ಡಿಸೆಂಬರ್ ವೇಳೆಗೆ ಶಾಲೆಗಳಲ್ಲಿ ಪಠ್ಯದಲ್ಲಿ ನೈತಿಕ ಶಿಕ್ಷಣ-ಭಗವದ್ಗೀತೆ ಬೋಧನೆ: ಸಚಿವ ನಾಗೇಶ

ಬೆಂಗಳೂರು: ಪ್ರಸಕ್ತ ಸಾಲಿನಲ್ಲೇ ನೈತಿಕ ಶಿಕ್ಷಣ ಜಾರಿಗೊಳಿಸಲು ಸರ್ಕಾರ ಉದ್ದೇಶಿಸಿದ್ದು, ಇದರಲ್ಲಿ ಭಗವದ್ಗೀತೆಯ ಅಂಶಗಳೂ ಅಡಕವಾಗಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ ತಿಳಿಸಿದ್ದಾರೆ. ಸೋಮವಾರ ಪ್ರಶ್ನೋತ್ತರ ವೇಳೆ ಬಿಜೆಪಿಯ ಎಂ.ಕೆ. ಪ್ರಾಣೇಶ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ನೈತಿಕ ಶಿಕ್ಷಣದಲ್ಲಿ ಏನೇನು ಇರಬೇಕು ಎಂಬುದರ ಬಗ್ಗೆ ತಜ್ಞರ ಸಮಿತಿ ಶಿಫಾರಸು … Continued

ಹಿಂದೂ ಸಂಘಟನೆಗಳು, ಕನ್ನಡ ಸಂಘಟನೆಗಳು, ರೈತರ ಮೇಲೆ ದಾಖಲಾದ ಕ್ರಿಮಿನಲ್‌ ಪ್ರಕರಣ ಹಿಂಪಡೆಯಲು ರಾಜ್ಯ ಸಂಪುಟ ಸಭೆಯಲ್ಲಿ ನಿರ್ಧಾರ

ಬೆಂಗಳೂರು: ಮಹತ್ವದ ಬೆಳವಣಿಗೆಯಲ್ಲಿ 35 ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆಯಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಸೋಮವಾರ ನಡೆದ ಸಚಿವ ಸಂಪುಟದ ಸಭೆಯಲ್ಲಿ ಸಂಪುಟ ಉಪಸಮಿತಿ ಶಿಫಾರಸುಗಳನ್ನು ಆಧರಿಸಿ ಬಿಜೆಪಿ ಕಾರ್ಯಕರ್ತರು, ಹಿಂದೂ ಸಂಘಟನೆಗಳು ಕಾರ್ಯಕರ್ತರು, ರೈತ ಮುಖಂಡರು ಮತ್ತು ಕನ್ನಡ ಪರ ಸಂಘಟನೆಗಳ ಕಾರ್ಯಕರ್ತರ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆಯಲು ನಿರ್ಧರಿಸಲಾಯಿತು. ಆದರೆ, ಯಾವ ಯಾವ … Continued

ಪೌರ ಕಾರ್ಮಿಕರಿಗೆ ಸಿಹಿಸುದ್ದಿ : ರಾಜ್ಯದ 11,133 ಪೌರಕಾರ್ಮಿಕರನ್ನು ಸರ್ಕಾರಿ ನೌಕರರೆಂದು ನೇಮಕ ಮಾಡಿಕೊಳ್ಳಲು ಸಚಿವ ಸಂಪುಟ ಒಪ್ಪಿಗೆ

ಬೆಂಗಳೂರು: ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡುದ ಬಿಪಿಎಲ್‌ (BPL) ಕಾರ್ಡ್‌ದಾರರಿಗೆ 75 ಯುನಿಟ್‌ ತನಕ ಉಚಿತ ವಿದ್ಯುತ್‌ ನೀಡಲು ರಾಜ್ಯ ಸಚಿವ ಸಂಪುಟ ಗ್ರೀನ್‌ ಸಿಗ್ನಲ್‌ ನೀಡಿದೆ. ಹಾಗೂ ರಾಜ್ಯದ ನಗರಸಭೆ, ಪುರಸಭೆ ಮತ್ತು ಇತರೆ ಸ್ಥಳೀಯ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುತ್ತಿರುವ 11,133 ಪೌರಕಾರ್ಮಿಕರನ್ನು ವಿಶೇಷ ನೇಮಕಾತಿ ಅಡಿಯಲ್ಲಿ ಸಕ್ರಮ ಮಾಡಲುಸಹ ರಾಜ್ಯ ಸಚಿವ … Continued

ಸಿಬಿಐ, ಇ.ಡಿ. ದುರ್ಬಳಕೆ ಹಿಂದೆ ಪ್ರಧಾನಿ ನರೇಂದ್ರ ಮೋದಿ ಕೈವಾಡವಿದೆ ಎಂದು ನಾನು ನಂಬುವುದಿಲ್ಲ: ಮಮತಾ ಬ್ಯಾನರ್ಜಿ

ಕೋಲ್ಕತ್ತಾ: ಜಾರಿ ನಿರ್ದೇಶನಾಲಯ ಸೇರಿದಂತೆ ಕೇಂದ್ರೀಯ ತನಿಖಾ ಏಜೆನ್ಸಿಗಳ ದುರುಪಯೋಗದ ಹಿಂದೆ ಪ್ರಧಾನಿ ನರೇಂದ್ರ ಮೋದಿ ಅವರ ಕೈವಾಡವಿದೆ ಎಂದು ನಾನು ಭಾವಿಸುವುದಿಲ್ಲ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಹೇಳಿದ್ದಾರೆ. ಪಶ್ಚಿಮ ಬಂಗಾಳ ವಿಧಾನಸಭೆಯು ಇಂದು, ಸೋಮವಾರ “ಮಿತಿಮೀರಿದ ಕೇಂದ್ರ ತನಿಖಾ ಸಂಸ್ಥೆಗಳ ಪಕ್ಷಪಾತದ” ವಿರುದ್ಧ ಮೇಲಿನ ನಿರ್ಣಯದ ಅಂಗೀಕಾರದ ಮೇಲಿನ … Continued

ಪಾಕಿಸ್ತಾನದ ಮೇಲೆ ಪರಾಕ್ರಮ ಮೆರೆದಿದ್ದ ಭಾರತದ ಯುದ್ಧ ವಿಮಾನ ಮಿಗ್ -21 ಸ್ಕ್ವಾಡ್ರನ್ ಜೆಟ್‌ ಸೇನೆಯಿಂದ ನಿವೃತ್ತಿ

ನವದೆಹಲಿ: ಪುಲ್ವಾಮಾ ದಾಳಿ ನಂತರ ಪ್ರತೀಕಾರವಾಗಿ ಪಾಕಿಸ್ತಾನದ ಬಾಲಾಕೋಟ್‌ ಮೇಲೆ ನಡೆದ ದಾಳಿಯಲ್ಲಿ ಶತ್ರು ಪಡೆಗಳ ಮೇಲೆ ಶೌರ್ಯ ಮೆರೆದಿದ್ದ ಮಾಜಿ ವಿಂಗ್ ಕಮಾಂಡರ್ ಅಭಿನಂದನ್ ವರ್ಧಮಾನ್ (ಪ್ರಸ್ತುತ ಗ್ರೂಪ್‌ ಕ್ಯಾಪ್ಟನ್‌) ಅವರು ಬಳಸಿದ್ದ ಮಿಗ್-21 ಬೈಸನ್ ಫೈಟರ್ ಜೆಟ್ ಇದೇ ಸೆಪ್ಟೆಂಬರ್ 30 ರಂದು ಭಾರತೀಯ ವಾಯುಪಡೆಯಿಂದ ನಿವೃತ್ತಿಯಾಗಲಿದೆ. ಮಿಗ್-21 ಬೈಸನ್ 1960 ದಶಕದಲ್ಲಿ … Continued

ಕೇಸರಿ ಪಕ್ಷದಲ್ಲಿ ತಮ್ಮ ಪಕ್ಷ ವಿಲೀನಗೊಳಿಸಿದ ನಂತರ ಬಿಜೆಪಿಗೆ ಸೇರ್ಪಡೆಯಾದ ಕ್ಯಾಪ್ಟನ್‌ ಅಮರಿಂದರ್ ಸಿಂಗ್

ನವದೆಹಲಿ: ಪಂಜಾಬ್‌ನ ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರು ತಮ್ಮ ಪಕ್ಷ ಪಂಜಾಬ್ ಲೋಕ ಕಾಂಗ್ರೆಸ್ (PLC) ಅನ್ನು ಬಿಜೆಪಿಯಲ್ಲಿ ವಿಲೀನಗೊಳಿಸಿದ ನಂತರ ಬಿಜೆಪಿಗೆ ಸೇರಿದ್ದಾರೆ. ಈ ವರ್ಷದ ಆರಂಭದಲ್ಲಿ ರಾಜ್ಯ ಚುನಾವಣೆಗೆ ಮುನ್ನ ಪಕ್ಷದ ಉನ್ನತ ನಾಯಕತ್ವದೊಂದಿಗಿನ ಭಿನ್ನಾಭಿಪ್ರಾಯಗಳಿಂದಾಗಿ ಪಂಜಾಬ್ ಮುಖ್ಯಮಂತ್ರಿಯಾಗಿದ್ದ ಅಮರಿಂದರ್‌ ಸಿಂಗ್‌ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಕಾಂಗ್ರೆಸ್‌ … Continued

ಕೆರೆ, ರಾಜಕಾಲುವೆ ಒತ್ತುವರಿ ತೆರವಿಗೆ ನ್ಯಾಯಾಂಗ ತನಿಖೆ: ಸಿಎಂ ಬೊಮ್ಮಾಯಿ ಘೋಷಣೆ

ಬೆಂಗಳೂರು: ಸೋಮವಾರ ವಿಧಾನಸಭೆಯಲ್ಲಿ ನಡೆದ ಅತಿವೃಷ್ಟಿ ಮೇಲಿನ ಚರ್ಚೆಗೆ ಉತ್ತರ ನೀಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮುಂದೆ ಕೆರೆ, ರಾಜಕಾಲುವೆ ಹಾಗೂ ಬಫರ್ ಝೋನ್ ಒತ್ತುವರಿ ಆಗದಂತೆ ಕ್ರಮ ಕೈಗೊಳ್ಳಲು ನ್ಯಾಯಾಂಗ ತನಿಖೆಗೆ ಆದೇಶಿಸಲಾಗುವುದು. ನ್ಯಾಯಾಂಗ ಅಧಿಕಾರಿಯ ನೇತೃತ್ವದಲ್ಲಿ ತಾಂತ್ರಿಕ ಸದಸ್ಯರೊಂದಿಗೆ ತನಿಖಾ ಆಯೋಗ ರಚನೆ ಮಾಡಲಾಗುವುದು ಎಂದು ತಿಳಿಸಿದರು. ಕೆರೆ, ರಾಜಕಾಲುವೆ ಒತ್ತುವರಿ ತೆರವು … Continued

ಮಾಜಿ ಪ್ರಧಾನಿ ದೇವೇಗೌಡರನ್ನು ಭೇಟಿ ‌ಮಾಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ

ಬೆಂಗಳೂರು: ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು. ಸೋಮವಾರ ವಿಧಾನಸಭೆ ಕಲಾಪ ಮುಗಿದ ನಂತರ ಪದ್ಮನಾಭ ನಗರದಲ್ಲಿರುವ ದೇವೇಗೌಡರ ನಿವಾಸಕ್ಕೆ ತೆರಳಿ ಅವರನ್ನು ಭೇಟಿ ಮಾಡಿದ ಸಿದ್ದರಾಮಯ್ಯ ಆರೋಗ್ಯ ವಿಚಾರಿಸಿದರು. ಸಿದ್ದರಾಮಯ್ಯ ಅವರ ಜೊತೆ ಮಾಜಿ ಸಚಿವ ಆರ್.ವಿ.ದೇಶಪಾಂಡೆ, ಶಾಸಕರಾದ ಜಮೀರ್ ಅಹ್ಮದ್ ಖಾನ್, … Continued

ಡಿ.ಕೆ.ಶಿವಕುಮಾರ ವಿರುದ್ಧದ ಆದಾಯ ತೆರಿಗೆ ಪ್ರಕರಣ: ಹೈಕೋರ್ಟ್‌ ಆದೇಶಕ್ಕೆ ಸುಪ್ರೀಂಕೋರ್ಟ್‌ ತಡೆ

ನವದೆಹಲಿ: ಸುಪ್ರೀಂಕೋರ್ಟ್ ಸೋಮವಾರ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ವಿರುದ್ಧ ಆದಾಯ ತೆರಿಗೆ ಇಲಾಖೆ ದಾಖಲಿಸಿದ್ದ ಪ್ರಕರಣವನ್ನು ರದ್ದು ಮಾಡಿದ್ದ ವಿರುದ್ಧ ಅರ್ಜಿ ಹೈಕೋರ್ಟ್‌ ಆದೇಶಕ್ಕೆ ಮಧ್ಯಂತರ ಸುಪ್ರೀಂಕೋರ್ಟ್‌ ತಡೆ ನೀಡಿದೆ. ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರಿಗೆ ಸೋಮವಾರ ನೋಟಿಸ್ ಜಾರಿ ಮಾಡಿದೆ. ಕರ್ನಾಟಕ ಹೈಕೋರ್ಟ್‌ ಆದೇಶದ ವಿರುದ್ಧ ಆದಾಯ ತೆರಿಗೆ … Continued

ಅಂಕೋಲಾ: ತೋಟದಲ್ಲಿ ಮೊಟ್ಟೆ ಇಟ್ಟಿದ್ದ ನವಿಲು ನುಂಗಿ ಬಂಧಿಯಾದ ಹೆಬ್ಬಾವು | ವೀಕ್ಷಿಸಿ

ಅಂಕೋಲಾ : ಬೃಹತ್ ಹೆಬ್ಬಾವೊಂದು ಪ್ರತಕ್ಷವಾಗಿ ಸ್ಥಳೀಯರಲ್ಲಿ ಆತಂಕಕ್ಕೆ ಕಾರಣವಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಜಮಗೋಡ್‌ನಲ್ಲಿ ಎಂಬಲ್ಲಿ ನಡೆದಿದೆ. ಜಮಗೋಡದ ವಕೀಲ ಬೀರಣ್ಣ ನಾಯಕ ಎನ್ನುವವರ ಮನೆಯ ತೋಟದಲ್ಲಿ ನವಿಲು ಮೊಟ್ಟೆ ಇಟ್ಟು ಅದರಲ್ಲಿ ಕುಳಿತಿತ್ತು. ಅದನ್ನು ಕಂಡಿದ್ದ ಸುಮಾರು 14 ಅಡಿ ಉದ್ದದ ಹೆಬ್ಬಾವು, ನವಿಲನ್ನು ಬೇಟೆಯಾಡಿ ನುಂಗಿ ಹಾಕಿದೆ. … Continued