ಇಂದು ವಿಧಾನ ಪರಿಷತ್‍ನಲ್ಲಿ ಮತಾಂತರ ನಿಷೇಧ ವಿಧೇಯಕ ಮಂಡನೆ…?

posted in: ರಾಜ್ಯ | 0

ಬೆಂಗಳೂರು: ವಿಧಾನ ಪರಿಷತ್‍ನಲ್ಲಿ ಇಂದು ಗುರುವಾರ ಮತಾಂತರ ನಿಷೇಧ ವಿಧೇಯಕ ಮಂಡನೆ ಆಗುವ ಸಾಧ್ಯತೆಯಿದೆ. ವಿಧಾನಸಭೆಯಿಂದ ಅಂಗೀಕಾರವಾದ ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ವಿಧೇಯಕ- 2022 ಅನ್ನು ಗುರುವಾರ ವಿಧಾನ ಪರಿಷತ್‌ನಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಮಂಡಿಸುವ ನಿರೀಕ್ಷೆಯಿದೆ.
ಸದ್ಯ ಪರಿಷತ್‍ನಲ್ಲಿ ಬಿಜೆಪಿಗೆ ಬಹುಮತ ಇದ್ದು, ಹೀಗಾಗಿ ಬಹುತೇಕ ವಿಧೇಯಕ ಪಾಸ್ ಆಗಲಿದೆ ಎಂದು ನಿರೀಕ್ಷಿಸಲಾಗಿದೆ. ಮತಾಂತರ ನಿಷೇಧ ವಿಧೇಯಕಕ್ಕೆ ಈಗಾಗಲೇ ವಿಧಾನಸಭೆಯಲ್ಲಿ ಅನುಮೋದನೆ ದೊರೆತಿದೆ. ಆದರೆ ವಿಧಾನ ಪರಿಷತ್‍ನಲ್ಲಿ ಈವರೆಗೆ ಮಸೂದೆಯನ್ನು ಸರ್ಕಾರ ಮಂಡಿಸಿರಲಿಲ್ಲ. ಮಸೂದೆ ಮಂಡಿಸುವ ತಡವಾದ ಹಿನ್ನೆಲೆಯಲ್ಲಿ ಸುಗ್ರೀವಾಜ್ಞೆಯ ಮೂಲಕ ಕಾಯ್ದೆಯನ್ನು ಸರ್ಕಾರ ಜಾರಿಗೆ ತಂದಿತ್ತು.

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189

ಆದರೆ, ಸುಗ್ರೀವಾಜ್ಞೆಯ ಅವಧಿ ಆರು ತಿಂಗಳು ಮಾತ್ರ. ಅಷ್ಟರೊಳಗೆ ಉಭಯ ಸದನಗಳಲ್ಲಿ ಮತ್ತೊಮ್ಮೆ ಮಂಡಿಸಿ ಅಂಗೀಕಾರ ಪಡೆಯಬೇಕಾಗುತ್ತದೆ. ಈ ಹಿನ್ನೆಲೆಯಲ್ಲಿ ಮತಾಂತರ ನಿಷೇಧ ವಿಧೇಯಕವನ್ನು ವಿಧಾನ ಪರಿಷತ್‌ನಲ್ಲಿ ಮಂಡಿಸಲು ಸರ್ಕಾರ ಮುಂದಾಗಿದ್ದು, ಇಲ್ಲಿ ಅಂಗೀಕಾರವಾದ ನಂತರ ವಿಧಾನಸಭೆಯಲ್ಲಿ ಮಂಡನೆ ಮಾಡಲಿದೆ.
ವಿಧಾನ ಪರಿಷತ್‍ನಲ್ಲಿ ಬಿಜೆಪಿಯ 41 ಸದಸ್ಯರಿದ್ದಾರೆ. ಕಾಂಗ್ರೆಸ್‍ನ 26 ಮತ್ತು ಜೆಡಿಎಸ್‍ನ 8 ಸದಸ್ಯರಿದ್ದಾರೆ. ಹಾಗಾಗಿ ಸಂಖ್ಯಾಬಲದಲ್ಲಿ ಬಿಜೆಪಿ ಮೇಲುಗೈ ಸಾಧಿಸಿರುವುದರಿಂದ ಮಸೂದೆ ಅಂಗೀಕಾರವಾಗುವ ಸಾಧ್ಯತೆ ಇದೆವಿಧಾನಸಭೆಯಲ್ಲಿ ಈ ಬಿಲ್‍ಗೆ ವಿರೋಧಿಸಿದ್ದ ಕಾಂಗ್ರೆಸ್‌ ವಿಧಾನ ಪರಿಷತ್‍ನಲ್ಲೂ ವಿರೋಧಿಸುವ ಸಾಧ್ಯತೆಯಿದೆ. ಜೆಡಿಎಸ್ ಸಹ ವಿರೋಧಿಸುವ ಸಾಧ್ಯತೆ ಇದೆ.

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ಇಂದಿನ ಪ್ರಮುಖ ಸುದ್ದಿ :-   ವಿಕಲಚೇತನರಿಗೆ ಆರೋಗ್ಯ ಸಿರಿ ವಿಶೇಷ ಯೋಜನೆ ಘೋಷಣೆ ಮಾಡಿದ ಸಿಎಂ ಬೊಮ್ಮಾಯಿ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

1 / 5. ಒಟ್ಟು ವೋಟುಗಳು 1

ನಿಮ್ಮ ಕಾಮೆಂಟ್ ಬರೆಯಿರಿ

advertisement