ಕಲ್ಯಾಣ ಕರ್ನಾಟಕ ಅಮೃತ ಮಹೋತ್ಸವಕ್ಕೆ ಕಲಬುರಗಿಗೆ ಆಗಮಿಸಿದ ಸಿಎಂಗೆ ಕಪ್ಪು ಬಟ್ಟೆ ಪ್ರದರ್ಶನ

ಕಲಬುರಗಿ: ಕಲ್ಯಾಣ ಕರ್ನಾಟಕ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಲಬುರಗಿ ನಗರಕ್ಕೆ ಆಗಮಿಸಿದ್ದಾರೆ. ಈ ವೇಳೆ ಪ್ರತಿಭಟನಾಕಾರರ ಗುಂಪೊಂದು ಮುಖ್ಯಮಂತ್ರಿಗಳಿಗೆ ಕಪ್ಪು ಬಟ್ಟೆ ಪ್ರದರ್ಶಿಸಿದೆ.
ವಿಶೇಷ ವಿಮಾನದ ಮೂಲಕ ಬೆಂಗಳೂರಿನಿಂದ ಕಲಬುರಗಿಯ ಸರಡಗಿ ವಿಮಾನ ನಿಲ್ದಾಣಕ್ಕೆ ಬಂದಿಳಿದ ಮುಖ್ಯಮಂತ್ರಿ ಬೊಮ್ಮಾಯಿ, ಎಸ್.ವಿ.ಪಿ ವೃತ್ತಕ್ಕೆ ತೆರಳಿ ಹೈ.ಕ ವಿಮೋಚನೆ ರೂವಾರಿ ಉಕ್ಕಿನ ಮನುಷ್ಯ ಸರ್ದಾರ ವಲ್ಲಭಭಾಯಿ ಪಟೇಲ್ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಕಲ್ಯಾಣ ಕರ್ನಾಟಕ ಉತ್ಸವಕ್ಕೆ ಚಾಲನೆ ನೀಡಿದರು.

ಇದೇ ವೇಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ತಳವಾರ ಸಮುದಾಯದವರು ಕಪ್ಪು ಪಟ್ಟಿ ಪ್ರದರ್ಶನ ಮಾಡಿದರು. ತಳವಾರ ಸಮುದಾಯವನ್ನು ಎಸ್ಟಿಗೆ ಸೇರ್ಪಡೆ ಮಾಡುವಂತೆ ಆಗ್ರಹಿಸಿ ಮುಖ್ಯಮಂತ್ರಿ ಅವರಿಗೆ ಕಪ್ಪು ಪಟ್ಟಿ ಪ್ರದರ್ಶನ ಮಾಡಿದರು. ತಕ್ಷಣ ಸ್ಥಳದಲ್ಲಿದ್ದ ಪೊಲೀಸರು ಅವರನ್ನು ವಶಕ್ಕೆ ಪಡೆದು ಕರೆದೊಯ್ದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪರೇಡ್ ಮೈದಾನದಲ್ಲಿ ಕಲ್ಯಾಣ‌ ಕರ್ನಾಟಕ ಅಮೃತ ಮಹೋತ್ಸವ ಹಿನ್ನೆಲೆ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು.
ಕೇಂದ್ರ ರಾಸಾಯನಿಕ, ರಸಗೊಬ್ಬರ ಹಾಗೂ ಕೇಂದ್ರದ ರಾಜ್ಯ ಖಾತೆ ಸಚಿವ‌ ಭಗವಂತ ಖೂಬಾ, ಗೃಹ ಸಚಿವ ಆರಗ ಜ್ಞಾನೇಂದ್ರ, ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಡಾ. ಮುರುಗೇಶ ಆರ್. ನಿರಾಣಿ, ತೋಟಗಾರಿಕೆ ಸಚಿವ ಮುನಿರತ್ನ ಸಾಥ್ ನೀಡಿದರು.

ಪ್ರಮುಖ ಸುದ್ದಿ :-   ಪ್ರಜ್ವಲ್‌ ಪೆನ್ ಡ್ರೈವ್ ಪ್ರಕರಣ : ಡಿಕೆ ಶಿವಕುಮಾರ ವಿರುದ್ಧ ಪೋಸ್ಟರ್‌ ಸಮರ

3.5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement