ಡಿಸೆಂಬರ್ ವೇಳೆಗೆ ಶಾಲೆಗಳಲ್ಲಿ ಪಠ್ಯದಲ್ಲಿ ನೈತಿಕ ಶಿಕ್ಷಣ-ಭಗವದ್ಗೀತೆ ಬೋಧನೆ: ಸಚಿವ ನಾಗೇಶ

ಬೆಂಗಳೂರು: ಪ್ರಸಕ್ತ ಸಾಲಿನಲ್ಲೇ ನೈತಿಕ ಶಿಕ್ಷಣ ಜಾರಿಗೊಳಿಸಲು ಸರ್ಕಾರ ಉದ್ದೇಶಿಸಿದ್ದು, ಇದರಲ್ಲಿ ಭಗವದ್ಗೀತೆಯ ಅಂಶಗಳೂ ಅಡಕವಾಗಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ ತಿಳಿಸಿದ್ದಾರೆ.
ಸೋಮವಾರ ಪ್ರಶ್ನೋತ್ತರ ವೇಳೆ ಬಿಜೆಪಿಯ ಎಂ.ಕೆ. ಪ್ರಾಣೇಶ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ನೈತಿಕ ಶಿಕ್ಷಣದಲ್ಲಿ ಏನೇನು ಇರಬೇಕು ಎಂಬುದರ ಬಗ್ಗೆ ತಜ್ಞರ ಸಮಿತಿ ಶಿಫಾರಸು ಮಾಡಲಿದೆ ಎಂದರು.

ಲಿಖಿತ ಉತ್ತರದಲ್ಲಿ, ಪ್ರಸ್ತುತ ಶಾಲಾ ಪಠ್ಯ ಪುಸ್ತಕಗಳಲ್ಲಿ ಭಗವದ್ಗೀತೆಯನ್ನು ಪ್ರತ್ಯೇಕವಾಗಿ ಬೋಧಿಸುವ ವಿಚಾರ ಸರ್ಕಾರದ ಮುಂದಿಲ್ಲ ಎಂದು ಹೇಳಲಾಗಿದೆ. ಹಾಗಿದ್ದರೆ ಭಗವದ್ಗೀತೆ ಕಲಿಸುವುದಾಗಿ ಹೇಳಲು ಮುಜುಗರವೇ ಎಂಬ ಪ್ರಾಣೇಶ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು ಪ್ರಸಕ್ತ ಸಾಲಿನಲ್ಲಿ ಪ್ರತ್ಯೇಕವಾಗಿ ಬೋಧಿಸುತ್ತಿಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದೇವೆ ಎಂದರು.
ಡಿಸೆಂಬರ್ ವೇಳೆಗೆ ನೈತಿಕ ಶಿಕ್ಷಣ ಶಾಲೆಗಳಲ್ಲಿ ಪ್ರಾರಂಭ ಮಾಡಲಾಗುವುದು ಎಂದ ಅವರು ಇತಿಹಾಸದ ತಪ್ಪುಗಳನ್ನು ಪಠ್ಯದಲ್ಲಿ ಸರಿ ಮಾಡುವ ಕೆಲಸ ಮಾಡಲಾಗಿದೆ. ಬಾಬಾ ಬುಡನ್ ಗಿರಿ ಹೆಸರನ್ನು ದತ್ತಾತ್ರೇಯ ಪೀಠ ಎಂದು ಬದಲಾವಣೆ ಮಾಡಲಾಗಿದೆ ಎಂದು ತಿಳಿಸಿದರು

ಪ್ರಮುಖ ಸುದ್ದಿ :-   ಮತಗಟ್ಟೆ ಬಳಿ ಮಹಿಳೆಗೆ ಹೃದಯಾಘಾತ ; ತಕ್ಷಣವೇ ಸಿಪಿಆರ್‌ ಮಾಡಿ ಜೀವ ಉಳಿಸಿದ ಮತದಾನ ಮಾಡಲು ಬಂದಿದ್ದ ವೈದ್ಯ

1 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement