ಡಿಎಸ್‌ಟಿ- ಪಿಹೆಚ್‌ಡಿ ಶಿಷ್ಯವೇತನಕ್ಕೆ ಅರ್ಜಿ ಆಹ್ವಾನ

ಹುಬ್ಬಳ್ಳಿ: ಕರ್ನಾಟಕ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯು (ಡಿ.ಎಸ್.ಟಿ) ವಿಜ್ಞಾನ ಮತ್ತು ಇಂಜಿನಿಯರಿಂಗ್ ಪಿ.ಹೆಚ್.ಡಿ ಸಂಶೋಧನೆಗೆ ಕರ್ನಾಟಕ ಡಿ.ಎಸ್‌.ಟಿ- ಪಿಹೆಚ್.ಡಿ ಶಿಷ್ಯವೇತನ ಎಂಬ ಕಾರ್ಯಕ್ರಮದಡಿ 2022-23 ನೇ ಸಾಲಿನ ಯೋಜನೆಯಡಿ ಶಿಷ್ಯವೇತನ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.
ಕರ್ನಾಟಕ ಡಿ.ಎಸ್‌.ಟಿ- ಪಿಹೆಚ್.ಡಿ ಶಿಷ್ಯವೇತನ ಎಂಬ ಕಾರ್ಯಕ್ರಮದಡಿವಿಜ್ಞಾನ ಮತ್ತು ಇಂಜಿನಿಯರಿಂಗ್ ವಿಷಯಗಳಲ್ಲಿ ಕರ್ನಾಟಕದಲ್ಲಿರುವ ಮಾನ್ಯತೆ ಪಡೆದ ವಿಶ್ವವಿದ್ಯಾಲಯ,ಸಂಸ್ಥೆ, ಕಾಲೇಜುಗಳಲ್ಲಿ ಈಗಾಗಲೇ ಪಿ.ಹೆಚ್.ಡಿ ಪದವಿಗೆ ನೋಂದಾಯಿತರಾಗಿರುವ ಅರ್ಹ ಸಂಶೋಧನಾ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅಭ್ಯರ್ಥಿಗಳು ಅಕ್ಟೋಬರ್ 12 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು. ಮಾಹಿತಿಗಾಗಿ ದೂರವಾಣಿ ಸಂಖ್ಯೆ 080-26711166 ಹಾಗೂ ಅರ್ಜಿ ಸಲ್ಲಿಸಲು ವೆಬ್ ಸೈಟ್ http://ksteps.Karnataka.gov.in ಸಂಪರ್ಕಿಸಬಹುದು ಎಂದು ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿಯ ವ್ಯವಸ್ಥಾಪಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement