ಎಫ್‌ಡಿಎ ನೌಕರಿ ಕೊಡಿಸುವ ಆಮಿಷ ಪ್ರಕರಣ : ಮೈಸೂರು ಪಿಎಸ್‌ಐ ಅಶ್ವಿನಿ ಅಮಾನತು

posted in: ರಾಜ್ಯ | 0

ಮೈಸೂರು: ಪ್ರಥಮ ದರ್ಜೆ ಸಹಾಯಕರ ಹುದ್ದೆ ಕೊಡಿಸಲು ಅವ್ಯವಹಾರ ನಡೆಸಿದ ಆರೋಪದ ಮೇಲೆ ಮೈಸೂರು ನರಸಿಂಹರಾಜ ಸಂಚಾರ ಪೊಲೀಸ್‌ ಠಾಣೆಯ ಪಿಎಸ್‌ಐ ಅಶ್ವಿನಿ ಅನಂತಪುರ ಅವರನ್ನು ಅಮಾನತುಗೊಳಿಸಿ ನಗರ ಪೊಲೀಸ್‌ ಆಯುಕ್ತರು ಸೋಮವಾರ ಆದೇಶ ಹೊರಡಿಸಿದ್ದಾರೆ.
ಕೆಪಿಎಸ್‌ಸಿಯ ಎಫ್‌ಡಿಎ ನೇಮಕಾತಿ ಪ್ರಕ್ರಿಯೆಯಲ್ಲಿ ಅಭ್ಯರ್ಥಿಯೊಬ್ಬರಿಗೆ ಕೆಪಿಎಸ್​ಸಿ ವತಿಯಿಂದ ನಡೆದಿದ್ದ ಪ್ರಥಮ ದರ್ಜೆ ಸಹಾಯಕರ ಪರೀಕ್ಷೆಗೆ ಅಭ್ಯರ್ಥಿ ಜತೆ ಡೀಲ್ ಮಾಡಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ ದಾಖಲೆಗಳ ಸಮೇತ ಆರೋಪ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಅಶ್ವಿನಿ ಅನಂತಪುರ ಅವರನ್ನು ಅಮಾನತು ಮಾಡಿ ನಗರ ಪೊಲೀಸ್ ಆಯುಕ್ತ ಡಾ. ಚಂದ್ರಗುಪ್ತ ಆದೇಶ ಹೊರಡಿಸಿದ್ದಾರೆ.

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189

ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ನಗರ ಪೊಲೀಸ್ ಆಯುಕ್ತರು ವಿಚಾರಣೆ ಬಾಕಿ ಇರಿಸಿ ತಕ್ಷಣ ಜಾರಿಗೆ ಬರುವಂತೆ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.
ಆರೋಪಿ ಪಿಎಸ್‌ಐ ಮಾತನಾಡಿದ್ದೆನ್ನಲಾದ ಮೊಬೈಲ್‌ ಹಾಗೂ ವಾಟ್ಸ್‌ಆಪ್‌ ಆಡಿಯೊ ಸಂಭಾಷಣೆಗಳು ಜಾಲತಾಣಗಳಲ್ಲಿ ವೈರಲ್‌ ಆಗಿದ್ದವು. ಈ ಬಗ್ಗೆ ನಗರ ಅಪರಾಧ ವಿಭಾಗದ ಎಸಿಪಿ ಪ್ರಾಥಮಿಕ ತನಿಖೆ ನಡೆಸಿದ್ದು, ಆರೋಪಗಳು ಮೇಲ್ನೋಟಕ್ಕೆ ನೈಜವೆಂದು ತಿಳಿದು ಬಂದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.

ಓದಿರಿ :-   ಹೊನ್ನಾವರ ಪರಮೇಶ ಮೇಸ್ತ ಪ್ರಕರಣ: ಹತ್ಯೆಯಲ್ಲ, ಆಕಸ್ಮಿಕ ಸಾವು ; ಸಿಬಿಐ ವರದಿ ಸಲ್ಲಿಕೆ

 

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ಟೆಲಿಗ್ರಾಮ್ ಚಾನೆಲ್ ಸೇರಿ
ವಾಟ್ಸಾಪ್ ಗ್ರೂಪ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

4 / 5. ಒಟ್ಟು ವೋಟುಗಳು 2

ನಿಮ್ಮ ಕಾಮೆಂಟ್ ಬರೆಯಿರಿ

advertisement