ಪರಿಸರ ಸೂಕ್ಷ್ಮ ಪ್ರದೇಶದಲ್ಲಿ ಕಾಮಗಾರಿ: ಕೇರಳದ ಬೇಡಿಕೆಗೆ ಒಪ್ಪದ ಕರ್ನಾಟಕ

posted in: ರಾಜ್ಯ | 0

ಬೆಂಗಳೂರು: ರಾಜ್ಯದ ಪರಿಸರ ಸೂಕ್ಷ್ಮ ಪ್ರದೇಶಗಳಲ್ಲಿ, ವನ್ಯಜೀವಿಧಾಮಗಳಲ್ಲಿ ಕಾಮಗಾರಿಗಳನ್ನು ಕೈಗೊಳ್ಳಲು ಸಾಧ್ಯವಿಲ್ಲ ಎಂದು ಕೇರಳ ಸರ್ಕಾರಕ್ಕೆ ರಾಜ್ಯ ಸರ್ಕಾರ ತಿಳಿಸಿದೆ.
ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಭೇಟಿ ಬಳಿಕ ಈ ಬಗ್ಗೆ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಇತ್ತೀಚೆಗೆ ನಡೆದ ದಕ್ಷಿಣ ವಲಯ ಪರಿಷತ್ತಿನ ಸಭೆಯಲ್ಲಿ ತೀರ್ಮಾನಿಸಿದಂತೆ ದ್ವಿಪಕ್ಷೀಯ ಮಾತುಕತೆ ನಡೆಸಲು ಪಿಣರಾಯಿ ವಿಜಯನ್ ಬಂದಿದ್ದರು ಎಂದು ತಿಳಿಸಿದರು.
ಕಾಞಂಗಾಡ್-ಕಾಣಿಯೂರು ರೈಲು ಮಾರ್ಗ ಸೇರಿದಂತೆ ವಿವಿಧ ರೈಲ್ವೆ ಮತ್ತು ಹೆದ್ದಾರಿ ಯೋಜನೆಗಳಿಗೆ ಸಹಮತಿ ನೀಡುವಂತೆ ಕೇರಳ ಸರ್ಕಾರ ಕೋರಿಕೆ ಸಲ್ಲಿಸಿತ್ತು. ಪ್ರಸ್ತಾಪಿತ ಕಾಞಂಗಾಡ್-ಕಾಣಿಯೂರು ರೈಲು ಮಾರ್ಗವು ಕೇರಳದಲ್ಲಿ 40 ಕಿ.ಮೀ. ಹಾಗೂ ಕರ್ನಾಟಕದಲ್ಲಿ 31 ಕಿ.ಮೀ. ಮಾರ್ಗ ಹೊಂದಿದ್ದು, ರಾಜ್ಯಕ್ಕೆ ಇದರಿಂದ ಹೆಚ್ಚಿನ ಅನುಕೂಲಗಳಿಲ್ಲ. ಅಲ್ಲದೆ, ಪಶ್ಚಿಮ ಘಟ್ಟದ ಜೀವ ವೈವಿಧ್ಯ ಸೂಕ್ಷ್ಮ ಪ್ರದೇಶದಲ್ಲಿ ಈ ರೈಲು ಮಾರ್ಗ ಹಾದು ಹೋಗುವ ಕಾರಣ ಒಪ್ಪಿಗೆ ನೀಡಲು ಸಾಧ್ಯವಿಲ್ಲ ಎಂದು ತಿಳಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು.

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189

ಹಳೆಯ ಯೋಜನೆಯಾದ ತಲಚೇರಿ- ಮೈಸೂರು ರೈಲು ಯೋಜನೆಯನ್ನೂ ಪಿಣರಾಯಿ ವಿಜಯನ್‌ ಪ್ರಸ್ತಾಪಿಸಿದರು. ಈ ರೈಲು ಮಾರ್ಗವು ಬಂಡಿಪುರ-ನಾಗರಹೊಳೆ ರಾಷ್ಟ್ರೀಯ ಉದ್ಯಾನದ ಮಧ್ಯಭಾಗದಲ್ಲಿ ಹಾದುಹೋಗುವುದರಿಂದ ಅಲ್ಲಿನ ವನ್ಯಜೀವಿಗಳಿಗೆ ಹಾನಿಯಾಗಲಿದೆ. ಹೀಗಾಗಿ, ಇದಕ್ಕೂ ಸಮ್ಮತಿಸಲು ಸಾಧ್ಯವಿಲ್ಲ ಎಂದಾಗ, ಭೂಗತ ರೈಲು ಮಾರ್ಗ ನಿರ್ಮಿಸುವ ಕುರಿತು ಕೇರಳ ಸರ್ಕಾರ ಪ್ರಸ್ತಾಪಿಸಿದೆ. ಆದರೆ, ಇದರಿಂದಲೂ ನಿರ್ಮಾಣ ಚಟುವಟಿಕೆ ಸಂದರ್ಭದಲ್ಲಿ ಪರಿಸರಕ್ಕೆ ಹಾನಿಯಾಗಲಿದೆ. ಆದ್ದರಿಂದ ಅದಕ್ಕೂ ಸಮ್ಮತಿಸುವುದಿಲ್ಲ ಎಂದು ತಿಳಿಸಲಾಗಿದೆ ಎಂದರು.
ಅಲ್ಲದೆ. ಕೇರಳಕ್ಕೆ ಬಂಡಿಪುರ ರಾಷ್ಟ್ರೀಯ ಉದ್ಯಾನದ ಮೂಲಕ ರಾತ್ರಿ ವೇಳೆ ಎರಡು ಬಸ್‌ಗಳು ಸಂಚರಿಸುತ್ತಿವೆ. ನಾಲ್ಕು ಬಸ್‌ಗಳಿಗೆ ಅನುಮತಿ ನೀಡುವಂತೆ ಕೋರಲಾಗಿತ್ತು. ಅದಕ್ಕೂ ಸರ್ಕಾರ ಒಪ್ಪಿಗೆ ನೀಡಿಲ್ಲ ಎಂದೂ ಬೊಮ್ಮಾಯಿ ಮಾಹಿತಿ ನೀಡಿದರು.

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ಟೆಲಿಗ್ರಾಮ್ ಚಾನೆಲ್ ಸೇರಿ
ವಾಟ್ಸಾಪ್ ಗ್ರೂಪ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ಓದಿರಿ :-   ತೆಲಂಗಾಣ ಸಿಎಂರಿಂದ ನಾಳೆ ರಾಷ್ಟ್ರೀಯ ಪಕ್ಷ ಘೋಷಣೆ : ಶಾಸಕರ ಜೊತೆ ಹೈದರಾಬಾದ್ ತೆರಳಿದ ಹೆಚ್​ಡಿಕೆ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

1 / 5. ಒಟ್ಟು ವೋಟುಗಳು 3

ನಿಮ್ಮ ಕಾಮೆಂಟ್ ಬರೆಯಿರಿ

advertisement