ದ ಮೊದಲ ಪುರುಷ ಆಟಗಾರನೆಂಬ ಖ್ಯಾತ ಪಡೆದ ಟೆನಿಸ್ ದಂತಕಥೆ, ಸ್ವಿಟ್ಜರ್ಲ್ಯಾಂಡ್ ನ ರೋಜರ್ ಫೆಡರರ್, ಲೇವರ್ ಕಪ್ 2022 ರ ನಂತರ ನಿವೃತ್ತಿಯಾಗುವುದಾಗಿ ಪ್ರಕಟಿಸಿದ್ದಾರೆ. ಫೆಡರರ್ ತಮ್ಮ ಟ್ವಿಟ್ಟರ್ ನಲ್ಲಿ ಪೋಸ್ಟ್ ಮೂಲಕ ನಿರ್ಧಾರವನ್ನು ಪ್ರಕಟಿಸಿದ್ದಾರೆ. ಫೆಡರರ್ ಅವರು 2003 ರಲ್ಲಿ ವಿಂಬಲ್ಡನ್ ಮೂಲಕ ಮೊದಲ ಗ್ರಾಂಡ್ … Continued

ಪ್ರತಿಪಕ್ಷಗಳ ವಿರೋಧದ ನಡುವೆ ಧ್ವನಿ ಮತದ ಮೂಲಕ ಮತಾಂತರ ನಿಷೇಧ ವಿಧೇಯಕ ಪರಿಷತ್ತಿನಲ್ಲಿ ಅಂಗೀಕಾರ

ಬೆಂಗಳೂರು: ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೂ ಧ್ವನಿ ಮತದ ಮೂಲಕ ಗುರುವಾರ ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ವಿಧೇಯಕ ವಿಧಾನ ಪರಿಷತ್ತಿನಲ್ಲಿ ಅಂಗೀಕರವಾಯಿತು. ಇಂದು, ಗುರುವಾರ ಬೆಳಿಗ್ಗೆ ವಿಧೇಯಕವನ್ನು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ವಿಧೇಯಕವನ್ನು ಮಂಡಿದರು. ಕಾಯ್ದೆಯ ಪ್ರತಿಗಳನ್ನು ಹರಿದು ಹಾಕುವ ಮೂಲಕ ಕಾಂಗ್ರೆಸ್  ಹಾಗೂ ಜೆಡಿಎಸ್ ಸದಸ್ಯರು ಸಭಾ ತ್ಯಾಗ … Continued

ವಾಹನ ಅಟ್ಟಿಸಿಕೊಂಡು ಬಂದ ಆನೆಯಿಂದ ಪಾರಾಗಲು ಬಂಡೆ ಏರಿ ತಪ್ಪಿಸಿಕೊಂಡ ಮಾಜಿ ಸಿಎಂ | ವೀಕ್ಷಿಸಿ

ಉತ್ತರಾಖಂಡದ ಮಾಜಿ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾವತ್ ಮತ್ತು ಅವರ ಬೆಂಗಾವಲು ಕೋಟ್‌ದ್ವಾರ-ದುಗಡ್ಡಾ ರಸ್ತೆಯಲ್ಲಿ ಆನೆಯೊಂದು ಅಡ್ಡಹಾಕಿದ ಪರಿಣಾಮ ತಮ್ಮ ಕಡೆಗೆ ಬರುವ ಆನೆಯಿಂದ ತನ್ನನ್ನು ರಕ್ಷಿಸಿಕೊಳ್ಳಲು ಅವರು ವಾಹನ ಬಿಟ್ಟು ದೊಡ್ಡದಾದ ಬಂಡೆ ಏರಿ ತಪ್ಪಿಸಿಕೊಳ್ಳಬೇಕಾಯಿತು. ಸೆಪ್ಟೆಂಬರ್ 14ರ ಸಂಜೆ ಈ ಘಟನೆ ನಡೆದಿದೆ. ವೀಡಿಯೋ ಅಂತರ್ಜಾಲದಲ್ಲಿ ವೈರಲ್ ಆಗಿದ್ದು, ವೀಡಿಯೊದಲ್ಲಿ, ಮಾಜಿ ಮುಖ್ಯಮಂತ್ರಿ … Continued

ವಿಧಾನ ಪರಿಷತ್ತಿನಲ್ಲಿ ಮತಾಂತರ ನಿಷೇಧ ವಿಧೇಯಕ ಮಂಡನೆ

ಬೆಂಗಳೂರು: ಮತಾಂತರ ನಿಷೇಧ ಕಾಯ್ದೆಯನ್ನು ಇಂದು ಗುರುವಾರ ವಿಧಾನ ಪರಿಷತ್ತಿನಲ್ಲಿ ಮಂಡಿಸಲಾಗಿದ್ದು, ಇದು ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ಮಾತಿನ ಚಕಮಕಿಗೂ ಕಾರಣವಾಯಿತು. ಗೃಹ ಸಚಿವ ಆರಗ ಜ್ಞಾನೇಂದ್ರ ಅವರು, ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ವಿಧೇಯಕ-೨೦೨೨ ಅನ್ನು ಮಂಡಿಸಿ ೨೦೧೩ರಲ್ಲಿ ಕಾಂಗ್ರೆಸ್ ಸರ್ಕಾರವೂ ಕಾಯ್ದೆ ಕುರಿತು ಚಿಂತನೆ ನಡೆಸಿತ್ತು. ಸಂವಿಧಾನದ ವಿಧಿ-೨೫ರ ಪ್ರಕಾರ … Continued

ಪೊಲೀಸ್‌ ಠಾಣೆ ಕಾವಲು ಕಾಯಲು ಚೀನಾ ಹಾವುಗಳ ಬಳಕೆ….! ಕೇರಳದಲ್ಲಿ ಈ ವಿನೂತನ ತಂತ್ರ ಈವರೆಗೆ ಸಕ್ಸಸ್‌…!!

ಇಡುಕ್ಕಿ (ಕೇರಳ): ಪೊಲೀಸ್ ಸಿಬ್ಬಂದಿಯನ್ನು ಸಾಮಾನ್ಯವಾಗಿ ಸಮಾಜದ ಕಾನೂನು ಪರಿಪಾಲಕರು ಎಂದು ಪರಿಗಣಿಸಲಾಗುತ್ತದೆ. ಆದರೆ ಕೇರಳದ ಇಡುಕ್ಕಿಯ ಅರಣ್ಯದ ಅಂಚಿನ ಪೊಲೀಸ್ ಠಾಣೆಯೊಂದರಲ್ಲಿ “ಹಾವುಗಳು” ಈ ಕಾನೂನು ಪರಿಪಾಲಕರ “ರಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ” ಎಂದರೆ ಅತಿಶಯೋಕ್ತಿಯಲ್ಲ. ಈ ಪ್ರದೇಶದಲ್ಲಿ ಹೆಚ್ಚುತ್ತಿರುವ ಮಂಗಗಳ ಹಾವಳಿಯಿಂದ ತಮ್ಮನ್ನು ರಕ್ಷಿಸಿಕೊಳ್ಳಲು, ಪೊಲೀಸರು ಕೇರಳ-ತಮಿಳುನಾಡು ಗಡಿಯಲ್ಲಿರುವ ಕುಂಬುಮೆಟ್ಟು ಪೊಲೀಸ್ ಠಾಣೆಯ ಸುತ್ತಲೂ ರಬ್ಬರ್ … Continued