ಪವರ್‌ಸ್ಟಾರ್ ಪುನೀತ ರಾಜಕುಮಾರ ಜನ್ಮದಿನ ಇನ್ಮುಂದೆ ‘ಸ್ಫೂರ್ತಿ ದಿನ’ವಾಗಿ ಸರ್ಕಾರದಿಂದಲೇ ಆಚರಣೆ: ಸಿಎಂ ಬೊಮ್ಮಾಯಿ

ಬೆಂಗಳೂರು: ಇನ್ಮುಂದೆ ಕನ್ನಡದ ಖ್ಯಾತ ನಟ ಪುನೀತರಾಜಕುಮಾರ ಅವರ ಜನ್ಮದಿನ(ಮಾರ್ಚ್ 17)ವನ್ನು ‘ಸ್ಫೂರ್ತಿ ದಿನ’ವಾಗಿ ಆಚರಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಅವರು ಗುರುವಾರ ಬೆಂಗಳೂರಿನ ಚೌಡಯ್ಯ ಸ್ಮಾರಕ ಸಭಾಭವನದಲ್ಲಿ ನಡೆದ ಬ್ರಹ್ಮರ್ಷಿ ನಾರಾಯಣಗುರು ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಅವರು ಈ ವಿಷಯ ಪ್ರಕಟಿಸಿದರು. ಈ ಕುರಿತು ಇಂಧನ ಸಚಿವ ಸುನಿಲಕುಮಾರ ಅವರು ಮಾಡಿದ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಪವರ್‌ ಸ್ಟಾರ್‌ ಅಪ್ಪು ಜನ್ಮದಿನವಾದ ಮಾರ್ಚ್ 17 ಅನ್ನು ಇನ್ಮುಂದೆ ಸ್ಪೂರ್ತಿ ದಿನವಾಗಿ ಆಚರಿಸಲಾಗುವುದು ಎಂದು ಹೇಳಿದ್ದಾರೆ.

ಕನ್ನಡ ಹಾಗೂ ಸಂಸ್ಕೃತಿ ಖಾತೆ ಹಾಗೂ ಇಂಧನ ಖಾತೆ ಸಚಿವ ವಿ. ಸುನಿಲಕುಮಾರ, ಪುನೀತ್ ದಿನಾಚರಣೆಯನ್ನು ಸ್ಫೂರ್ತಿ ದಿನವಾಗಿ ಆಚರಣೆ ಮಾಡುವಂತೆ ಮನವಿ ಮಾಡಿದ್ದರು. ಅದರಂತೆ ಪುನೀತ್ ಜನ್ಮದಿನವನ್ನು ಸ್ಫೂರ್ತಿ ದಿನ ಎಂದು ಸರ್ಕಾರದ ವತಿಯಿಂದಲೇ ಆಚರಣೆ ಮಾಡಲಾಗುವುದು ಎಂದು ಹೇಳಿದರು.

ರಾಜ್ಯದ ಬಿಲ್ಲವ ಹಾಗೂ ಈಡಿಗ ಸಮುದಾಯಗಳ ಸಮಗ್ರ ಅಭಿವೃದ್ಧಿಗೆ ಸರ್ಕಾರ ವಿಶೇಷ ಕಾಳಜಿಯನ್ನು ಹೊಂದಿದೆ. ಮುಂಬರುವ ದಿನಗಳಲ್ಲಿ ಈ ಎರಡು ಸಮುದಾಯಗಳಿಗೆ ಪ್ರತ್ಯೇಕವಾಗಿ ಹಣವನ್ನು ಮೀಸಲಿರಿಸಿ, ಆ ಹಣವನ್ನು ಈ ಎರಡು ಸಮುದಾಯಗಳ ಸಮಗ್ರ ಅಭಿವೃದ್ಧಿಗಾಗಿ ಸರ್ಕಾರ ರೂಪುರೇಷೆಯನ್ನು ಸಿದ್ದಪಡಿಸಲಿದೆ. ಇನ್ನೂ ನೆಲಮಂಗಲ ಸಮೀಪ ಇರುವ ಸೋಲೂರು ಆರ್ಯ-ಈಡಿಗ ಮಠ ಪ್ರಾರಂಭಿಸಿರುವ ಶೈಕ್ಷಣಿಕ ಚಟುವಟಿಕೆ ಹಾಗೂ ಶೈಕ್ಷಣಿಕ ಸಂಸ್ಥೆಗಳ ನಿರ್ಮಾಣಕ್ಕೆ ಸರ್ಕಾರದ ವತಿಯಿಂದ ಜಾಗ ನೀಡಲಾಗುವುದು ಎಂದು ತಿಳಿಸಿದರು.

ಪ್ರಮುಖ ಸುದ್ದಿ :-   ಚುನಾವಣೆ ವೇಳೆಯೇ ಬಿಜೆಪಿಗೆ ಗುಡ್‌ಬೈ ಹೇಳಿದ ಸಂಸದ ಕರಡಿ ಸಂಗಣ್ಣ : ಕಾಂಗ್ರೆಸ್‌ ಸೇರ್ಪಡೆ

2 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement