ತುಮಕೂರು: ಬೂದಿಬೆಟ್ಟ ಗ್ರಾಮ ಪಂಚಾಯತದಲ್ಲಿ ಸ್ಫೋಟ : ದುಷ್ಕರ್ಮಿಗಳ ಸಂಚಿನ ಶಂಕೆ

ತುಮಕೂರು: ಸ್ಫೋಟ ಸಂಭವಿಸಿ ಗ್ರಾಮ ಪಂಚಾಯತ ಕಚೇರಿ ಕಟ್ಟಡ ಬಿರುಕು ಬಿಟ್ಟಿರುವ ಘಟನೆ ತುಮಕೂರು ಜಿಲ್ಲೆಯ ಪಾವಗಡ ತಾಲ್ಲೂಕಿನ ಬೂದಿಬೆಟ್ಟ ಗ್ರಾಮದಲ್ಲಿ ನಡೆದಿದೆ. ಪಾವಗಡ ತಾಲ್ಲೂಕು ಗಡಿ ಭಾಗವಾದ ವೈಎನ್ ಹೊಸಕೋಟೆ ಸಮೀಪದ ಬೂದಿಬೆಟ್ಟ ಗ್ರಾಮ ಪಂಚಾಯತ ಕಚೇರಿಯಲ್ಲಿ ಗುರುವಾರ ರಾತ್ರಿ ಸ್ಫೋಟ ಸಂಭವಿಸಿದೆ. ದುಷ್ಕರ್ಮಿಗಳು ಉದ್ದೇಶಪೂರ್ವಕವಾಗಿ ಜಿಲೆಟಿನ್‌ ಮೂಲಕ ಸ್ಫೋಟ ನಡೆಸಿದ್ದಾರೆ ಎಂದು ಹೇಳಲಾಗಿದೆ.
ಗ್ರಾಮ ಪಂಚಾಯತ ಕಚೇರಿಯ ಹಿಂಭಾಗದ ಕಿಟಕಿಯನ್ನು ಮುರಿದು ಒಳ ನುಗ್ಗಿರುವ ದುಷ್ಕರ್ಮಿಗಳು ಸಭಾಂಗಣದ ಮೂಲೆಯಲ್ಲಿ ದಾಖಲೆಗಳನ್ನು ದಾಖಲೆಗಳ ಕಪಾಟಿಗೆ ಹೊಂದಿಕೊಂಡಂತೆ ಇರುವ ಕುರ್ಚಿಯ ಮೇಲೆ ಸ್ಫೋಟಕ ಇಟ್ಟು ಸ್ಫೋಟಿಸಿದ್ದಾರೆ ಎಂದು ಹೇಳಲಾಗಿದೆ. ಸ್ಫೋಟದಿಂದ ಕಟ್ಟಡದ ಗೋಡೆಗಳು ಬಿರುಕು ಬಿಟ್ಟಿವೆ. ಕುರ್ಚಿಗಳು ಸುಟ್ಟು ಹೋಗಿವೆ.

ರಾತ್ರಿ ಇದ್ದಕ್ಕಿದ್ದಂತೆ ಭಾರಿ ಸದ್ದು ಕೇಳಿ ಬಂದ ನಂತರ ಗಾಬರಿಗೊಂಡ ಜನರು ಹೋಗಿ ನೋಡಿದಾಗ ಗ್ರಾಮ ಪಂಚಾಯತ ಕಟ್ಟಡ ಬೆಂಕಿ ಹತ್ತಿಕೊಂಡು ಉರಿಯುತ್ತಿರುವುದು ಕಂಡುಬಂದಿದೆ. ಜಿಲೆಟಿನ್ ಪೌಡರ್ ಬಳಸಿ ಈ ಕೃತ್ಯ ಮಾಡಿರಬಹುದು ಎಂದು ಊಹಿಸಲಾಗಿದೆ. ತನಿಖೆಯಿಂದ ಯಾವುದರಿಂದ ಸ್ಫೋಟಿಸಲಾಗಿದೆ ಎಂಬ ಸತ್ಯ ಹೊರಬೀಳಬೇಕಿದೆ.
ಗ್ರಾಮ ಪಂಚಾಯತದ ದಾಖಲೆಗಳ ನಾಶಕ್ಕೆ ಈ ರೀತಿಯ ಕೃತ್ಯ ಮಾಡಿರಬಹುದು ಎಂಬ ಶಂಕೆ ವ್ಯಕ್ತವಾಗಿದ್ದು, ಅದಕ್ಕಾಗಿಯೇ ದಾಖಲೆ ಇರುವ ಕಪಾಟಿಗೆ ಹೊಂದುಕೊಂಡೇ ಸ್ಫೋಟಕ ಇರಿಸಲಾಗಿದೆ ಎಂದು ಹೇಳಲಾಗುತ್ತಿದೆ. ಸ್ಥಳೀಯವಾಗಿ ಕಲ್ಲು ಗಣಿಗಾರಿಕೆಗೆ ಬಳಸುವ ಸ್ಫೋಟಕ ಬಳಸಿರಬಹುದು ಎಂದು ಶಂಕಿಸಲಾಗಿದ್ದು, ಸ್ಫೋಟಕದ ಪೌಡರ್ ಗ್ರಾ.ಪಂ ಆವರಣದಲ್ಲಿ ಕಂಡುಬಂದಿದೆ ಎಂದು ಸಾರ್ವಜನಿಕರು ತಿಳಿಸಿದ್ದಾರೆ ಎಂದು ವರದಿಯಾಗಿದೆ.

ಪ್ರಮುಖ ಸುದ್ದಿ :-   ಎಸ್ ಎಸ್ ಎಲ್ ಸಿ ಪರೀಕ್ಷೆ ವಿದ್ಯಾರ್ಥಿಗಳ ಮಾರಾಮಾರಿ : ಚಾಕು ಇರಿತ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement