ವಿಧಾನಸಭಾಧ್ಯಕ್ಷರ ಒಪ್ಪಿಗೆ ನಂತರ ಬಿಜೆಪಿಯಲ್ಲಿ ವಿಲೀನವಾದ ಗೋವಾ ಕಾಂಗ್ರೆಸ್ ಶಾಸಕಾಂಗ ಪಕ್ಷ

ಪಣಜಿ: ರಾಜ್ಯದಲ್ಲಿ 11 ಕಾಂಗ್ರೆಸ್ ಶಾಸಕರ ಪೈಕಿ 8 ಶಾಸಕರು ಬಿಜೆಪಿ ಸೇರಿದ ಒಂದು ದಿನದ ನಂತರ, ಗೋವಾ ವಿಧಾನಸಭಾ ಸ್ಪೀಕರ್ ರಮೇಶ್ ತಾವಡ್ಕರ್ ಅವರು ರಾಜ್ಯ ಕಾಂಗ್ರೆಸ್ ಶಾಸಕಾಂಗ ಪಕ್ಷವನ್ನು (ಸಿಎಲ್‌ಪಿ) ಆಡಳಿತಾರೂಢ ಬಿಜೆಪಿಗೆ ವಿಲೀನಗೊಳಿಸಲು ಒಪ್ಪಿಕೊಂಡಿರುವುದಾಗಿ ಗುರುವಾರ ಹೇಳಿದ್ದಾರೆ.
ಕಾಂಗ್ರೆಸ್ ಶಾಸಕರು ಪತ್ರ ಸಲ್ಲಿಸಿದ ನಂತರ ಮತ್ತು ತಮ್ಮ ಬಳಿ ಅಗತ್ಯ ಸಂಖ್ಯೆಗಳಿವೆ ಎಂದು ಹೇಳಿಕೊಂಡ ನಂತರ ಈ ನಿರ್ಧಾರವನ್ನು ತೆಗೆದುಕೊಂಡಿದ್ದೇನೆ ಎಂದು ಸ್ಪೀಕರ್ ಹೇಳಿದರು.
ಬುಧವಾರ, ಮಾಜಿ ಮುಖ್ಯಮಂತ್ರಿ ದಿಗಂಬರ ಕಾಮತ್ ಮತ್ತು ವಿರೋಧ ಪಕ್ಷದ ನಾಯಕ ಮೈಕೆಲ್ ಲೋಬೋ ಸೇರಿದಂತೆ ಗೋವಾದ 11 ಕಾಂಗ್ರೆಸ್ ಶಾಸಕರ ಪೈಕಿ 8 ಮಂದಿ ಪಕ್ಷವನ್ನು ತೊರೆದು ಆಡಳಿತಾರೂಢ ಬಿಜೆಪಿ ಸೇರಿದ್ದಾರೆ.

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189

ದಿಗಂಬರ ಕಾಮತ್, ಮೈಕೆಲ್ ಲೋಬೋ, ದೇಲಿಲಾ ಲೋಬೋ, ರಾಜೇಶ್ ಫಲ್ದೇಸಾಯಿ, ಕೇದಾರ್ ನಾಯ್ಕ್, ಸಂಕಲ್ಪ ಅಮೋನ್ಕರ್, ಅಲೆಕ್ಸೋ ಸಿಕ್ವೇರಾ ಮತ್ತು ರುಡಾಲ್ಫ್ ಫೆರ್ನಾಂಡಿಸ್ ಬಿಜೆಪಿಗೆ ಸೇರ್ಪಡೆಯಾದ ಕಾಂಗ್ರೆಸ್ ಶಾಸಕರು.
40 ಸದಸ್ಯ ಬಲದ ಗೋವಾ ವಿಧಾನಸಭೆಯಲ್ಲಿ ಕಾಂಗ್ರೆಸ್ 11 ಮತ್ತು ಬಿಜೆಪಿ 20 ಶಾಸಕರನ್ನು ಹೊಂದಿತ್ತು. ಈಗ ವಿಧಾನಸಭೆಯಲ್ಲಿ ಬಿಜೆಪಿ 28 ಶಾಸಕರನ್ನು ಹೊಂದಿದೆ.
ಜುಲೈ 2019 ರಲ್ಲಿ 10 ಕಾಂಗ್ರೆಸ್ ಶಾಸಕರು ಬಿಜೆಪಿಗೆ ಸೇರ್ಪಡೆಯಾಗಿದ್ದರು.

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ಟೆಲಿಗ್ರಾಮ್ ಚಾನೆಲ್ ಸೇರಿ
ವಾಟ್ಸಾಪ್ ಗ್ರೂಪ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ಓದಿರಿ :-   ಸಂಘರ್ಷಕ್ಕೆ ಮಿಲಿಟರಿ ಪರಿಹಾರವಲ್ಲ, ಮಾತುಕತೆ-ರಾಜತಾಂತ್ರಿಕತೆಯೇ ಬೇಕು : ಉಕ್ರೇನ್‌ನ ಅಧ್ಯಕ್ಷ ಝೆಲೆನ್ಸ್‌ಕೈಗೆ ಪ್ರಧಾನಿ ಮೋದಿ ಸಲಹೆ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

3 / 5. ಒಟ್ಟು ವೋಟುಗಳು 1

ನಿಮ್ಮ ಕಾಮೆಂಟ್ ಬರೆಯಿರಿ

advertisement