ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ 100 ವಿದ್ಯುತ್ ಬೈಕ್‌ಗಳ ವಿತರಣೆ: ಸಿಎಂ ಬೊಮ್ಮಾಯಿ

ಬೆಂಗಳೂರು: ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ 100ರಂತೆ ಬಾಬು ಜಗಜೀವನರಾಮ್ ಅವರ ಹೆಸರಿನಲ್ಲಿ ಎಸ್ಸಿ-ಎಸ್ಟಿ ಸಮುದಾಯದವರಿಗೆ ವಿದ್ಯುತ್ ಚಾಲಿತ ದ್ವಿಚಕ್ರವಾಹನಗಳನ್ನು ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಕಟಿಸಿದರು.
ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಅಭಿವೃದ್ಧಿ ನಿಗಮದ ವತಿಯಿಂದ ವಿಧಾನಸೌಧದ ಮುಂಭಾಗ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ವಿಧಾನಸೌಧ, ವಿಕಾಸಸೌಧ ಮತ್ತು ಬಹುಮಹಡಿ ಕಟ್ಟಡಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಫಾಯಿ ಕರ್ಮಚಾರಿಗಳಿಗೆ ವಿದ್ಯುತ್ ಚಾಲಿತ ದ್ವಿಚಕ್ರ ವಾಹನಗಳನ್ನು ವಿತರಿಸಿ ಮಾತನಾಡಿದ ಅವರು,
ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ 100ರಂತೆ ವಿದ್ಯುತ್ ಬೈಕ್‌ಗಳನ್ನು ನೀಡಲಿದ್ದೇವೆ. ಇದರಿಂದ ಎಸ್ಸಿ-ಎಸ್ಟಿಯ ಸಮುದಾಯಕ್ಕೆ ಅನುಕೂಲವಾಗಲಿದೆ.
ಈ ಯೋಜನೆಯನ್ನು 10 ಮಹಾನಗರ ಪಾಲಿಕೆಗಳಿಗೂ ವಿಸ್ತರಿಸಲಾಗುವುದು. 400 ಜನರಿಗೆ ಇದರಿಂದ ಅನುಕೂಲವಾಗಲಿದೆ. ಸ್ತ್ರೀ ಶಕ್ತಿ ಸಂಘದವರು ಮತ್ತು ಯುವಕರು ಇದರ ಅನುಕೂಲ ಪಡೆಯಬೇಕು ಎಂದರು.

ವಿದೇಶದಲ್ಲಿ ಕಾರಿನಲ್ಲಿ ಬಂದು ಸ್ವಚ್ಚತಾ ಕಾರ್ಯ ಮಾಡಿಹೋಗುತ್ತಾರೆ ಎಂದು ಕೇಳಿದ್ದೇವೆ. ಅಂಥ ಶಕ್ತಿ ನಮ್ಮಲ್ಲಿಯೂ ಬರಲಿ. ಪೌರ ಹಾಗೂ ಸಫಾಯಿ ಕರ್ಮಚಾರಿಗಳ ಎಲ್ಲ ವಿಚಾರಗಳಲ್ಲೂ ಸರ್ಕಾರ ಸ್ಪಂದಿಸುತ್ತಿದೆ. ಸರ್ಕಾರ ಬಡವರು ಮತ್ತು ದುಡಿಯುವ ವರ್ಗದವರ ಪರವಾಗಿದ್ದು, ಸಾಮಾಜಿಕ ನ್ಯಾಯವನ್ನು ಕೃತಿಯಲ್ಲಿ ತೋರಿಸುತ್ತಿದೆ ಎಂದು ಹೇಳಿದರು.
ವಿದ್ಯುತ್ ಚಾಲಿತ ದ್ವಿಚಕ್ರವಾಹನ ನೀಡುತ್ತಿರುವುದು ಒಳ್ಳೆಯ ಕಾರ್ಯಕ್ರಮ. ಸೌಲಭ್ಯಗಳ ಮೂಲಕ ಅವರ ಬದುಕಿಗೆ ಶಕ್ತಿ ತುಂಬುವ ಕೆಲಸ ಮಾಡುತ್ತಿದ್ದೇವೆ. ದಣಿವರಿಯದೆ ಇವರು ಕೆಲಸ ಮಾಡುತ್ತಿದ್ದಾರೆ. ಅವರ ಸೇವೆವೆ ಮನ್ನಣೆ ನೀಡುವ ಕಾರ್ಯ ಇದಾಗಿದೆ ಎಂದರು.
ಸಚಿವರಾದ ಗೋವಿಂದ ಕಾರಜೋಳ, ಕೋಟಾ ಶ್ರೀನಿವಾಸ ಪೂಜಾರಿ, ವಿಧಾನಪರಿಷತ್ ಸದಸ್ಯ ಎಂ.ಕೆ.ಪ್ರಾಣೇಶ, ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಶಿವಣ್ಣ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಮೊದಲಾದವರಿದ್ದರು.

ಪ್ರಮುಖ ಸುದ್ದಿ :-   ಮೊಬೈಲ್ ಬೆಳಕಿನಲ್ಲಿ ಸಿಸೇರಿಯನ್ ಹೆರಿಗೆ : ತಾಯಿ-ಮಗು ಸಾವು

2 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement