ಪ್ರತಿಪಕ್ಷಗಳ ವಿರೋಧದ ನಡುವೆ ಧ್ವನಿ ಮತದ ಮೂಲಕ ಮತಾಂತರ ನಿಷೇಧ ವಿಧೇಯಕ ಪರಿಷತ್ತಿನಲ್ಲಿ ಅಂಗೀಕಾರ

ಬೆಂಗಳೂರು: ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೂ ಧ್ವನಿ ಮತದ ಮೂಲಕ ಗುರುವಾರ ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ವಿಧೇಯಕ ವಿಧಾನ ಪರಿಷತ್ತಿನಲ್ಲಿ ಅಂಗೀಕರವಾಯಿತು.
ಇಂದು, ಗುರುವಾರ ಬೆಳಿಗ್ಗೆ ವಿಧೇಯಕವನ್ನು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ವಿಧೇಯಕವನ್ನು ಮಂಡಿದರು. ಕಾಯ್ದೆಯ ಪ್ರತಿಗಳನ್ನು ಹರಿದು ಹಾಕುವ ಮೂಲಕ ಕಾಂಗ್ರೆಸ್  ಹಾಗೂ ಜೆಡಿಎಸ್ ಸದಸ್ಯರು ಸಭಾ ತ್ಯಾಗ ಮಾಡಿದರು. ಈ ವೇಳೆ ಬಿಜೆಪಿ ಸದಸ್ಯರು ಭಾರತ್ ಮಾತಾಕೀ ಜೈ, ಹಿಂದೂ ವಿರೋಧಿ ಎಂದು ಕಾಂಗ್ರೆಸ್ ಗೆ ಧಿಕ್ಕಾರ ಎಂದು ಕೂಗಿದರು.
ಮಸೂದೆಯಲ್ಲಿ ಬಲವಂತದ ಮತಾಂತರವನ್ನು ಮಾತ್ರ ನಿಷೇಧಿಸಲಾಗಿದೆ. ಪ್ರೀತಿ, ಹಣ, ಶಿಕ್ಷಣ, ಉದ್ಯೋಗ ಈ ರೀತಿ ಆಮಿಷ ಒಡ್ಡಿ ಅಶಕ್ತರನ್ನು ಮತಾಂತರ ಮಾಡುವಂತಿಲ್ಲ. ಮುಸ್ಲಿಮ್‌ ವ್ಯಕ್ತಿಯನ್ನು ಬಲವಂತವಾಗಿ ಹಿಂದೂ ಧರ್ಮಕ್ಕೆ ಮತಾಂತರ ಮಾಡಿದರೆ ಕೇಸ್‌ ದಾಖಲಿಸಬಹುದು. ಸ್ವಂತ ಇಚ್ಛೆಯಿಂದ ಯಾರು ಬೇಕಾದರೂ ಮತಾಂತರ ಆಗಬಹುದು.ಈ ಎಲ್ಲ ಅಂಶಗಳು ಮಸೂದೆಯಲ್ಲಿದೆ ಎಂದು ಸಂಸದೀಯ ಖಾತೆ ಸಚಿವ ಮಾಧು ಸ್ವಾಮಿ ಹೇಳಿದರು.

ಇದಕ್ಕೆ ಅರ್ಜಿ ಯಾಕೆ ಕೊಡಬೇಕು ಎಂದು ಹರಿಪ್ರಸಾದ್‌ ಕೇಳಿದಾಗ, ಆ ವಿಚಾರವೇ ಈ ಮಸೂದೆಯಲ್ಲಿದೆ. ಅದೇ ಪಾಯಿಂಟ್‌. ಯಾರಿಗೆ ಅರ್ಜಿ ಕೊಡಬೇಕು? ಯಾರು ತನಿಖೆ ನಡೆಸಬೇಕು ಎಂಬಿತ್ಯಾದಿ ಅಂಶಗಳು ಅಂಶಗಳು ಮಸೂದೆಯಲ್ಲಿದೆ ಎಂದು ಮಾಧುಸ್ವಾಮಿ ಹೇಳಿದರು.
ಕಳೆದ ಡಿಸೆಂಬರ್‌ನಲ್ಲಿ ‘ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯದ ಹಕ್ಕು ಸಂರಕ್ಷಣಾ ಮಸೂದೆ’ಯನ್ನು ವಿಧಾನಸಭೆಯಲ್ಲಿ ಅಂಗೀಕರಿಸಲಾಗಿತ್ತು.
ವಿಧಾನ ಪರಿಷತ್ತಿನಲ್ಲಿ ಆಗ ಆಡಳಿತಾರೂಢ ಬಿಜೆಪಿಗೆ ಬಹುಮತದ ಕೊರತೆಯಿದ್ದ ಕಾರಣ, ಸರ್ಕಾರವು ಈ ವರ್ಷದ ಮೇನಲ್ಲಿ ಮಸೂದೆಯನ್ನು ಜಾರಿಗೆ ತರಲು ಸುಗ್ರೀವಾಜ್ಞೆ ಹೊರಡಿಸಿತ್ತು.

ಪ್ರಮುಖ ಸುದ್ದಿ :-   ಚಾಮರಾಜನಗರ : ಇಂಡಿಗನತ್ತ ಮತಗಟ್ಟೆ ಮೇಲೆ ಕಲ್ಲು ತೂರಾಟ, ಗಲಾಟೆ, ಮತಯಂತ್ರಕ್ಕೆ ಹಾನಿ

2 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement