ಭಾರೀ ಮಳೆಗೆ ಮನೆಗೋಡೆ ಕುಸಿದು 12 ಜನರ ಸಾವು

ಲಕ್ನೋ: ಭಾರೀ ಮಳೆಯಿಂದ ಹಾನಿಗೊಳಗಾದ ನಂತರ ಲಕ್ನೋದಲ್ಲಿ ಒಂಬತ್ತು ಮತ್ತು ಉನ್ನಾವೊದಲ್ಲಿ ಮೂವರು ಸೇರಿದಂತೆ ಉತ್ತರ ಪ್ರದೇಶದಲ್ಲಿ ಪ್ರತ್ಯೇಕ ಗೋಡೆ ಕುಸಿತದ ಘಟನೆಗಳಲ್ಲಿ 12 ಜನರು ಸಾವಿಗೀಡಾಗಿದ್ದಾರೆ.
ಶುಕ್ರವಾರ ಲಕ್ನೋದ ದಿಲ್ಕುಶಾ ಪ್ರದೇಶದಲ್ಲಿ ಭಾರೀ ಮಳೆಯಿಂದಾಗಿ ಗೋಡೆ ಕುಸಿದು ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಒಂಬತ್ತು ಜನರು ಮೃತಪಟ್ಟಿದ್ದಾರೆ ಮತ್ತು ಒಬ್ಬರು ಗಾಯಗೊಂಡಿದ್ದಾರೆ. ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.

ಭಾರೀ ಮಳೆಯಿಂದಾಗಿ ಉತ್ತರ ಪ್ರದೇಶದ ಲಕ್ನೋದಲ್ಲಿ ಗೋಡೆ ಕುಸಿದು ಕನಿಷ್ಠ ಒಂಬತ್ತು ಜನರು ಮೃತಪಟ್ಟಿದ್ದಾರೆ ಮತ್ತು ಇಬ್ಬರು ಗಾಯಗೊಂಡಿದ್ದಾರೆ. ದಿಲ್ಕುಶಾ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಲಕ್ನೋದ ದಿಲ್ಕುಶಾ ಪ್ರದೇಶದಲ್ಲಿ ಭಾರೀ ಮಳೆಯಿಂದಾಗಿ ಸೇನಾ ಆವರಣದ ಗೋಡೆ ಕುಸಿದು ಈ ಅವಘಡ ಸಂಭವಿಸದೆ. ಅವಶೇಷಗಳಿಂದ ಒಬ್ಬ ವ್ಯಕ್ತಿಯನ್ನು ರಕ್ಷಿಸಲಾಗಿದೆ ಎಂದು ಎಂದು ಜಂಟಿ ಪೊಲೀಸ್ ಆಯುಕ್ತ (ಕಾನೂನು ಮತ್ತು ಸುವ್ಯವಸ್ಥೆ) ಪಿಯೂಷ್ ಮೊರ್ಡಿಯಾ ತಿಳಿಸಿದ್ದಾರೆ.

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ದುರ್ಘಟನೆ ಬಗ್ಗೆ ಸಂತಾಪ ವ್ಯಕ್ತಪಡಿಸಿದ್ದು, ಸ್ಥಳಕ್ಕೆ ಆಗಮಿಸುವಂತೆ ಹಿರಿಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ.ಮುಖ್ಯಮಂತ್ರಿಗಳು ಮೃತರ ಕುಟುಂಬಗಳಿಗೆ 4 ಲಕ್ಷ ರೂ.ಗಳ ಪರಿಹಾರವನ್ನು ಘೋಷಿಸಿದ್ದಾರೆ ಮತ್ತು ಗಾಯಗೊಂಡವರಿಗೆ ಸೂಕ್ತ ಚಿಕಿತ್ಸೆಗೆ ಸೂಚನೆಗಳನ್ನು ನೀಡಿದ್ದಾರೆ.
ಉತ್ತರ ಪ್ರದೇಶದ ಉನ್ನಾವೋದಲ್ಲಿ ನಿನ್ನೆ ತಡರಾತ್ರಿ ಸುರಿದ ಮಳೆಗೆ ಮನೆಯೊಂದರ ಮೇಲ್ಛಾವಣಿ ಕುಸಿದು ಬಿದ್ದ ಪರಿಣಾಮ ಇಬ್ಬರು ಅಪ್ರಾಪ್ತರು ಸೇರಿದಂತೆ ಮೂವರು ಮೃತಪಟ್ಟಿದ್ದು, ಒಬ್ಬರು ಗಾಯಗೊಂಡಿದ್ದಾರೆ.

ಪ್ರಮುಖ ಸುದ್ದಿ :-   127 ವರ್ಷಗಳಷ್ಟು ಹಳೆಯ ಗೋದ್ರೇಜ್ ಗ್ರುಪ್‌ ಇಬ್ಭಾಗ

 

3 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement