ಪಶ್ಚಿಮ ಬಂಗಾಳದ ನಂದಿಗ್ರಾಮದಲ್ಲಿ ಮಮತಾ ಬ್ಯಾನರ್ಜಿಗೆ ತೀವ್ರ ಹಿನ್ನಡೆ: ಪ್ರಮುಖ ಚುನಾವಣೆಗಳಲ್ಲಿ ಬಿಜೆಪಿಗೆ ಭಾರೀ ಜಯ

ಕೋಲ್ಕತ್ತಾ: ತೃಣಮೂಲ ಕಾಂಗ್ರೆಸ್ ಭದ್ರಕೋಟೆಯಾದ ನಂದಿಗ್ರಾಮದಲ್ಲಿ ನಡೆದ ಸಹಕಾರಿ ಸಂಸ್ಥೆಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ.
ಮಮತಾ ಬ್ಯಾನರ್ಜಿಗೆ ಭಾರಿ ಹೊಡೆತ ನೀಡಿದ್ದ ಈ ಕ್ಷೇತ್ರದಲ್ಲಿ, 2021 ರಲ್ಲಿ ಬಂಗಾಳದ ಮುಖ್ಯಮಂತ್ರಿಯನ್ನು ಸೋಲಿಸಿ ಬಿಜೆಪಿಯ ಸುವೇಂದು ಅಧಿಕಾರಿ ಗೆಲುವು ಸಾಧಿಸಿದ್ದರು. ಈ ಹಿಂದೆ ಮಮತಾ ಬ್ಯಾನರ್ಜಿ ಅವರ ತೃಣಮೂಲ ನಡೆಸುತ್ತಿದ್ದ ಸಹಕಾರಿ ಸಂಸ್ಥೆ ಭೆಕುಟಿಯಾ ಸಮಬಾಯ್ ಕೃಷಿ ಸಮಿತಿಯ 12 ಸ್ಥಾನಗಳಲ್ಲಿ ಬಿಜೆಪಿ 11 ಸ್ಥಾನಗಳನ್ನು ಗೆದ್ದಿದೆ. ಭಾನುವಾರ ನಡೆದ ಚುನಾವಣೆಯಲ್ಲಿ ಕೇವಲ ಒಂದು ಸ್ಥಾನ ಮಾತ್ರ ತೃಣಮೂಲ ಪಾಲಾಯಿತು.
ಚುನಾವಣೆಯಲ್ಲಿ ಎರಡೂ ಪಕ್ಷಗಳು ಪರಸ್ಪರ ಹಿಂಸಾಚಾರದ ಆರೋಪಗಳನ್ನು ಮಾಡಿಕೊಂಡಿದ್ದವು. ತೃಣಮೂಲ ಹೊರಗಿನವರನ್ನು ಕರೆತಂದು ಮತದಾನಕ್ಕೆ ಅಡ್ಡಿಪಡಿಸಲು ಪ್ರಯತ್ನಿಸುತ್ತಿದೆ ಎಂದು ಬಿಜೆಪಿ ಆರೋಪಿಸಿದೆ.

ನಂದಿಗ್ರಾಮ 2021 ರ ಬಂಗಾಳ ಚುನಾವಣೆಗೆ ತಿಂಗಳ ಮೊದಲು ತೃಣಮೂಲವನ್ನು ತೊರೆದು ಬಿಜೆಪಿಗೆ ಸೇರಿದ ಮಮತಾ ಬ್ಯಾನರ್ಜಿ ಅವರ ಮಾಜಿ ಆಪ್ತ ಸುವೇಂದು ಅಧಿಕಾರಿ ಅವರ ಕ್ಷೇತ್ರವಾಗಿದೆ.
ಮಮತಾ ಬ್ಯಾನರ್ಜಿ ಅವರು ರಾಜ್ಯ ಚುನಾವಣೆಯಲ್ಲಿ ಗೆದ್ದರು, ಮೂರನೇ ಬಾರಿಗೆ ಮುಖ್ಯಮಂತ್ರಿಯಾದರು, ಆದರೆ ಅವರು ಬಂಗಾಳದಲ್ಲಿ ಅಧಿಕಾರಕ್ಕೆ ಏರಲು ಕಾರಣವಾದ ಜಿಲ್ಲೆಯ ನಂದಿಗ್ರಾಮಲ್ಲಿ ಸುವೇಂದು ಅಧಿಕಾರಿ ಜೊತೆಗಿನ ಪ್ರತಿಷ್ಠೆಯ ಯುದ್ಧದಲ್ಲಿ ಸೋತಿದ್ದರು.
ನಂದಿಗ್ರಾಮದಲ್ಲಿನ ಸಹಕಾರಿ ಸಂಸ್ಥೆ ಚುನಾವಣೆಯಲ್ಲಿ ಅವರ ಹಿನ್ನಡೆ ಅನುಭವಿಸ್ದು, ಬಿಜೆಪಿ ನಾಯಕರು ಈ ಫಲಿತಾಂಶವನ್ನು ಬಂಗಾಳದ ಪ್ರಮುಖ ಭದ್ರಕೋಟೆಗಳಲ್ಲಿ ತನ್ನ ಹಿಡಿತವನ್ನು ಕಳೆದುಕೊಳ್ಳುತ್ತಿರುವ ಸಂಕೇತವೆಂದು ಬಿಂಬಿಸಿದ್ದಾರೆ.

ಪ್ರಮುಖ ಸುದ್ದಿ :-   ಕೋಟಕ್‌ ಮಹೀಂದ್ರಾ ಬ್ಯಾಂಕಿಗೆ ಆರ್‌ಬಿಐ ನಿರ್ಬಂಧ : ಹೊಸ ಗ್ರಾಹಕರ ಆನ್‌ಲೈನ್‌ ಸೇರ್ಪಡೆ, ಹೊಸ ಕ್ರೆಡಿಟ್‌ ಕಾರ್ಡ್‌ ವಿತರಣೆಗೆ ಬ್ರೇಕ್‌

3 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement