ಬ್ಯಾಂಕ್‌ಗಳಲ್ಲಿ ಸ್ಥಳೀಯ ಭಾಷೆ ಮಾತನಾಡುವ ಸಿಬ್ಬಂದಿ ನೇಮಕ ಮಾಡಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌

ನವದೆಹಲಿ: ಬ್ಯಾಂಕ್‌ಗಳಲ್ಲಿ ಸ್ಥಳೀಯ ಭಾಷೆ ಮಾತನಾಡುವ ಸಿಬ್ಬಂದಿ ನೇಮಕ ಮಾಡಬೇಕು ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಹೇಳಿದ್ದಾರೆ.
ಶುಕ್ರವಾರ, ಮುಂಬೈನಲ್ಲಿ ಭಾರತೀಯ ಬ್ಯಾಂಕ್‌ಗಳ ಸಂಘದ 75ನೇ ವಾರ್ಷಿಕ ಸಾಮಾನ್ಯ ಸಭೆಯನ್ನುದ್ದೇಶಿಸಿ ಮಾತನಾಡಿದ ಸೀತಾರಾಮನ್ ಶುಕ್ರವಾರ ಈ ಹೇಳಿಕೆ ನೀಡಿದ್ದಾರೆ. ಬ್ಯಾಂಕ್‌ಗಳು ಗ್ರಾಹಕರೊಂದಿಗೆ ಮಾತನಾಡುವ ರೀತಿಯಲ್ಲಿ “ಒಳಗೊಳ್ಳುವಿಕೆಯನ್ನು ತೋರಿಸಬೇಕು. ನೀವು ಪ್ರಾದೇಶಿಕ ಭಾಷೆ ಮಾತನಾಡದ ಸಿಬ್ಬಂದಿಯನ್ನು ಹೊಂದಿರುವಾಗ ನಿಮಗೆ ಸಮಸ್ಯೆ ಎದುರಾಗುತ್ತದೆ ಎಂದು ಅವರು ಹೇಳಿದರು.
ಬ್ಯಾಂಕ್‌ಗಳು ಸ್ಥಳೀಯ ಭಾಷೆಯಲ್ಲಿ ಸಂವಹನ ನಡೆಸಲು ಸಾಧ್ಯವಾಗದ ಸಿಬ್ಬಂದಿಯನ್ನು ಹೊಂದಿದ್ದರೆ, ಗ್ರಾಹಕರೊಂದಿಗೆ ಸಂವಹನ ನಡೆಸುವ ಅಗತ್ಯವಿರುವ ಪೋಸ್ಟ್‌ಗಳಿಂದ ಅವರನ್ನು ದೂರವಿಡಬೇಕು ಎಂದು ಸೀತಾರಾಮನ್ ಹೇಳಿದ್ದಾರೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

ಬ್ಯಾಂಕ್‌ಗಳ ನೇಮಕಾತಿ ಪ್ರಕ್ರಿಯೆಯಲ್ಲಿ ಸ್ಥಳೀಯ ಭಾಷೆ ಗೊತ್ತಿರಬೇಕು ಎಂಬುದನ್ನು ಉಲ್ಲೇಖಿಸಬೇಕು. ಭಾರತ ವೈವಿಧ್ಯಗಳನ್ನು ಹೊಂದಿರುವ ರಾಷ್ಟ್ರವಾಗಿರುವುದರಿಂದ ಬ್ಯಾಂಕ್‌ ಸಿಬ್ಬಂದಿಗಳಿಗೆ ಸ್ಥಳೀಯ ಭಾಷೆ ಗೊತ್ತಿರಬೇಕಾದದ್ದು ಅಗತ್ಯ ಎಂದು ಸೀತಾರಾಮನ್‌ ಪ್ರತಿಪಾದಿಸಿರುವುದಾಗಿ ‘ಹಿಂದೂ ಬಿಸಿನೆಸ್‌ ಲೈನ್‌’ ವರದಿ ಮಾಡಿದೆ.
ಬ್ಯಾಂಕ್‌ಗಳಲ್ಲಿ ಸಿಬ್ಬಂದಿ ನಡುವೆ ಗೋಡೆಗಳು ನಿರ್ಮಾಣಗೊಂಡಿವೆ. ಎಲ್ಲ ಕೆಲಸವೂ ಆನ್‌ಲೈನ್‌ನಲ್ಲೇ ನಡೆಯುತ್ತದೆ ಎಂದು ಪರಸ್ಪರ ಮಾತನಾಡುವುದು ಕಡಿಮೆಯಾಗುತ್ತಿದೆ. ಸಿಬ್ಬಂದಿಗಳು ಗ್ರಾಹಕರ ಹಿತದೃಷ್ಟಿಯಿಂದ ಮಾತನಾಡಬೇಕು ಎಂದು ಸೀತಾರಾಮನ್‌ ತಿಳಿಸಿದ್ದಾರೆ.
ನಿರ್ಮಲಾ ಸೀತಾರಾಮನ್ ತಾವು ದಕ್ಷಿಣ ಭಾರತದವರು ಎಂದು ಹೇಳಿದರು, ಹಿಂದಿ ಕಲಿಯಲು ಪ್ರಯತ್ನಿಸುತ್ತಿರುವುದಾಗಿ ಹೇಳಿದರು.
“ನನ್ನ ಕರ್ಮಭೂಮಿ [ಕೆಲಸದ ಸ್ಥಳ]ಯಲ್ಲಿ ಇರುವಲ್ಲಿ , ನಾನು ಅಲ್ಲಿನ ಭಾಷೆಯನ್ನು ಕಲಿಯಬೇಕು” ಎಂದು ಅವರು ಹೇಳಿದರು. ಮತ್ತು ಪ್ರದೇಶದ ಭಾಷೆಯನ್ನು ಮಾತನಾಡಲು ಸಾಧ್ಯವಾಗದ ಅಧಿಕಾರಿಗಳನ್ನು ಆ ಸ್ಥಾನಕ್ಕೆ ನಿಯೋಸಬಾರದು ಎಂದು ಸಲಹೆ ನೀಡಿದರು. ಗ್ರಾಹಕರಿಗೆ ತಮ್ಮ ಅನುಕೂಲಕ್ಕಾಗಿ ಧನಾತ್ಮಕತೆಯ ಶಕ್ತಿಯನ್ನು ಪ್ರೋತ್ಸಾಹಿಸುವಂತೆ ಬ್ಯಾಂಕುಗಳಿಗೆ ಕೇಳಿಕೊಂಡರು. .

ಪ್ರಮುಖ ಸುದ್ದಿ :-   ಶಿಂಧೆ ಬಣದ ಶಿವಸೇನೆ ಸೇರಿದ ಬಾಲಿವುಡ್‌ ನಟ ಗೋವಿಂದ : 14 ವರ್ಷಗಳ ವನವಾಸದ ನಂತರ ರಾಜಕೀಯಕ್ಕೆ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement