ಬೆಂಗಳೂರಿನಲ್ಲಿ ಸ್ಥಗಿತಗೊಳಿಸಿದ ಟೋಯಿಂಗ್ ವ್ಯವಸ್ಥೆ ಪುನಃ ಜಾರಿ ಇಲ್ಲ: ಗೃಹ ಸಚಿವ ಆರಗ ಜ್ಞಾನೇಂದ್ರ

ಬೆಂಗಳೂರು : ಬೆಂಗಳೂರು ನಗರದಲ್ಲಿ ಸ್ಥಗಿತಗೊಳಿಸಲಾಗಿರುವ ಟೋಯಿಂಗ್ ವ್ಯವಸ್ಥೆಯನ್ನು ಪುನಃ ಜಾರಿ ಮಾಡುವ ಯಾವುದೇ ಪ್ರಸ್ತಾವನೆ ಸದ್ಯಕ್ಕೆ ಸರ್ಕಾರದ ಮುಂದಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.
ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಸಚಿವರು, ನಗರದಲ್ಲಿ ಸಾರ್ವಜನಿಕ ಸ್ನೇಹಿ ಮತ್ತು ಸುಗಮ ವಾಹನ ಪಾರ್ಕಿಂಗ್ ವ್ಯವಸ್ಥೆ ಜಾರಿಗೊಳಿಸುವ ಬಗ್ಗೆ ವಿಸ್ತೃತವಾದ ಚರ್ಚೆ ಹಾಗೂ ತಜ್ಞರ ಸಲಹೆ ಪಡೆದ ತೀರ್ಮಾನ ಕೈಗೊಳ್ಳಲಾಗುತ್ತದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೂ ಈ ಬಗ್ಗೆ ಚರ್ಚೆ ನಡೆಸಿದ್ದು, ಟೋಯಿಂಗ್ ಬಗ್ಗೆ ಯಾವುದೇ ಅಂತಿಮ ತೀರ್ಮಾನವಾಗಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಸಾರ್ವಜನಿಕರಿಂದ ಟೋಯಿಂಗ್ ವ್ಯವಸ್ಥೆ ಬಗ್ಗೆ ಇದ್ದ ಜನಾಕ್ರೋಶ ಹಾಗೂ ಕಿರುಕುಳಗಳ ಬಗ್ಗೆ ಬಂದ ದೂರುಗಳ ಹಿನ್ನೆಲೆಯಲ್ಲಿ ಸ್ಥಗಿತಗೊಳಿಸಲಾಗಿತ್ತು ಎಂದು ನೆನಪಿಸಿದ ಸಚಿವರು, ಹಳೆಯ ವ್ಯವಸ್ಥೆಯನ್ನು ಪುನಃ ಜಾರಿಗೊಳಿಸುವ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ ಎಂದು ತಿಳಿಸಿದ್ದಾರೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement