ಬಿಡಿಎ ವಸತಿ ಯೋಜನೆಯಲ್ಲಿ ಭ್ರಷ್ಟಾಚಾರ ಆರೋಪ ಪ್ರಕರಣ: ಯಡಿಯೂರಪ್ಪ, ಇತರರ ವಿರುದ್ಧ ಎಫ್‌ಐಆರ್‌ ದಾಖಲು ದಾಖಲು

ಬೆಂಗಳೂರು: ಬಿಡಿಎ ವಸತಿ ಯೋಜನೆಯ ಗುತ್ತಿಗೆ ನೀಡುವ ಸಲುವಾಗಿ ಲಂಚ ಪಡೆದಿದ್ದಾರೆ ಎಂಬ ಆರೋಪದ ಸಂಬಂಧ ವಿಶೇಷ ನ್ಯಾಯಾಲಯದ ಆದೇಶದ ಮೇಲೆ ಬೆಂಗಳೂರು ನಗರ ಲೋಕಾಯುಕ್ತ ಠಾಣೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯರಪ್ಪ ಅವರ ಮೇಲೆ ಎಫ್‍ಐಆರ್ ದಾಖಲಾಗಿದೆ.
ವಿಶೇಷ ನ್ಯಾಯಾಲಯವು ದೂರಿನ ಸಂಬಂಧ ಲೋಕಾಯುಕ್ತ ಪೊಲೀಸರಿಗೆ ತನಿಖೆ ನಡೆಸುವಂತೆ ಆದೇಶ ನೀಡಿತ್ತು. ಲೋಕಾಯುಕ್ತ ಪೊಲೀಸರು ಬಿ.ಎಸ್.ಯಡಿಯೂರಪ್ಪ, ಬಿ.ವೈ.ವಿಜಯೇಂದ್ರ, ಶಶಿಧರ ಮರಡಿ, ಸಂಜಯ್, ಚಂದ್ರಕಾಂತ್, ರಾಮಲಿಂಗಂ, ಸಹಕಾರ ಸಚಿವ ಎಸ್.ಟಿ.ಸೋಮಶೇಖರ, ಜಿ.ಸಿ.ಪ್ರಕಾಶ, ಕೆ.ರವಿ, ವಿರೂಪಾಕ್ಷಪ್ಪ ಯಮಕನಮರಡಿ ಅವರ ಮೇಲೆ ಪಿಸಿ ಆ್ಯಕ್ಟ್ 7,8,9,10,13ಮತ್ತು ಐಪಿಸಿ ಸೆಕ್ಷನ್ 383,384,415,420, ಸೆಕ್ಷನ್ 34 ಹಾಗೂ 120ಬಿ ಅಡಿಯಲ್ಲಿ ಎಫ್‍ಐಆರ್ ದಾಖಲು ಮಾಡಲಾಗಿದೆ. ಎಫ್‌ಐಆರ್‌ ದಾಖಲಾದ ಹಿನ್ನೆಲೆಯಲ್ಲಿ ಪೊಲೀಸರಿಂದ ತನಿಖೆ ಶುರುವಾಗಲಿದೆ.
ಸಾಮಾಜಿಕ ಕಾರ್ಯಕರ್ತ ಟಿ.ಜೆ.ಅಬ್ರಹಾಂ ಅವರು ರಾಮಲಿಂಗಂ ಕನ್ಸ್‍ಟ್ರಕ್ಷನ್ ಕಂಪೆನಿಗೆ ಬಿಡಿಎಯಿಂದ ವಸತಿ ಯೋಜನೆಗೆ ಸಂಬಂಸಿದಂತೆ ಅನುಮತಿ ನೀಡುವಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ವಿಶೇಷ ನ್ಯಾಯಾಲಯಕ್ಕೆ ದೂರು ದಾಖಲಿಸಿದ್ದರು.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement