ಕರ್ನಾಟಕದ ಬೆಟ್ಟ ಕುರುಬ ಜಾತಿ ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆಗೆ ಕೇಂದ್ರ ಸಚಿವ ಸಂಪುಟ ಒಪ್ಪಿಗೆ

ನವದೆಹಲಿ: ಕರ್ನಾಟಕದ ಬೆಟ್ಟ ಕುರುಬ ಜನಾಂಗವನ್ನು ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆ ಮಾಡುವ ಮಹತ್ವದ ನಿರ್ಧಾರವನ್ನು ಕೇಂದ್ರ ಸಚಿವ ಸಂಪುಟ ಕೈಗೊಂಡಿದೆ. ಬೆಟ್ಟ ಕುರುಬ ಜನಾಂಗವನ್ನು ಕಾಡು ಕುರುಬ ಎಂದೂ ಕರೆಯಲಾಗುತ್ತದೆ.
ಬುಧವಾರ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಕೇಂದ್ರ ಸಚಿವ ಸಂಪುಟದ ಸಭೆಯಲ್ಲಿ ಕಾಡು ಕುರುಬ ಸೇರಿದಂತೆ ನಾನಾ ರಾಜ್ಯಗಳಿಗೆ ಸೇರಿದ ಒಟ್ಟು 12 ಸಮುದಾಯಗಳಿಗೆ ಪರಿಶಿಷ್ಟ ಪಂಗಡದ ಸ್ಥಾನಮಾನ ಕಲ್ಪಿಸುವ ಸಂಬಂಧ ಸಂವಿಧಾನ ತಿದ್ದುಪಡಿ ತರುವ ವಿಧೇಯಕಕ್ಕೆ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ. ಕರ್ನಾಟಕ ಸರ್ಕಾರ ಸಲ್ಲಿಸಿದ್ದ ಪ್ರಸ್ತಾವನೆಗೆ ಒಪ್ಪಿಗೆ ನೀಡಲಾಗಿದೆ.
ಕೇಂದ್ರ ಬುಡಕಟ್ಟು ವ್ಯವಹಾರಗಳ ಸಚಿವ ಅರ್ಜುನ್ ಮುಂಡಾ ಪ್ರಕಾರ, ಈ ಪ್ರಸ್ತಾಪಗಳು ಹಲವಾರು ವರ್ಷಗಳಿಂದ ಬಾಕಿ ಉಳಿದಿತ್ತು. ಕರ್ನಾಟಕದ ಕಾಡು ಕುರುಬರ ಸಮಾನಾರ್ಥಕವಾಗಿ ಬೆಟ್ಟ-ಕುರುಬ ಸಮುದಾಯಕ್ಕೆ ಎಸ್‌ಟಿ ಸ್ಥಾನಮಾನ ನೀಡಲಾಗಿದೆ ಎಂದು ಅವರು ಹೇಳಿದರು.

ಚಾಮರಾಜನಗರ, ಕೊಡಗು ಮತ್ತು ಮೈಸೂರು ಜಿಲ್ಲೆಗಳ ಕೆಲವು ಭಾಗಗಳಲ್ಲಿ ವಾಸಿಸುತ್ತಿರುವ ಬೆಟ್ಟ-ಕುರುಬ ಸಮುದಾಯವು ಕಳೆದ 30 ವರ್ಷಗಳಿಂದ ತಮ್ಮನ್ನು ಎಸ್‌ಟಿ ವರ್ಗಕ್ಕೆ ಸೇರಿಸಬೇಕೆಂದು ಒತ್ತಾಯಿಸುತ್ತಿತ್ತು. ಮೂಲಭೂತವಾಗಿ, ಕಾಗುಣಿತ ದೋಷಗಳು ಮತ್ತು ಹಲವಾರು ಸಮುದಾಯಗಳ ಒಂದೇ ರೀತಿಯ ಧ್ವನಿಯ ಹೆಸರುಗಳಿಂದಾಗಿ, ಇವುಗಳನ್ನು ಬಹಳ ಸಮಯದವರೆಗೆ ಎಸ್ಟಿ ವರ್ಗಕ್ಕೆ ತರಲಾಗಲಿಲ್ಲ ಎಂದು ಸಚಿವ ಪ್ರಲ್ಹಾದ ಜೋಶಿ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.
ಕರ್ನಾಟಕದ ಮೈಸೂರು, ಚಾಮರಾಜ ನಗರ, ಕೊಡಗು ಹಾಗೂ ಸುತ್ತಲಿನ ಪ್ರಾಂತ್ಯಗಳಲ್ಲಿ ಅರಣ್ಯ ಹಾಗೂ ಅರಣ್ಯದಂಚಿನ ಪ್ರಾಂತ್ಯಗಳಲ್ಲಿ ಈ ಸಮುದಾಯ ನೆಲೆಸಿತ್ತು. ಕೆಲವು ದಶಕಗಳ ಹಿಂದೆ ಈ ಸಮುದಾಯವನ್ನು ಒಕ್ಕಲೆಬ್ಬಿಸಲಾಗಿತ್ತು. ಸುಮಾರು 30 ವರ್ಷಗಳಿಂದಲೂ ಈ ಸಮುದಾಯದ ಜನರು ತಮಗೆ ಮೀಸಲಾತಿ ಕಲ್ಪಿಸಬೇಕೆಂದು ಕೋರಿ ಹೋರಾಟ ನಡೆಸುತ್ತ ಬಂದಿದ್ದರು.
ಈ ಹಿನ್ನೆಲೆಯಲ್ಲಿ, ಕರ್ನಾಟಕ ಸರ್ಕಾರ ಈ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಬೇಕೆಂದು ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿತ್ತು. ಆ ಮನವಿಗೆ ಕೇಂದ್ರ ಒಪ್ಪಿಗೆ ನೀಡಿದೆ.

ಪ್ರಮುಖ ಸುದ್ದಿ :-   ನೇಹಾ ಹಿರೇಮಠ ಕೊಲೆ ಪ್ರಕರಣ: ಆರೋಪಿ ಫಯಾಜ್‌ ಆರು ದಿನ ಸಿಐಡಿ ಕಸ್ಟಡಿಗೆ

2 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement