ಹುಬ್ಬಳ್ಳಿ-ಧಾರವಾಡ ಪಾಲಿಕೆಯಿಂದ 26ರಂದು ಸೆಪ್ಟೆಂಬರ್‌ 26ರಂದು ರಾಷ್ಟ್ರಪತಿ ದ್ರೌಪದಿ ಮುರ್ಮುಗೆ ಪೌರ ಸನ್ಮಾನ

ಹುಬ್ಬಳ್ಳಿ:  ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವತಿಯಿಂದ ಸೆಪ್ಟೆಂಬರ್‌ 26ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಹಮ್ಮಿಕೊಂಡಿರುವ ಪೌರ ಸನ್ಮಾನ ಸಮಾರಂಭಕ್ಕೆ ಐದು ಸಾವಿರ ಜನರನ್ನು ಆಹ್ವಾನ ನೀಡಲಾಗುವುದು ಎಂದು ಪಾಲಿಕೆಯ ಮೇಯರ್ ಈರೇಶ ಅಂಚಟಗೇರಿ ಹೇಳಿದರು.
ದೇಶಪಾಂಡೆ ನಗರದ ಕರ್ನಾಟಕ ಜಿಮ್‌ಖಾನಾ ಮೈದಾನದಲ್ಲಿ ಸಮಾರಂಭ ಏರ್ಪಡಿಸಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ರಾಜ್ಯ ಸಚಿವರಾದ ಹಾಲಪ್ಪ ಆಚಾರ, ಶಂಕರ ಪಾಟೀಲ ಮುನೇನಕೊಪ್ಪ, ಶಾಸಕರಾದ ಜಗದೀಶ ಶೆಟ್ಟರ, ಪ್ರಸಾದ ಅಬ್ಬಯ್ಯ, ಅರವಿಂದ ಬೆಲ್ಲದ, ಅಮೃತ ದೇಸಾಯಿ, ಕುಸುಮಾವತಿ ಶಿವಳ್ಳಿ, ಸಿ.ಎಂ. ನಿಂಬಣ್ಣವರ ಹಾಗೂ ಪಾಲಿಕೆ ಸದಸ್ಯರು ಕಾರ್ಯಕ್ರಮದಲ್ಲಿ  ಪಾಲ್ಗೊಳ್ಳಲಿದ್ದಾರೆ  ಎಂದರು.

ಹುಬ್ಬಳ್ಳಿ-ಧಾರವಾಡ ಅವಳಿ ನಗರದ ಮಾಜಿ ಸಂಸದರು, ಶಾಸಕರು, ವಿಧಾನ ಪರಿಷತ್ ಸದಸ್ಯರು, ಪಾಲಿಕೆಯ ಮಾಜಿ ಸದಸ್ಯರು, ಸಂಘ-ಸಂಸ್ಥೆಗಳ ಪ್ರತಿನಿಧಿಗಳು ಸೇರಿ ಐದು ಸಾವಿರ ಮಂದಿಗೆ ಸಮಾರಂಭಕ್ಕೆ ಆಹ್ವಾನ ನೀಡಲಾಗುವುದು. ಜೊತೆಗೆ, 500 ಪೌರ ಕಾರ್ಮಿಕರಿಗೂ ಸಮಾರಂಭದಲ್ಲಿ ಪಾಲ್ಗೊಳ್ಳಲು ಅವಕಾಶ ನೀಡಲಾಗುವುದು’ ಎಂದು ಮೇಯರ್‌ ಅಂಚಟಗೇರಿ ತಿಳಿಸಿದರು.

ಪ್ರಮುಖ ಸುದ್ದಿ :-   ಪೋಕ್ಸೋ ಪ್ರಕರಣ : ಮುರುಘಾ ಶರಣರ ಜಾಮೀನು ರದ್ದುಗೊಳಿಸಿದ ಸುಪ್ರೀಂಕೋರ್ಟ್

ಕಾರ್ಯಕ್ರಮವು ಬೆಳಿಗ್ಗೆ 11ಕ್ಕೆ ಶುರುವಾಗಲಿದೆ. ಇಲ್ಲಿನ ಕಾರ್ಯಕ್ರಮ ಮುಗಿದ ನಂತರ ರಾಷ್ಟ್ರಪತಿ ಅವರು ಧಾರವಾಡದ ಐಐಐಟಿಗೆ ಕ್ಯಾಂಪಸ್‌ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಪೌರ ಸನ್ಮಾನದ ನೆನೆಪಿನ ಕಾಣಿಕೆಯಾಗಿ ಸಿದ್ಧಾರೂಢ ಸ್ವಾಮೀಜಿಯ ಬೆಳ್ಳಿ ಮೂರ್ತಿಯನ್ನು ರಾಷ್ಟ್ರಪತಿಯವರಿಗೆ ನೀಡಲಾಗುವುದು. ದ್ರೌ ಅವರು ಅವಳಿನಗರಕ್ಕೆ ಭೇಟಿ ನೀಡುತ್ತಿರುವ ಮೂರನೇ ರಾಷ್ಟ್ರಪತಿಯಾಗಿದ್ದಾರೆ. ಹಿಂದೆ, ಧಾರವಾಡಕ್ಕೆ ಸರ್ವಪಲ್ಲಿ ರಾಧಾಕೃಷ್ಣನ್ ಹಾಗೂ ಹುಬ್ಬಳ್ಳಿಗೆ ಎ.ಪಿ.ಜೆ. ಅಬ್ದುಲ್ ಕಲಾಂ ಭೇಟಿ ನೀಡಿದ್ದರು. ಈ ಪೈಕಿ, ಪೌರ ಸನ್ಮಾನ ಸ್ವೀಕರಿಸುತ್ತಿರುವ ಮೊದಲ ರಾಷ್ಟ್ರಪತಿ ದ್ರೌಪದಿ ಮುರ್ಮು ಆಗಿದ್ದಾರೆ ಎಂದು ಹೇಳಿದರು.
ಸಮಾರಂಭ ನಡೆಯಲಿರುವ ಮೈದಾನದಲ್ಲಿ ತಯಾರಿ ಆರಂಭಿಸಲಾಗಿದೆ. ವಾಹನಗಳ ನಿಲುಗಡೆಗೆ ಕಿಮ್ಸ್ ಮೈದಾನ, ಸುತ್ತಮುತ್ತಲಿನ ಶಾಲೆಗಳ ಮೈದಾನ ಸೇರಿದಂತೆ ವಿವಿಧ ಸ್ಥಳಗಳನ್ನು ಗುರುತಿಸಲಾಗಿದೆ ಎಂದು ತಿಳಿಸಿದರು.
ಉಪ ಮೇಯರ್ ಉಮಾ ಮುಕುಂದ, ಪಾಲಿಕೆ ವಿರೋಧ ಪಕ್ಷದ ನಾಯಕ ದೊರೈರಾಜ ಮಣಿಕುಂಟ್ಲಾ, ಸದಸ್ಯರಾದ ವೀರಣ್ಣ ಸವಡಿ, ಸಂತೋಷ ಚವ್ಹಾಣ, ಶಿವು ಮೆಣಸಿನಕಾಯಿ, ಶಿವು ಹಿರೇಮಠ, ಮೊದಲಾದವರು ಇದ್ದರು.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement