ಲೋಕಾಯುಕ್ತರ ವೇತನ, ಭತ್ಯೆ ಹೆಚ್ಚಳಕ್ಕೆ ಮಸೂದೆ: ಲೋಕಾಯುಕ್ತ ಬಲಪಡಿಸಲು ಸಚಿವ ಸಂಪುಟ ಒಪ್ಪಿಗೆ

ಬೆಂಗಳೂರು: ಕರ್ನಾಟಕ ಹೈಕೋರ್ಟ್‌ ಆದೇಶ ಹಿನ್ನೆಲೆಯಲ್ಲಿ ಲೋಕಾಯುಕ್ತ ಬಲ ಪಡಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಬುಧವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಕರ್ನಾಟಕ ಲೋಕಾಯುಕ್ತ ತಿದ್ದುಪಡಿ (2022) ಕಾಯ್ದೆಗೆ ಸಚಿವ ಸಂಪುಟವು ಒಪ್ಪಿಗೆ ನೀಡಿದ್ದು, ಲೋಕಾಯುಕ್ತಕ್ಕೆ ಹೆಚ್ಚುವರಿ (ಅಡಿಷನಲ್) ರಿಜಿಸ್ಟ್ರಾರ್​​ ನೇಮಕಕ್ಕೂ ಸಚಿವ ಸಂಪುಟ ತೀರ್ಮಾನಿಸಿದೆ.
ಲೋಕಾಯುಕ್ತ ನ್ಯಾಯಮೂರ್ತಿಗಳ ವೇತನ ಹೆಚ್ಚಿಸಿ, ಹೈಕೋರ್ಟ್​​ ನ್ಯಾಯಮೂರ್ತಿಗಳ ವೇತನಕ್ಕೆ ಸರಿಸಮಾನವಾದ ವೇತನ ನೀಡಲು ಸಹ ಸಂಪುಟ ಒಪ್ಪಿಗೆ ಸೂಚಿಸಿದೆ.

ಎಸಿಬಿ ರಚನೆಯನ್ನು ರದ್ದು ಪಡಿಸಿ ಕರ್ನಾಟಕ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ಈ ಹಿಂದೆ 2016ರಲ್ಲಿ ಸಿದ್ದರಾಮಯ್ಯನವರ ಸರ್ಕಾರ ಎಸಿಬಿಯನ್ನು ರಚಿಸಿತ್ತು. ಇದನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ಸಲ್ಲಿಸಿದ್ದ ಪಿಐಎಲ್ ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ಬಿ ವೀರಪ್ಪ ಹಾಗೂ ನ್ಯಾಯಮೂರ್ತಿ ಕೆ ಎಸ್ ಹೇಮಲೇಖಾ ಅವರ ನ್ಯಾಯಪೀಠ, ಎಸಿಬಿ ರಚನೆಯನ್ನೇ ರದ್ದುಪಡಿಸಿತ್ತು. ಅಲ್ಲದೆ ಕರ್ನಾಟಕ ಲೋಕಾಯುಕ್ತ ಕಾಯ್ದೆಗೆ ತಿದ್ದುಪಡಿ ಅಗತ್ಯದ ಬಗ್ಗೆ ಹೇಳಿ ಲೋಕಾಯುಕ್ತ ಬಲವರ್ಧನೆಗೆ ಆದೇಶಿಸಿತ್ತು.
ಎಸಿಬಿಯಲ್ಲಿದ್ದ ಎಲ್ಲ ಪ್ರಕರಣಗಳನ್ನು ಲೋಕಾಯುಕ್ತಕ್ಕೆ ನೀಡಲು ಆದೇಶಿಸಿದ್ದ ಹೈಕೋರ್ಟ್‌ ಲೋಕಾಯುಕ್ತ ಪೊಲೀಸರೇ ತನಿಖೆ ಮುಂದುವರಿಸಬೇಕು. ಲೋಕಾಯುಕ್ತ, ಉಪಲೋಕಾಯುಕ್ತರ ನೇಮಕ ವೇಳೆ ಅರ್ಹತೆ ಪರಿಗಣಿಸಬೇಕು ಎಂದು ಆದೇಶದಲ್ಲಿ ಹೇಳಿತ್ತು.

ಪ್ರಮುಖ ಸುದ್ದಿ :-   ಭಟ್ಕಳ : ಮೀನುಗಾರಿಕಾ ಬೋಟ್ ಮುಳುಗಡೆ

3 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement