ಕುಮಟಾ: ಸರ್ಕಾರಿ ಪ್ರಾಥಮಿಕ ಶಾಲಾ ಗ್ರೇಡ್ 2 ದೈಹಿಕ ಶಿಕ್ಷಣ ಶಿಕ್ಷಕರ ಸಂಘಟನೆ ರಾಜ್ಯಾಧ್ಯಕ್ಷರಾಗಿ ರವೀಂದ್ರ ಭಟ್ಟ ಸೂರಿ ಆಯ್ಕೆ

ಕುಮಟಾ: ಬೆಂಗಳೂರಿನಲ್ಲಿ ನಡೆದ ಸಭೆಯಲ್ಲಿ ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲಾ ಗ್ರೇಡ್ 2 ದೈಹಿಕ ಶಿಕ್ಷಣ ಶಿಕ್ಷಕರ ಸಂಘಟನೆ ರಚನೆಯಾಗಿದ್ದು ರಾಜ್ಯಾಧ್ಯಕ್ಷರಾಗಿ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಹೊಲನಗದ್ದೆ ಪ್ರಾಥಮಿಕ ಶಾಲೆಯ ದೈಹಿಕ  ಶಿಕ್ಷಣ ಶಿಕ್ಷಕ ರವೀಂದ್ರ ಭಟ್ಟ ಸೂರಿ ಒಮ್ಮತದ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದಾರೆ.
ಇಂದು, ಭಾನುವಾರ ಬೆಂಗಳೂರಿನ ಐಸಾಕ್ ನ್ಯೂಟನ್ ಹೈಸ್ಕೂಲ್ ಸಭಾಂಗಣದಲ್ಲಿ ರಾಜ್ಯದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸರ್ಕಾರಿ ಪ್ರಾಥಮಿಕ ಶಾಲಾ ಗ್ರೇಡ್-2 ದೈಹಿಕ ಶಿಕ್ಷಣ ಶಿಕ್ಷಕರ ಸಭೆಯಲ್ಲಿ 26 ಜಿಲ್ಲೆಗಳ ಪ್ರತಿನಿಧಿಗಳು ತಮ್ಮ ಅಭಿಪ್ರಾಯ ಹಂಚಿಕೊಂಡರು. ಅಂತಿಮವಾಗಿ ರಾಜ್ಯದ ಎಲ್ಲಾ ಸರ್ಕಾರಿ ಪ್ರಾಥಮಿಕ ಶಾಲಾ ದೈಹಿಕ ಶಿಕ್ಷಣ ಶಿಕ್ಷಕರು ಕರ್ನಾಟಕ ರಾಜ್ಯ ಸರ್ಕಾರಿ ಪ್ರಾಥಮಿಕ ಶಾಲಾ ಗ್ರೇಡ್-2 ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಡಿಯಲ್ಲಿ ಒಂದು ಸಂಘಟನೆಯಾಗಿ ಮುನ್ನಡೆಯಲು ಒಮ್ಮತದ ನಿರ್ಧಾರ ಕೈಗೊಳ್ಳಲಾಯಿತು.

ಸಂಘಟನೆಯ ರಾಜ್ಯಾಧ್ಯಕ್ಷರನ್ನಾಗಿ ರವೀಂದ್ರ ಭಟ್ಟ ಸೂರಿಯವರನ್ನು ಸರ್ವಾನುಮತದಿಂದ ಆಯ್ಕೆಮಾಡಲಾಯಿತು. ಎರಡೂ ಸಂಘಗಳೂ ಒಂದುಗೂಡುವ ನಿರ್ಧಾರದ ನಂತರ ಗ್ರೇಡ್-2 ಸಂಘದ ಸಂಸ್ಥಾಪಕ ಲೋಕೇಶಪ್ಪ ಅವರು ದೂರವಾಣಿಯಲ್ಲಿ ತಮ್ಮ ಬೆಂಬಲ ಸೂಚಿಸಿದರು.
ಸಭೆಯಲ್ಲಿ ಗ್ರೇಡ್-2 ಸಂಘದ ಅಧ್ಯಕ್ಷರು ಪದಾಧಿಕಾರಿಗಳು, ದೈಹಿಕ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿಗಳು ಪದಾಧಿಕಾರಿಗಳು, ವಿವಿಧ ಜಿಲ್ಲಾಧ್ಯಕ್ಷರು, ಪದಾಧಿಕಾರಿಗಳು ಹಾಗೂ ಗ್ರೇಡ್- 1 ಸಂಘದ ಪ್ರಧಾನ ಕಾರ್ಯದರ್ಶಿ ಶ್ರೀಕಂಠಸ್ವಾಮಿ ಉಪಸ್ಥಿತರಿದ್ದರು.
ಗ್ರೇಡ್- 2 ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಯೋಗೇಶ ಕೊಂಡಾಪುರ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಗ್ರೇಡ್-2 ಸಂಘದ ಕಲಬುರ್ಗಿ ಜಿಲ್ಲಾ ಕಾರ್ಯದರ್ಶಿ ಪ್ರಭು ಮಾಚನೂರ ವಂದಿಸಿದರು. ದೈಹಿಕ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ಪ್ರಮಿಳಾ ನಿರ್ವಹಿಸಿದರು.

ಪ್ರಮುಖ ಸುದ್ದಿ :-   ಹುಬ್ಬಳ್ಳಿ : ಕಾಲೇಜ್‌ ಕ್ಯಾಂಪಸ್‌ ನಲ್ಲೇ ಚಾಕುವಿನಿಂದ ಇರಿದು ಕಾರ್ಪೊರೇಟರ್ ಪುತ್ರಿಯ ಹತ್ಯೆ ; ಯುವಕನ ಬಂಧನ

3.5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement