ಉತ್ತರ ಪ್ರದೇಶ ದಲಿತ ಸಹೋದರಿಯರ ಅತ್ಯಾಚಾರ-ಹತ್ಯೆ ಪ್ರಕರಣ: ಒಟ್ಟು 6 ಜನರ ಬಂಧನ, ಎನ್‌ಕೌಂಟರ್‌ನಲ್ಲಿ ಓರ್ವ ಆರೋಪಿ ಬಂಧಿಸಿದ ಪೊಲೀಸರು

ಲಖಿಂಪುರ ಖೇರಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಲಖಿಂಪುರದಲ್ಲಿ 17 ಮತ್ತು 15 ವರ್ಷದ ಇಬ್ಬರು ದಲಿತ ಸಹೋದರಿಯರು ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಗಂಟೆಗಳ ನಂತರ, ಆರು ಯುವಕರನ್ನು ಅತ್ಯಾಚಾರ ಮತ್ತು ಕೊಲೆ ಆರೋಪದಲ್ಲಿ ಬಂಧಿಸಲಾಗಿದೆ. ಬಾಲಕಿಯರ ಕತ್ತು ಹಿಸುಕಿ ನಾಲ್ವರು ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಸುಹೇಲ್, ಜುನೈದ್, ಹಫೀಜುಲ್ ರೆಹಮಾನ್, ಕರಿಮುದ್ದೀನ್ ಮತ್ತು ಆರಿಫ್ ಎಂಬ ಯುವಕರನ್ನು ಅತ್ಯಾಚಾರ ಮತ್ತು ಕೊಲೆ ಆರೋಪದಲ್ಲಿ ಬಂಧಿಸಲಾಗಿ ಇವರಿಗೆ ಬಾಲಕಿಯರನ್ನು ಪರಿಚಯಿಸಿದ ನೆರೆಯವನಾದ ಆರನೇ ವ್ಯಕ್ತಿ ಛೋಟು ಎಂಬಾತನನ್ನೂ ಬಂಧಿಸಲಾಗಿದೆ.
ಬಾಲಕಿಯರನ್ನು ಕಬ್ಬಿನ ಗದ್ದೆಗೆ ಕರೆದೊಯ್ದು ಸುಹೇಲ್ ಮತ್ತು ಜುನೈದ್ ಅತ್ಯಾಚಾರವೆಸಗಿದ್ದಾರೆ ಎಂದು ಜಿಲ್ಲಾ ಪೊಲೀಸ್ ಮುಖ್ಯಸ್ಥ ಸಂಜೀವ್ ಸುಮನ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಹೆಣ್ಣುಮಕ್ಕಳು ಮದುವೆಗೆ ಒತ್ತಾಯಿಸಿದಾಗ, ಪುರುಷರು ತಮ್ಮ ದುಪಟ್ಟಾದಿಂದ ಕತ್ತು ಹಿಸುಕಿ ಕೊಂದರು. ನಂತರ ಕರೀಮುದ್ದೀನ್ ಮತ್ತು ಆರೀಫ್ ಸ್ಥಳಕ್ಕೆ ಬಂದು ಮುಚ್ಚಿಡಲು ಸಹಾಯ ಮಾಡಿದರು. ಅದು ಆತ್ಮಹತ್ಯೆ ಎಂದು ತೋರುವಂತೆ ಮಾಡಲು ಅವರು ದೇಹವನ್ನು ಮರಕ್ಕೆ ನೇಣು ಹಾಕಿದರು ಎಂದು ಅಧಿಕಾರಿ ಹೇಳಿದರು. .
ಹುಡುಗಿಯರನ್ನು ಅಪಹರಿಸಲಾಗಿಲ್ಲ, ಸಹೋದರಿಯರು ಸುಹೇಲ್ ಮತ್ತು ಜುನೈದ್ ಪರಿಚಯಸ್ಥರಾಗಿದ್ದರು. ಸಹೋದರಿಯರು ಅವರ ಬೈಕ್‌ಗಳಲ್ಲಿ ಸ್ವಇಚ್ಛೆಯಿಂದ ಹೋಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಂಧಿತರೆಲ್ಲರೂ ಪಕ್ಕದ ಗ್ರಾಮದವರು. ನಿನ್ನೆ ಐವರನ್ನು ಬಂಧಿಸಲಾಗಿದ್ದು, ಇಂದು ಬೆಳಗ್ಗೆ ಓರ್ವ ಎನ್‌ಕೌಂಟರ್‌ನಲ್ಲಿ ಸಿಕ್ಕಿಬಿದ್ದಿದ್ದಾನೆ. “ನಾವು ಅಪರಾಧದಲ್ಲಿ ಭಾಗಿಯಾಗಿರುವ ಪ್ರತಿಯೊಬ್ಬರನ್ನು ಬಂಧಿಸಿದ್ದೇವೆ” ಎಂದು ಅಧಿಕಾರಿ ಸಂಜೀವ್ ಸುಮನ್ ಹೇಳಿದ್ದಾರೆ.
ಶವವಾಗಿ ಪತ್ತೆಯಾಗುವ ಮೂರು ಗಂಟೆಗಳ ಮೊದಲು ಅವರನ್ನು ಅಪಹರಿಸಲಾಗಿತ್ತು ಎಂದು ಬಾಲಕಿಯರ ತಾಯಿ ಪೊಲೀಸರಿಗೆ ತಿಳಿಸಿದ್ದಾರೆ. ಮೂವರು ಯುವಕರು ಮನೆಗೆ ನುಗ್ಗಿ ತನ್ನ ಹೆಣ್ಣು ಮಕ್ಕಳನ್ನು ಮೋಟಾರ್ ಸೈಕಲ್‌ಗಳಲ್ಲಿ ಬಲವಂತವಾಗಿ ಕರೆದೊಯ್ದಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ಪ್ರಮುಖ ಸುದ್ದಿ :-   ಚುನಾವಣಾ ಭಾಷಣ ಮಾಡುವ ವೇಳೆ ವೇದಿಕೆಯಲ್ಲೇ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ

ಸಹೋದರಿಯರನ್ನು ಮೋಟಾರ್‌ಸೈಕಲ್‌ಗಳಲ್ಲಿ ಅಪಹರಿಸಿ, ಅತ್ಯಾಚಾರ ಎಸಗಲಾಗಿದೆ ಮತ್ತು ಅವರ ದೇಹಗಳನ್ನು ಮರಕ್ಕೆ ನೇತುಹಾಕಲಾಗಿದೆ ಎಂದು ಅವರ ತಾಯಿ ಪೊಲೀಸರಿಗೆ ತಿಳಿಸಿದ್ದಾರೆ.
ಬಳಿಕ ಕುಟುಂಬದವರು ಕಬ್ಬಿನ ಗದ್ದೆ ಬಳಿಯ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಶವಗಳು ಪತ್ತೆಯಾಗಿವೆ ಎಂದು ಹೇಳಿದ್ದಾರೆ. ಬಾಲಕಿಯರು ತಮ್ಮ ದುಪಟ್ಟಾಗಳಿಂದ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಯಾವುದೇ ಗಾಯಗಳಿಲ್ಲ.
ಪ್ರಮುಖ ಆರೋಪಿ ಚೋಟು ತನ್ನ ಸ್ನೇಹಿತರೊಂದಿಗೆ ಸಂತ್ರಸ್ತರ ಮನೆಗೆ ನುಗ್ಗಿ ತಾಯಿಯನ್ನು ಥಳಿಸಿ ಸಹೋದರಿಯರನ್ನು ಬಲವಂತವಾಗಿ ಮೋಟಾರ್ ಬೈಕ್‌ನಲ್ಲಿ ಕರೆದೊಯ್ದಿದ್ದಾನೆ. ಇಬ್ಬರು ಸಹೋದರಿಯರ ಮೇಲೆ ಅತ್ಯಾಚಾರವೆಸಗಿದ್ದಾರೆ ಮತ್ತು ಅವರ ದೇಹವನ್ನು ಮರಕ್ಕೆ ನೇತು ಹಾಕಿದ್ದಾರೆ ಎಂದು ಎಫ್‌ಐಆರ್ ತಿಳಿಸಿದೆ.
ಇಲ್ಲಿನ ನಿಘಾಸನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬುಧವಾರ ಇಬ್ಬರು ದಲಿತ ಹದಿಹರೆಯದ ಸಹೋದರಿಯರು ತಮ್ಮ ಮನೆಯಿಂದ ಸುಮಾರು ಒಂದು ಕಿಲೋಮೀಟರ್ ದೂರದಲ್ಲಿರುವ ಕಬ್ಬಿನ ಗದ್ದೆಯಲ್ಲಿ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಹತ್ಯೆಯನ್ನು ವಿರೋಧಿಸಿ ಗ್ರಾಮಸ್ಥರು ನಿಘಸನ್ ಕ್ರಾಸ್‌ನಲ್ಲಿ ಪ್ರತಿಭಟನೆ ನಡೆಸಿದರು.
ಭಾರತೀಯ ದಂಡ ಸಂಹಿತೆಯ (IPC) ಸೆಕ್ಷನ್ 302,323,452,376 ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ
ಶವಗಳನ್ನು ಮರಣೋತ್ತರ ಪರೀಕ್ಷೆಗೆ ತೆಗೆದುಕೊಳ್ಳಲು ಬಾಲಕಿಯರ ಮನೆಗೆ ಹೋದಾಗ ಕೋಪಗೊಂಡ ಗ್ರಾಮಸ್ಥರಿಂದ ಪೊಲೀಸರು ಪ್ರತಿಭಟನೆಯನ್ನು ಎದುರಿಸಬೇಕಾಯಿತು. ವಿ
ಇಬ್ಬರು ಸಹೋದರಿಯರ ಶವಗಳು ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಕಂಡುಬಂದಿವೆ. ಉತ್ತರ ಪ್ರದೇಶದ ಕಾನೂನು ಮತ್ತು ಸುವ್ಯವಸ್ಥೆಗೆ ಸಂಬಂಧಿಸಿದಂತೆ ಪ್ರತಿಪಕ್ಷಗಳು ಯೋಗಿ ಆದಿತ್ಯನಾಥ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿವೆ.

ಪ್ರಮುಖ ಸುದ್ದಿ :-   ಜೆಡಿಯು ಯುವ ಮುಖಂಡನ ಗುಂಡಿಕ್ಕಿ ಹತ್ಯೆ

.

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement