ಸದ್ಯಕ್ಕೆ ಹುಸಿಯಾದ ಉತ್ತರ ಕನ್ನಡ ಜಿಲ್ಲೆಗೆ ಮಲ್ಪಿ ಸ್ಪೆಷಾಲಿಟಿ ಆಸ್ಪತ್ರೆ ಭರವಸೆ: ಅನುಮೋದನೆ ನೀಡದ ಆರ್ಥಿಕ ಇಲಾಖೆ..!

ಬೆಂಗಳೂರು: ಉತ್ತರ ಕನ್ನಡ ಜಿಲ್ಲೆಯ ಜನರ ಬಹುದಿನಗಳ ಕೂಗಿಗೆ ರಾಜ್ಯ ಸರ್ಕಾರ ಬಾಯಿಮಾತಿನಲ್ಲಿ ಭರವಸೆ ನೀಡಿದ್ದು ಬಿಟ್ಟರೆ ಸ್ಪಂದನೆ ನೀಡಿಲ್ಲ. ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ಆರ್ಥಿಕ ಇಲಾಖೆ ಒಪ್ಪಿಗೆ ನೀಡಿಲ್ಲ. ಉತ್ತರ ಕನ್ನಡ ಜಿಲ್ಲೆಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಮಂಜೂರು‌ ಮಾಡಲು ಇನ್ನೂ ರಾಜ್ಯ ಸರ್ಕಾರದ ಆರ್ಥಿಕ ಇಲಾಖೆ ಒಪ್ಪಿಗೆ ನೀಡಿಲ್ಲ. ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಜಾಗ, ಸಿಬ್ಬಂದಿ, ಉಪಕರಣ ಹಾಗೂ ಹಣಕಾಸು ವೆಚ್ಚದ ಬಗ್ಗೆ ಸಲ್ಲಿಸಿದ್ದ ಪ್ರಸ್ತಾವನೆಯನ್ನೇ ಆರ್ಥಿಕ ಇಲಾಖೆ ತಿರಸ್ಕರಿಸಿದೆ.
ವಿಧಾನಸಭೆಯಲ್ಲಿ ಕೇಳಲಾದ ಪ್ರಶ್ನೆಗೆ ಆರೋಗ್ಯ ಇಲಾಖೆಯಿಂದ ಉತ್ತರ ನೀಡಲಾಗಿದೆ. ಆಸ್ಪತ್ರೆಗೆ ಆರ್ಥಿಕ ಇಲಾಖೆ ಒಪ್ಪಿಗೆ ಸಿಕ್ಕಿಲ್ಲ, ಮತ್ತೆ ಪ್ರಸ್ತಾವನೆ ಸಲ್ಲಿಸುವುದಾಗಿ ಆರೋಗ್ಯ ಇಲಾಖೆ ಉತ್ತರಿಸಿದೆ. ಆರ್ಥಿಕ ಇಲಾಖೆಯಿಂದ ಅನುಮತಿ ಸಿಕ್ಕಿದರೆ ಮಾತ್ರ ಜಿಲ್ಲೆಗೆ ಆಸ್ಪತ್ರೆ ಮಂಜೂರು ಮಾಡಲಾಗುತ್ತದೆ. ಹೀಗಾಗಿ ಸದ್ಯಕ್ಕೆ ಜಿಲ್ಲೆಯ ಜನರ ಕನಸು ನನಸಾಗುವ ಲಕ್ಷಣಗಳು ಕಾಣುತ್ತಿಲ್ಲ.
ಉತ್ತರ ಕನ್ನಡ ಜಿಲ್ಲೆಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ವಿಚಾರವನ್ನು ಕಾರವಾರ ಶಾಸಕಿ ರೂಪಾಲಿ ನಾಯ್ಕ ಇಂದು, ಗುರುವಾರ ವಿಧಾನಸಭಾ ಕಲಾಪದಲ್ಲಿ ಪ್ರಸ್ತಾಪಿಸಿದ್ದಾರೆ. ಚರ್ಚೆ ವೇಳೆ ವಿಚಾರ ಪ್ರಸ್ತಾಪಿಸಿದ ರೂಪಾಲಿ ನಾಯ್ಕ್ ಉತ್ತರ ಕನ್ನಡಕ್ಕೆ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಬೇಕೆಂದು ಸದನದಲ್ಲೇ ಪಟ್ಟು ಹಿಡಿದರು.
ಉತ್ತರ ಕನ್ನಡ ಜಿಲ್ಲೆಯಲ್ಲಿ ಸೂಪರ್ ಸ್ಪೆಶಾಲಿಟಿ ಆಸ್ಪತ್ರೆ ಇಲ್ಲದೇ ಸಾರ್ವಜನಿಕರು ತೀವ್ರ ಸಮಸ್ಯೆ ಎದುರಿಸುತ್ತಿರುವ ಕುರಿತು ಕಾರವಾರ- ಅಂಕೋಲಾ ಕ್ಷೇತ್ರದ ಶಾಸಕಿ ರೂಪಾಲಿ ನಾಯ್ಕ ಅವರು ವಿಧಾನಸಭೆಯ ಅಧಿವೇಶನದಲ್ಲಿ ಧ್ವನಿ ಎತ್ತಿದರು. ಪ್ರಶ್ನೋತ್ತರದ ಸಂದರ್ಭದಲ್ಲಿ ಜಿಲ್ಲೆಯ ಪ್ರಮುಖ ಸಮಸ್ಯೆ ಕುರಿತು ಶಾಸಕಿ ರೂಪಾಲಿ ನಾಯ್ಕ ಸದನದಲ್ಲಿ ಪ್ರಸ್ತಾಪಿಸಿ ಜಿಲ್ಲೆಯಲ್ಲಿ ಸೂಪರ್ ಸ್ಪೆಶಾಲಿಟಿ ಆಸ್ಪತ್ರೆ ಕುರಿತು ಅನೇಕ ಬಾರಿ ವಿಷಯ ಪ್ರಸ್ತಾಪ ಮಾಡುತ್ತಾ ಬರಲಾಗಿದೆ ಸುಮಾರು 24 ಕ್ಕೂ ಅಧಿಕ ಮನವಿಗಳನ್ನು ಸಲ್ಲಿಸಲಾಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಆರೋಗ್ಯ ಸಚಿವರು ಅನಾರೋಗ್ಯದ ಕಾರಣ ಸದನದಲ್ಲಿ ಉಪಸ್ಥಿತರಿಲ್ಲ ರೂಪಾಲಿ ನಾಯ್ಕ ಅವರು ಅತ್ಯಂತ ಪ್ರಮುಖ ವಿಷಯವನ್ನೇ ಪ್ರಸ್ತಾಪಿಸಬೇಕೆಂದು ಕೊಂಡಿದ್ದಾರೆ. ಮುಂದಿನ ಬಾರಿ ಆರೋಗ್ಯ ಸಚಿವರು ಉಪಸ್ಥಿತರಿದ್ದ ಸಂದರ್ಭದಲ್ಲಿ ಚರ್ಚೆಗೆ ಅವಕಾಶ ನೀಡುವುದಾಗಿ ತಿಳಿಸಿದರಲ್ಲದೇ ತಾವೂ ಸಹ ಧ್ವನಿಗೂಡಿಸುವುದಾಗಿ ತಿಳಿಸಿದರು.
ಇದಕ್ಕೆ ಸಮಾಧಾನವಾಗದ ರೂಪಾಲಿ ನಾಯ್ಕ ಸಭಾಧ್ಯಕ್ಷರೇ ಈಗ ಸಚಿವರ ಆರೋಗ್ಯ ಸರಿ ಇಲ್ಲ ಮುಂದಿನ ವಾರ ನಮ್ಮ ಆರೋಗ್ಯ ಸರಿ ಇಲ್ಲದೇ ಇದ್ದರೆ ವಿಷಯ ಪ್ರಸ್ತಾಪ ವಿಳಂಬ ಆಗುತ್ತಲೇ ಹೋಗುತ್ತದೆ ದಯವಿಟ್ಟು ಕೈ ಮುಗಿದು ಕೇಳಿ ಕೊಳ್ಳುತ್ತೇನೆ. ಉತ್ತರ ಕನ್ನಡ ಜಿಲ್ಲೆಗೆ ಆಸ್ಪತ್ರೆ ಇಲ್ಲದೇ ತುರ್ತು ಸಂದರ್ಭದಲ್ಲಿ ಬೇರೆ ಜಿಲ್ಲೆಗಳಿಗೆ ಹೋಗುವ ಸಂದರ್ಭದಲ್ಲಿ ತುಂಬಾ ಸಮಸ್ಯೆಗಳನ್ನು ಎದುರಿಸಬೇಕಾಗಿದೆ ಎಂದರು.
ಉತ್ತರ ನೀಡಬೇಕಾದ ಆರೋಗ್ಯ ಸಚಿವರು ಹಾಜರು ಇಲ್ಲದ ಕಾರಣ ಈ ಚರ್ಚೆಯನ್ನು ಅವರ ಉಪಸ್ಥಿತಿಯಲ್ಲೇ ನಡೆಸುವುದು ಸಮಂಜಸ ಎಂದು ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಶಾಸಕಿ ರೂಪಾಲಿ ನಾಯ್ಕ ಅವರಿಗೆ ತಿಳಿಸಿದರು.

ಪ್ರಮುಖ ಸುದ್ದಿ :-   ಸಿಎಂ ಸಿದ್ದರಾಮಯ್ಯ ಹೇಳಿಕೆಯಿಂದ ನಮ್ಮ ಮನೆತನದ ಗೌರವ ಹಾಳಾಗುತ್ತಿದೆ : ನೇಹಾ ತಂದೆ ನಿರಂಜನ ಹಿರೇಮಠ

ಆರ್ಥಿಕ ಇಲಾಖೆ ನಕಾರ
ಕಾರವಾರದಲ್ಲಿ ಯಾವ ಕಾಲಮಿತಿಯಲ್ಲಿ ಸೂಪರ್ ಸ್ಪೆಶಾಲಿಟಿ ಆಸ್ಪತ್ರೆ ನಿರ್ಮಾಣ ಮಾಡಲಾಗುವುದು ಎಂದು ಶಾಸಕಿ ರೂಪಾಲಿ ನಾಯ್ಕ ಅವರು ಕೇಳಿದ ವಿವರಗಳಿಗೆ ಆರೋಗ್ಯ ಇಲಾಖೆಯ ಸಚಿವರಿಂದ ಉತ್ತರ ನೀಡಲಾಗಿದ್ದು ಸೂಪರ್ ಸ್ಪೆಶಾಲಿಟಿ ಆಸ್ಪತ್ರೆ ಮಂಜೂರಾತಿಗೆ ಆಗ್ರಹಿಸಿ ಕಾರವಾರ ವೈದ್ಯಕೀಯ ವಿಜ್ಞಾನ ಸಂಸ್ಥೆಯಿಂದ ಪಡೆಯಲಾದ ಪ್ರಸ್ತಾವನೆಯನ್ನು ಆರ್ಥಿಕ ಇಲಾಖೆ ತಿರಸ್ಕರಿಸಿರುವುದಾಗಿ ವರದಿಯಲ್ಲಿ ತಿಳಿಸಲಾಗಿದೆ.
ಸೂಪರ್ ಸ್ಪೆಶಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ಅಗತ್ಯ ಇರುವ ಜಾಗ, ಸಿಬ್ಬಂದಿಗಳು, ಉಪಕರಣಗಳು, ಹಾಗೂ ಇತರ ಸೌಲಭ್ಯಗಳು ಹಾಗೂ ಅದಕ್ಕೆ ತಗಲುವ ಆರ್ಥಿಕ ಹೊರೆಯ ಕುರಿತು ಕಾರವಾರ ವೈದ್ಯಕೀಯ ವಿಜ್ಞಾನ ಸಂಸ್ಥೆಯ ನಿರ್ದೇಶಕರಿಂದ ಪ್ರಸ್ತಾವನೆ ಪಡೆದು ಆರ್ಥಿಕ ಇಲಾಖೆ ಸಹಮತಿಗಾಗಿ ಕೋರಿಕೆ ಸಲ್ಲಿಸಲಾಗಿತ್ತು ಆದರೆ ಆರ್ಥಿಕ ಇಲಾಖೆ ಈ ಪ್ರಸ್ತಾವನೆಗೆ ಒಪ್ಪಿಗೆ ನೀಡಿಲ್ಲ ಎಂದು ವರದಿಯಲ್ಲಿ ತಿಳಿಸಲಾಗಿದ್ದು ಮತ್ತೊಮ್ಮೆ ಪ್ರಸ್ತಾವನೆಯನ್ನು ಮಂಜೂರಾತಿಗೆ ಕೋರಿ ಆರ್ಥಿಕ ಇಲಾಖೆಗೆ ಕಳುಹಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಆರ್ಥಿಕ ಇಲಾಖೆಯಿಂದ ಸಹಮತಿ ಬಂದ ನಂತರ ಅನುದಾನದ ಲಭ್ಯತೆಗೆ ಅನಗುಣವಾಗಿ ಕಾರವಾರಕ್ಕೆ ಸೂಪರ್ ಸ್ಪೆಶಾಲಿಟಿ ಆಸ್ಪತ್ರೆ ಮಂಜೂರಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಸುಧಾಕರ ಅವರು ಶಾಸಕಿ ರೂಪಾಲಿ ನಾಯ್ಕ ಅವರಿಗೆ ನೀಡಿರುವ ಉತ್ತರದ ಪ್ರತಿಯಲ್ಲಿ ವಿವರ ನೀಡಲಾಗಿದೆ.

ಪ್ರಮುಖ ಸುದ್ದಿ :-   ಸಚಿವ ದಿನೇಶ ಗುಂಡೂರಾವ್ ಮನೆಯಲ್ಲಿ ಅರ್ಧ ಪಾಕಿಸ್ತಾನ' ಹೇಳಿಕೆ : ಬಿಜೆಪಿ ಶಾಸಕ ಯತ್ನಾಳ ವಿರುದ್ಧದ ತನಿಖೆಗೆ ಹೈಕೋರ್ಟ್ ತಡೆ

ಉತ್ತರ ಕನ್ನಡ ಜಿಲ್ಲೆಯಲ್ಲಿ ಸೂಪರ್ ಸ್ಪೆಶಾಲಿಟಿ ಆಸ್ಪತ್ರೆ ಇಲ್ಲದೇ ಸಮಸ್ಯೆ ಎದುರಿಸುತ್ತಿರುವ ಬಡ ರೋಗಿಗಳಿಗೆ ಸೂಪರ್ ಸ್ಪೆಶಾಲಿಟಿ ಸೌಲಭ್ಯ ನೀಡುವ ದೃಷ್ಟಿಯಿಂದ ಜಿಲ್ಲಾ ವೈದ್ಯಕೀಯ ವಿಜ್ಞಾನ ಕೇಂದ್ರಕ್ಕೆ ಕಾರ್ಡಿಯಾಲಜಿ, ನ್ಯೂರೊ ಸರ್ಜರಿ, ಪಿಡಿಯಾಟ್ರಿಕ್ ಸರ್ಜರಿ, ಪ್ಲಾಸ್ಟಿಕ್ ಸರ್ಜರಿ, ಯೂರಾಲಾಜಿ, ನೆಪ್ರೋಲಾಜಿ, ನ್ಯೂರಾಲಾಜಿ ಹೀಗೆ 7 ಹುದ್ದೆಗಳನ್ನು ಮಂಜೂರಿ ಮಾಡಿ ಪತ್ರಿಕಾ ಪ್ರಕಟಣೆ ಮೂಲಕ ನೇರ ಸಂದರ್ಶನಕ್ಕೆ ಕರೆಯಲಾಗಿದ್ದರೂ ನೆಪ್ರಾಲಾಜಿ ವಿಭಾಗದ ಹುದ್ದೆಗೆ ಮಾತ್ರ ಅಭ್ಯರ್ಥಿ ನೇರ ಸಂದರ್ಶನಕ್ಕೆ ಹಾಜರಾಗಿದ್ದು ಆ ಹುದ್ದೆ ಭರ್ತಿ ಮಾಡಲಾಗಿದೆ, ಉಳಿದ ವಿಭಾಗಗಳಿಗೆ ಯಾರೂ
ಸಂದರ್ಶನಕ್ಕೆ ಹಾಜರಾಗಿಲ್ಲ, ನ್ಯೂರಾಲಾಜಿ ಮತ್ತು ಕಾರ್ಡಿಯಾಲಾಜಿ ವಿಭಾಗಕ್ಕೆ ಮಂಜೂರಾಗಿರುವ ಪ್ರಾದ್ಯಾಪಕ ಹುದ್ದೆಗಳಿಗೆ ತಜ್ಞರನ್ನು ತಾತ್ಕಾಲಿಕವಾಗಿ ನಿಯೋಜಿಸುವಂತೆ ನಿಮಾನ್ಸ್ ಮತ್ತು ಜಯದೇವ ಹೃದಯ ಸಂಸ್ಥೆಯನ್ನು ಕೋರಲು ಕ್ರಮ ವಹಿಸಲಾಗುತ್ತಿದೆ ಎಂದು ಆರೋಗ್ಯ ಸಚಿವರು ನೀಡಿರುವ ಉತ್ತರದ ಪ್ರತಿಯಲ್ಲಿ ವಿವರ ನೀಡಲಾಗಿದೆ.
ವಿಸ್ತೀರ್ಣದಲ್ಲಿ ದೊಡ್ಡದಾದ ಆದರೆ ಬಹುತೇಕ ಅರಣ್ಯ ಪ್ರದೇಶದಿಂದ ಕೂಡಿರುವ ಉತ್ತರ ಕನ್ನಡ ಜಿಲ್ಲೆಗೆ ಒಂದು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಬೇಕೆಂದು ಹಿಂದಿನಿಂದಲೂ ಜನರು ಒತ್ತಾಯಿಸುತ್ತ ಬಂದಿದ್ದಾರೆ. ಈ ಸಂಬಂಧ ಟ್ವಿಟ್ಟರ್‌ ಅಭಿಯಾನ ಸಹ ನಡೆದಿತ್ತು. ಉತ್ತರ ಕನ್ನಡ ಜಿಲ್ಲೆಯಿಂದ ಆಯ್ಕೆಯಾದ ಸಂಸದರು, ಶಾಸಕರು, ಸಚಿವರು, ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜಿಲ್ಲೆಯವರೇ ಆದ ವಿಧಾನಸಭಾ ಸ್ಪೀಕರ್ ವಿರುದ್ಧ ಆಕ್ರೋಶ ವ್ಯಕ್ತವಾಗಿತ್ತು. ಜನರ ಆಕ್ರೋಶಕ್ಕೆ ಮಣಿದ ಜನಪ್ರತಿನಿಧಿಗಳು ಆಸ್ಪತ್ರೆ ಕಟ್ಟಿಸಿಕೊಡುವ ಭರವಸೆ ನೀಡಿದ್ದರು.

3 / 5. 1

ಶೇರ್ ಮಾಡಿ :

  1. geek

    ಬಂಡವಾಳಶಾಹಿ ನೀತಿಯ ಪ್ರವರ್ತಕರಾದ ಬಿಜೆಪಿಯವರು ಸರಕಾರಿ ಸ್ವಾಮ್ಯದ ಸಂಸ್ಥೆಗಳನ್ನು ಎಂದೂ ಸ್ಥಾಪಿಸಲಾರರು. ಮೋದಿಯ ಆದರ್ಶದ ಪ್ರಕಾರ ನಡೆಯುವುದಾದರೆ ಸರಕಾರಿ ಆಸ್ಪತ್ರೆ, ಸಂಸ್ಥೆಗಳನ್ನು ಮುಚ್ಚಿ ಕೇವಲ ಖಾಸಗಿಯವರ ಬಳಿ ಎಲ್ಲಾ ಸೇವಗಗಳು ಇರಬೇಕು. ಯಾರು ಎಷ್ಟೇ ಹೋರಾಟ ಮಾಡಿದರೂ ಉತ್ತರಕನ್ನಡದಲ್ಲಿ ಸರಕಾರಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಎಂದೂ ಆಗಲಾರದು. ಆಂತರ್ಯದಲ್ಲಿ ಬಂಡವಾಳಶಾಹಿ ನೀತಿಯ ಬಗ್ಗೆ ತೀವ್ರ ಒಲವುಳ್ಳ ಬಿಜೆಪಿಯವರು ಉತ್ತರ ಕನ್ನಡದಲ್ಲಿ ಸರಕಾರಿ ಆಸ್ಪತ್ರೆಯನ್ನು ವಿರೋಧ ಪಕ್ಷದಲ್ಲಿದ್ದರೂ ಆಗಲು ಬಿಡುವುದಿಲ್ಲ.

ನಿಮ್ಮ ಕಾಮೆಂಟ್ ಬರೆಯಿರಿ

advertisement