ರಾಜ್ಯ ಸರ್ಕಾರಿ ನೌಕರರಿಗೆ ವಿಮಾ ಮೊತ್ತದ ಮೇಲಿನ ಬೋನಸ್ ಘೋಷಣೆ ಮಾಡಿದ ರಾಜ್ಯ ಸರ್ಕಾರ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ಎಲ್ಲ ಪಾಲಿಸಿಗಳಿಗೆ ವಿಮಾ ಮೊತ್ತದ ಮೇಲೆ ಬೋನಸ್ ಘೋಷಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯ ಸರ್ಕಾರಿ ನೌಕರರಿಗೆ ದಸರಾ ಹಬ್ಬಕ್ಕೆ ಸಿಹಿಸುದ್ದಿ ನೀಡಿದೆ. ವರ್ಷಕ್ಕೆ ಪ್ರತಿ ಸಾವಿರ ರೂಪಾಯಿಗಳಿಗೆ 85 ರೂ.ಗಳಂತೆ ಲಾಭಾಂಶ ನೀಡಿ ಆದೇಶಿಸಿದೆ.
ಈ ಬಗ್ಗೆ ಆರ್ಥಿಕ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿಗಳಿಂದ ನಡಾವಳಿಗಳನ್ನು ಹೊರಡಿಸಿದ್ದಾರೆ. ಈ ಆದೇಶದಂತೆ ಕರ್ನಾಟಕ ಸರ್ಕಾರಿ ವಿಮಾ ಇಲಾಖೆಯ ಕಡ್ಡಾಯ ಜೀವ ವಿಮಾ ಯೋಜನೆಯಡಿ ದಿನಾಂಕ 01-04-2016 ರಿಂದ 31-03-2018ಕ್ಕೆ ಅಂತ್ಯಗೊಂಡ ದ್ವೈವಾರ್ಷಿಕ ಅವಧಿಗೆ ವಿಮಾ ಮೌಲ್ಯಮಾಪನ ವರದಿಯ ಆಧಾರದ ಮೇಲೆ ಜೀವ ವಿಮಾ ಪಾಲಿಸಿಗಳ ಸ್ಥಿರಪಡಿಸಿದ ಮೊತ್ತದ ಮೇಲೆ ಬೋನಸ್ ನೀಡಿ ಸರ್ಕಾರ ಮಂಜೂರಿ ನೀಡಿದೆ ಎಂದು ಹೇಳಿದ್ದಾರೆ.
ಇನ್ನೂ ಕರ್ನಾಟಕ ಸರ್ಕಾರಿ ವಿಮಾ ಇಲಾಖೆಯು ನಿರ್ವಹಿಸುತ್ತಿರುವ ಕಡ್ಡಾಯ ಜೀವ ವಿಮಾ ಯೋಜನೆಗ ಸಂಬಂಧಿಸಿದಂತೆ 2016-18ರ ದ್ವೈವಾರ್ಷಿಕ ಅವಧಿಗೆ ವಿಮಾ ಮೌಲ್ಯಮಾಪನ ವರದಿ ಆಧರಿಸಿ ಬೋನಸ್ ನೀಡಲು ಸರ್ಕಾರದ ಮಂಜೂರಾತಿ ನೀಡಿದೆ.
ದಿನಾಂಕ 01-04-2016ರಿಂದ 31-03-2018ರ ದ್ವೈವಾರ್ಷಿಕ ಅವಧಿಯಲ್ಲಿ ಚಾಲ್ತಿಯಲ್ಲಿದ್ದ ಎಲ್ಲಾ ಪಾಲಿಸಿಗಳಿಗೆ ವಿಮಾ ಮೊತ್ತದ ಮೇಲೆ ಪ್ರತಿ ಸಾವಿರ ರೂಪಾಯಿಗಳಿಗೆ ಪ್ರತಿ ವರ್ಷಕ್ಕೆ 85 ರಞು.ಗಳಂತೆ ಲಾಭಾಂಶ ನೀಡಿ ಆದೇಶಿಸಲಾಗಿದೆ.
ಇದಲ್ಲದೇ ಅವಧಿ ಪೂರ್ಣ, ಮರಣಜನ್ಯ ಹಾಗೂ ವಿಮಾ ತ್ಯಾಗ ಮೌಲ್ಯಗಳಿಂದ ದಿನಾಂಕ 01-04-2018 ರಿಂದ 31-03-2020ರ ಅವಧಿಯಲ್ಲಿ ಹೊರ ಹೋಗಿರುವ ವಿಮಾ ಪಾಲಿಸಿಗಳಿಗೆ ಪ್ರತಿ ಸಾವಿರ ರೂಪಾಯಿಗಳಿಗೆ ಪ್ರತಿ ವರ್ಷಕ್ಕೆ 85 ರೂ.ಗಳಂತೆ ಮಧ್ಯಂತರ ಲಾಭಾಂಶವನ್ನು ನೀಡಲಾಗಿದೆ.

ಪ್ರಮುಖ ಸುದ್ದಿ :-   ಮತಗಟ್ಟೆ ಬಳಿ ಮಹಿಳೆಗೆ ಹೃದಯಾಘಾತ ; ತಕ್ಷಣವೇ ಸಿಪಿಆರ್‌ ಮಾಡಿ ಜೀವ ಉಳಿಸಿದ ಮತದಾನ ಮಾಡಲು ಬಂದಿದ್ದ ವೈದ್ಯ

3.5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement